Rahul Dravid : ಟಿ20 ವಿಶ್ವಕಪ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ತೊರೆದ ಕೋಚ್ ದ್ರಾವಿಡ್

ಅಡಿಲೇಡ್: ಐಸಿಸಿ ಟಿ20 ವಿಶ್ವಕಪ್ (T2o World Cup) ಸೆಮಿಫೈನಲ್’ನಲ್ಲಿ ಭಾರತ ಸೋಲು ಕಾಣುತ್ತಿದ್ದಂತೆ ಕೋಚ್ (Rahul Dravid)ರಾಹುಲ್ ದ್ರಾವಿಡ್ (Team India coach Rahul Dravid) ಟೀಮ್ ಇಂಡಿಯಾ ಪಾಳೆಯ ತೊರೆದಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾದಿಂದ ನೇರವಾಗಿ ನ್ಯೂಜಿಲೆಂಡ್’ಗೆ ತೆರಳಲಿದ್ದು ಅಲ್ಲಿ ಆತಿಥೇಯರ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಹಾಗೂ ಚಿ20 ಸರಣಿಯನ್ನಾಡಲಿದ್ದಾರೆ.

ಆದರೆ ನ್ಯೂಜಿಲೆಂಡ್ ಪ್ರವಾಸಕ್ಕೆ ಕೋಚ್ ರಾಹುಲ್ ದ್ರಾವಿಡ್ ತೆರಳುತ್ತಿಲ್ಲ. ಆಸ್ಟ್ರೇಲಿಯಾದಿಂದ ದ್ರಾವಿಡ್ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದು, ಕೆಲ ದಿನಗಳ ಕಾಲ ಕ್ರಿಕೆಟ್’ನಿಂದ ಬ್ರೇಕ್ ಪಡೆಯಲಿದ್ದಾರೆ. ದ್ರಾವಿಡ್ ಅವರ ಅನುಪಸ್ಥಿತಿಯಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (National Cricket Academy – NCA) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ (VVS Laxman) ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ವಿಶ್ವಕಪ್ ತಂಡದಲ್ಲಿ ಭಾರತ ತಂಡದ ಸಹಾಯಕ ಸಿಬ್ಬಂದಿಗೆ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಲಾಗಿದ್ದು, ವಿವಿಎಸ್ ಲಕ್ಷ್ಮಣ್ ಜೊತೆ NCA ಬ್ಯಾಟಿಂಗ್ ಕೋಚ್ ಹೃಷಿಕೇಶ್ ಕಾನಿಟ್ಕರ್ ಮತ್ತು ಬೌಲಿಂಗ್ ಸಾಯಿರಾಜ್ ಬಹುತುಳೆ ಕೂಡ ನ್ಯೂಜಿಲೆಂಡ್’ಗೆ ತೆರಳಲಿದ್ದಾರೆ.

ನ್ಯೂಜಿಲೆಂಡ್ ಪ್ರವಾಸಕ್ಕೆ ನಾಯಕ ರೋಹಿತ್ ಶರ್ಮಾ, ಸೀನಿಯರ್ ಬ್ಯಾಟರ್’ಗಳಾದ ವಿರಾಟ್ ಕೊಹ್ಲಿ ಮತ್ತು ಕೆ.ಎಲ್ ರಾಹುಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದರೆ, ಏಕದಿನ ಸರಣಿಯಲ್ಲಿ ಶಿಖರ್ ಧವನ್ ಭಾರತ ತಂಡದ ಸಾರಥ್ಯ ವಹಿಸಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಭಾರತ ಮೊದಲು ಟಿ20 ಸರಣಿಯನ್ನಾಡಲಿದ್ದು, ಮೊದಲ ಟಿ20 ಪಂದ್ಯ ನವೆಂಬರ್ 18ರಂದು ವೆಲ್ಲಿಂಗ್ಟನ್’ನಲ್ಲಿ ನಡೆಯಲಿದೆ. ಟಿ20 ಸರಣಿಯ ನಂತರ ಕಿವೀಸ್ ನಾಡಿನಲ್ಲಿ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

ಭಾರತ Vs ನ್ಯೂಜಿಲೆಂಡ್ ಟಿ20 ಸರಣಿಯ ವೇಳಾಪಟ್ಟಿ
ಮೊದಲ ಟಿ20: ನವೆಂಬರ್ 18 (ವೆಲ್ಲಿಂಗ್ಟನ್)
2ನೇ ಟಿ20: ನವೆಂಬರ್ 20 (ಮೌಂಟ್ ಮೌಂಗ್’ನುಯ್)
3ನೇ ಟಿ20: ನವೆಂಬರ್ 22 (ನೇಪಿಯರ್)

ಭಾರತ Vs ನ್ಯೂಜಿಲೆಂಡ್ ಏಕದಿನ ಸರಣಿಯ ವೇಳಾಪಟ್ಟಿ
ಮೊದಲ ಏಕದಿನ: ನವೆಂಬರ್ 25 (ಆಕ್ಲೆಂಡ್)
2ನೇ ಏಕದಿನ: ನವೆಂಬರ್ 27 (ಹ್ಯಾಮಿಲ್ಟನ್)
3ನೇ ಏಕದಿನ: ನವೆಂಬರ್ 30 (ಕ್ರೈಸ್’ಚರ್ಚ್)

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ (India Vs New Zeeland T20 series):
ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ಇದನ್ನೂ ಓದಿ : Gautam Gambhir : T20 ವಿಶ್ವಕಪ್ ನಿಂದ ಹೊರಬಿದ್ದ ಭಾರತ : ಗೌತಮ್ ಗಂಭೀರ್ ರಹಸ್ಯ ಪೋಸ್ಟ್

ಇದನ್ನೂ ಓದಿ : Virat Kohli : ಕ್ಷಮಿಸಿ ಬಿಡು ಕೊಹ್ಲಿ… ನಿನ್ನ ಆಟಕ್ಕೆ ಕೊನೆಗೂ ನ್ಯಾಯ ಸಿಗಲಿಲ್ಲ

ಇದನ್ನೂ ಓದಿ : Semi-final phobia for India: ಭಾರತಕ್ಕೆ ಸೆಮೀಸ್ ಫೋಬಿಯಾ. 7 ವರ್ಷಗಳಲ್ಲಿ 4 ವಿಶ್ವಕಪ್ ಸೆಮಿಫೈನಲ್ ಸೋತ ಟೀಮ್ ಇಂಡಿಯಾ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ (India Vs New Zeeland ODI series):
ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಹರ್, ಕುಲ್ದೀಪ್ ಸೇನ್, ಉಮ್ರಾನ್ ಮಲಿಕ್.

Rahul Dravid: Coach Dravid left Team India after the T20 World Cup defeat

Comments are closed.