India vs Pakistan Rain threat : ಭಾರತ Vs ಪಾಕಿಸ್ತಾನ ಪಂದ್ಯದ ಮೇಲೆ ಮಳೆಯ ಕರಿನೆರಳು, ಭಾನುವಾರ 80% ಮಳೆ ಪಕ್ಕಾ

ಮೆಲ್ಬೋರ್ನ್: India vs Pakistan Rain threat: ಇಡೀ ಕ್ರಿಕೆಟ್ ಜಗತ್ತಿನ ಕಣ್ಣು ಭಾನುವಾರ ನಡೆಯುವ ಟಿ20 ವಿಶ್ವಕಪ್ ಪಂದ್ಯದ ಮೇಲೆ ನೆಟ್ಟಿದೆ. ಸಾಂಪ್ರದಾಯಿಕ ಎದುರಾಳಿಗಳ ಈ ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ (Melbourne Cricket Ground) ಆತಿಥ್ಯ ವಹಿಸಲಿದೆ. ಭಾರತ Vs ಪಾಕ್ ಮೆಗಾ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿರುವ ಹೊತ್ತಲ್ಲಿ ಆಘಾತಕಾರಿ ಸುದ್ದಿಯೊಂದು ಮೆಲ್ಬೋರ್ನ್’ನಿಂದ ಹೊರ ಬಿದ್ದಿದೆ. ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದ್ದು, ಮೆಲ್ಬೋರ್ನ್’ ನಲ್ಲಿ ಭಾನುವಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಮಳೆಯ ಸಾಧ್ಯತೆಯ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ 80% ಮಳೆ ಪಕ್ಕಾ ಎಂದಿದೆ.

ಬ್ರಿಸ್ಬೇನ್’ನ ಗಾಬಾ ಮೈದಾನದಲ್ಲಿ ಬುಧವಾರ ನಡೆಯಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಭ್ಯಾಸ ಪಂದ್ಯ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮಳೆಯ ಆತಂಕ ಎದುರಾಗಿದೆ.

ವೆದರ್ ಫೋರ್’ಕಾಸ್ಟ್ (Melbourne weather forecast) ಪ್ರಕಾರ ಮೆಲ್ಬೋರ್ನ್’ನಲ್ಲಿ ಭಾನುವಾರ ಬೆಳಗ್ಗೆ ಮತ್ತು ಸಂಜೆ ಮಳೆಯಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಯಾವುದೇ ಮೀಸಲು ದಿನ ಇರುವುದಿಲ್ಲ. ಹೀಗಾಗಿ ಉಭಯ ತಂಡಗಳು ಅಂಕಗಳನ್ನು ಹಂಚಿಕೊಳ್ಳಲಿವೆ.

ಭಾರತ Vs ಪಾಕಿಸ್ತಾನ ಪಂದ್ಯದ ಟಿಕೆಟ್’ಗಳು ಈಗಾಗ್ಲೇ ಸೋಲ್ಡ್ ಔಟ್ ಆಗಿದ್ದು, ಸುಮಾರು 50 ಸಾವಿರ ಮಂದಿ ಟಿಕೆಟ್ ಖರೀದಿಸಿದ್ದಾರೆ. ಈ ಪಂದ್ಯವನ್ನು ಜಗತ್ತಿನಾದ್ಯಂತ ಕ್ರಿಕೆಟ್ ಪ್ರಿಯರು ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಭಾರತದ ಪಾಲಿಗಂತೂ ಇದು ತುಂಬಾ ಮಹತ್ವದ ಪಂದ್ಯ. 2021ರ ಐಸಿಸಿ ಟಿ20 ವಿಶ್ವಕಪ್’ನ ತನ್ನ ಮೊದಲ ಪಂದ್ಯದಲ್ಲೇ ಪಾಕಿಸ್ತಾನ ವಿರುದ್ಧ ಸೋತಿದ್ದ ಭಾರತ, ಆ ಸೋಲಿಗೆ ಈಗ ಸೇಡು ತೀರಿಸಿಕೊಳ್ಳುವ ಗುರಿಯಲ್ಲಿದೆ. 2021ರಲ್ಲಿ ದುಬೈನಲ್ಲಿ ನಡೆದ ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್’ಗಳ ಹೀನಾಯ ಸೋಲು ಕಂಡಿತ್ತು.

ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ವರ್ಷದೊಳಗೆ ನಾಲ್ಕನೇ ಬಾರಿ ಮುಖಾಮುಖಿಯಾಗುತ್ತಿವೆ. ಕಳೆದ ಟಿ20 ವಿಶ್ವಕಪ್ ನಂತರ ಸಾಂಪ್ರದಾಯಿಕ ಎದುರಾಳಿಗಳು ಏಷ್ಯಾ ಕಪ್ ಟೂರ್ನಿಯಲ್ಲಿ ಎರಡು ಬಾರಿ ಎದುರಾಗಿದ್ದವು. ಅಲ್ಲಿ ಒಮ್ಮೆ ಭಾರತ ಗೆದ್ದರೆ, ಮತ್ತೊಮ್ಮೆ ಪಾಕಿಸ್ತಾನ ಗೆದ್ದಿತ್ತು.

ಇದನ್ನೂ ಓದಿ : Mohammed Shami Shaheen Shah Afridi : ಪಾಕ್ ವೇಗಿ ಶಾಹೀನ್ ಅಫ್ರಿದಿಗೆ ಬೌಲಿಂಗ್ ಟಿಪ್ಸ್ ನೀಡಿದ ಮೊಹಮ್ಮದ್ ಶಮಿ

ಇದನ್ನೂ ಓದಿ : BCCI vs PCB: “ನೀವು ಪಾಕಿಸ್ತಾನಕ್ಕೆ ಬರದಿದ್ದರೆ, ನಾವು ವಿಶ್ವಕಪ್ ಆಡಲು ಭಾರತಕ್ಕೆ ಬರಲ್ಲ” ಬಿಸಿಸಿಐಗೆ ಪಾಕ್ ಕ್ರಿಕೆಟ್ ಬೋರ್ಡ್ ಧಮ್ಕಿ

Rain threat India vs Pakistan Match Melbourne t20 world cup

Comments are closed.