Rishabh Pant car accident : ಉರಿಯುತ್ತಿದ್ದ ಕಾರಿನಿಂದ ರಿಷಭ್ ಪಂತ್‌ನನ್ನು ಹೊರಗೆಳೆದು ಪ್ರಾಣ ಉಳಿಸಿದ್ದು ಬಸ್ ಡ್ರೈವರ್

ಡೆಹ್ರಾಡೂನ್: ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ರಿಷಭ್ ಪಂತ್ ಭೀಕರ ಕಾರು ಅಪಘಾತದಲ್ಲಿ (Rishabh Pant car accident) ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿಚಾರ ನಿಮ್ಗೆ ಗೊತ್ತೇ ಇದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ರಿಷಭ್ ಪಂತ್ ಅವರ ಪ್ರಾಣ ಉಳಿಸಿದ್ದು ಒಬ್ಬ (Bus Driver Rescued Rishabh Pant) ಟ್ರಕ್ ಡ್ರೈವರ್.

ರಿಷಭ್ ಪಂತ್ ಚಲಾಯಿಸುತ್ತಿದ್ದ ಮರ್ಸಿಡಿಸ್ ಐಷಾರಾಮಿ ಕಾರು ಶುಕ್ರವಾರ ಬೆಳಗ್ಗೆ ಐದೂವರೆಗೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ರೂರ್ಕಿಯ ನರ್ಸನ್ ಬಳಿಯಿರುವ ಹಮ್ಜದ್’ಪುರ ಸಮೀರ ರಸ್ತೆ ಡಿವೈಡರ್’ಗೆ ಡಿಕ್ಕಿ ಹೊಡೆದಿತ್ತು. ಹೈಸ್ಪೀಡ್’ನಲ್ಲಿದ್ದ ಕಾರು ಡಿವೈಡರ್’ಗೆ ಬಂದಪ್ಪಳಿಸಿದ ಪರಿಣಾಮ ಕಾರು ಚಲಾಯಿಸುತ್ತಿದ್ದ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಿಷಭ್ ಪಂತ್ ಅತ್ಯಂತ ವೇಗವಾಗಿ ಕಾರು ಚಲಾಯಿಸುತ್ತಿದ್ದರು. ಬೆಳ್ಳಂಬೆಳಗ್ಗೆ ಡೆಹ್ರಾಡೂನ್’ನಲ್ಲಿ ತಾಯಿ ಮತ್ತು ತಂಗಿಯನ್ನು ಭೇಟಿಯಾಗಲು ದೆಹಲಿಯಿಂದ ಡೆಹ್ರಾಡೂನ್’ಗೆ ಹೊರಟಿದ್ದ ರಿಷಭ್ ಪಂತ್, ಸ್ವತಃ ತಾವೇ ಕಾರು ಚಲಾಯಿಸುತ್ತಿದ್ದರು. ಮುಂಜಾನೆಯಾಗಿದ್ದ ಕಾರಣ ನಿದ್ದೆಯ ಮಂಪರಿನಲ್ಲಿದ್ದ ಪಂತ್ ಎಚ್ಚರ ತಪ್ಪಿದ ಕಾರಣ ಕಾರು ಡಿವೈಡರ್’ಗೆ ಅಪ್ಪಳಿಸಿತ್ತು.

ಇದನ್ನೂ ಓದಿ : Rishabh Pant deadly accident : ಭೀಕರ ಅಪಘಾತದಲ್ಲಿ ರಿಷಭ್ ಪಂತ್ ಬದುಕುಳಿದದ್ದೇ ಹೆಚ್ಚು, ಡೆಡ್ಲಿ ಆ್ಯಕ್ಸಿಡೆಂಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇದನ್ನೂ ಓದಿ : Rishabh Pant car accident: ಕಾರು ಅಪಘಾತದಲ್ಲಿ ಗಂಭೀರ ಗಾಯ; ರಿಷಭ್ ಪಂತ್ ಚೇತರಿಕೆಗೆ ಕ್ರಿಕೆಟ್ ದಿಗ್ಗಜರ ಹಾರೈಕೆ

ಇದನ್ನೂ ಓದಿ : Rishabh Pant injured : ಡಿವೈಡರ್ ಗೆ ಕಾರು ಢಿಕ್ಕಿ : ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಗೆ ಗಂಭೀರ ಗಾಯ

ಅಪಘಾತ ನಡೆದ ಕೂಡಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ರಿಷಭ್ ಪಂತ್ ಸುಟ್ಟು ಕರಕಲಾಗುವ ಮೊದಲೇ ಹರ್ಯಾಣದ ಟ್ರಕ್ ಡ್ರೈವರ್ ಒಬ್ಬರು ಪಂತ್ ಅವರನ್ನು ಕಾರಿನಿಂದ ಹೊರಗೆಳೆದು ಪ್ರಾಣ ಉಳಿಸಿದ್ದಾರೆ. ಪಂತ್ ಜೀವ ಉಳಿಸಿದ ಆ ಡ್ರೈವರ್ ಹೆಸರು ಸುಶೀಲ್ ಕುಮಾರ್. ಪಂತ್ ಅವರನ್ನು ಉರಿಯುತ್ತಿದ್ದ ಕಾರಿನಿಂದ ಹೊರಗೆಳೆದ ಸುಶೀಲ್ ಕುಮಾರ್, ಪಂತ್ ದೇಹಕ್ಕೆ ಬೆಡ್ ಶೀಟ್ ಸುತ್ತಿ ಬೆಂಕಿ ಆರಿಸಿದ್ದಾರೆ. ನಂತರ ಆಂಬ್ಯುಲೆನ್ಸ್’ಗೆ ಕರೆ ಮಾಡಿ ಆಸ್ಪತ್ರೆಗೆ ಸೇರಿಸಿದ್ದಾರೆ. ಸುಶೀಲ್ ಕುಮಾರ್ ಅವರ ಸಾಹಸಕ್ಕೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೆಚ್ಚುಗೆ ವ್ಯಕ್ತಪಡಿಸಿದ್ದು, “ಸುಶೀಲ್ ಜೀ, ನಿಮ್ಮ ನಿಸ್ವಾರ್ಥ ಸೇವೆಗಾಗಿ ನಾವು ನಿಮಗೆ ಋಣಿಯಾಗಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ಅಪಘಾತದಲ್ಲಿ ರಿಷಭ್ ಪಂತ್ ಅವರ ಮೊಣಕಾಲು, ಬೆನ್ನು ಮೂಳೆಗೆ ಹಾನಿಯಾಗಿದೆ. ತಲೆ ಮತ್ತು ಬೆನ್ನಿನ ಭಾಗದಲ್ಲಿ ಗಾಯಗಳಾಗಿದ್ದು, ಡೆಹ್ರಾಡೂನ್’ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Rishabh Pant car accident: Bus driver saved Rishabh Pant’s life by pulling him out of the burning car.

Comments are closed.