RCB Vs Rajasthan Royals : ನಾಳೆ ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ Vs ರಾಜಸ್ಥಾನ್ ರಾಯಲ್ ಮ್ಯಾಚ್, ಪಂದ್ಯಕ್ಕೆ ಆಗಮಿಸಲಿದ್ದಾರೆ ವಿಶೇಷ ಅತಿಥಿ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಹಾಗೂ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡಗಳ ಮಧ್ಯೆ ನಾಳೆ (ಭಾನುವಾರ) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ನಾಳೆ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿರುವ (RCB Vs Rajasthan Royals) ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು, ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲ್ಲುವ ವಿಶ್ವಾಸದಲ್ಲಿದೆ.

ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 24 ರನ್’ಗಳ ಗೆಲುವು ದಾಖಲಿಸಿದ್ದ ಆರ್’ಸಿಬಿ ಲೀಗ್’ನಲ್ಲಿ 4ನೇ ಗೆಲುವನ್ನು ಎದುರು ನೋಡುತ್ತಿದೆ. ಸದ್ಯ ರಾಯಲ್ ಚಾಲೆಂಜರ್ಸ್ ತಂಡ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು ಹಾಗೂ 3 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಆಡಿರುವ 6 ಪಂದ್ಯಗಳಲ್ಲಿ 4 ಗೆಲುವು ಹಾಗೂ 2 ಸೋಲಿನೊಂದಿಗ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ವಿಶೇಷ ಅತಿಥಿಯೊಬ್ಬರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ. ಅವರು ಬೇರಾರೂ ಅಲ್ಲ, ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ, ಕರ್ನಾಟಕದ ಯುವ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ (Prasidh Krishna). ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ಪ್ರಸಿದ್ಧ್ ಕೃಷ್ಣ ಈ ಬಾರಿಯ ಐಪಿಎಲ್’ನಿಂದ ಹೊರಗುಳಿದಿದ್ದಾರೆ.

ಇದನ್ನೂ ಓದಿ : MS Dhoni world record : 42ನೇ ವಯಸ್ಸಿನಲ್ಲಿ ವಿಶ್ವದಾಖಲೆ ಪುಡಿಗಟ್ಟಿದ ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ

ಇದನ್ನೂ ಓದಿ : Dhoni retirement secret : ಐಪಿಎಲ್ ಬಳಿಕ ರಿಟೈರ್ಡ್ ಆಗ್ತಾರಾ ಧೋನಿ..? “ನಿವೃತ್ತಿಯ ಸುಳಿವು ಕೊಟ್ಟ ಚೆನ್ನೈ “ತಲಾ”

ಇದೀಗ ರಾಜಸ್ಥಾನ್ ರಾಯಲ್ಸ್ ತಂಡ ಬೆಂಗಳೂರಿನಲ್ಲಿ ಆರ್’ಸಿಬಿ ವಿರುದ್ಧ ಐಪಿಎಲ್ ಪಂದ್ಯವಾಡುತ್ತಿರುವ ಕಾರಣ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಪ್ರಸಿದ್ಧ್ ಕೃಷ್ಣ ಆಗಮಿಸಿದ್ದಾರೆ. ಈಗಾಗಲೇ ಬೆಂಗಳೂರಿನ ಖಾಸಗಿ ಹೋಟೆಲ್’ನಲ್ಲಿ ತಂಗಿರುವ ರಾಜಸ್ಥಾನ್ ರಾಯಲ್ಸ್ ಆಟಗಾರರನ್ನು ಪ್ರಸಿದ್ಧ್ ಕೃಷ್ಣ ಶುಕ್ರವಾರ ರಾತ್ರಿ ಭೇಟಿ ಮಾಡಿದ್ದಾರೆ. ಅಷ್ಟೇ ಅಲ್ಲ, ರಾಯಲ್ಸ್ ತಂಡದ ಹೆಡ್ ಕೋಚ್ ಕುಮಾರ ಸಂಗಕ್ಕಾರ ಅವರನ್ನು ಭೇಟಿ ಮಾಡಿ ತಮ್ಮ ಹೆಸರಿನ ಟೀಮ್ ಜರ್ಸಿ ಪಡೆದಿದ್ದಾರೆ. ಭಾನುವಾರದ ಪಂದ್ಯದಲ್ಲಿ ಪ್ರಸಿದ್ಧ್ ಕೃಷ್ಣ ರಾಜಸ್ಥಾನ್ ರಾಯಲ್ಸ್ ಜರ್ಸಿ ಧರಿಸಿ ಕ್ರೀಡಾಂಗಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ 27 ವರ್ಷದ ಪ್ರಸಿದ್ಧ್ ಕೃಷ್ಣ ಕೆಲ ತಿಂಗಳುಗಳ ಹಿಂದೆ ನ್ಯೂಜಿಲೆಂಡ್’ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

RCB Vs Rajasthan Royals : RCB Vs Rajasthan Royals match tomorrow at Chinnaswamy, special guest will arrive for the match

Comments are closed.