ಸೋಮವಾರ, ಏಪ್ರಿಲ್ 28, 2025
HomeSportsCricketRoger Binny BCCI president : ಬಿಸಿಸಿಐನ 36ನೇ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಅವಿರೋಧ...

Roger Binny BCCI president : ಬಿಸಿಸಿಐನ 36ನೇ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಅವಿರೋಧ ಆಯ್ಕೆ

- Advertisement -

ಮುಂಬೈ: 1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ, ರಾಜ್ಯದ ದಿಗ್ಗಜ ಕ್ರಿಕೆಟಿಗರಲ್ಲೊಬ್ಬರಾದ ರೋಜರ್ ಬಿನ್ನಿ (Roger Binny BCCI president) ಬಿಸಿಸಿಐನ 36ನೇ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಸಿಸಿಐ (BCCI) ಅಧ್ಯಕ್ಷ ಸ್ಥಾನಕ್ಕೆ 67 ವರ್ಷದ ರೋಜರ್ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದ ಕಾರಣ, ಜಗತ್ತಿನ ಅತ್ಯಂತ ಶ್ರೀಮಂತ ಮಂಡಳಿಯ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ವಾರ್ಷಿಕ ಮಹಾಸಭೆಯ ನಂತರ ಬಿನ್ನಿ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಇದುವರೆಗೆ ಬಂಗಾಳದ ಹುಲಿ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದರು. ಮತ್ತೊಂದು ಅವಧಿಗೆ ಮುಂದುವರಿಯಲು ಬಯಸಿದ್ದ ಗಂಗೂಲಿಗೆ ಬಿಸಿಸಿಐ ಪದಾಧಿಕಾರಿಗಳ ಬೆಂಬಲ ಸಿಕ್ಕಿರಲಿಲ್ಲ.

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ ಆಯ್ಕೆಯಾಗಿರುವ ಕಾರಣ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಸದ್ಯದಲ್ಲೇ ರಾಜೀನಾಮೆ ನೀಡಲಿದ್ದಾರೆ. 1983ರ ವಿಶ್ವಕಪ್’ನಲ್ಲಿ ಭಾರತ ಚಾಂಪಿಯನ್ ಆಗುವಲ್ಲಿ ಬಿನ್ನಿಯವರ ಪಾತ್ರ ಮಹತ್ವದ್ದಾಗಿತ್ತು. ಆ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿದ್ದ ಬಲಗೈ ಆಲ್ರೌಂಡರ್ ಬಿನ್ನಿ, ಟೂರ್ನಿಯಲ್ಲೇ ಗರಿಷ್ಠ 18 ವಿಕೆಟ್ ಪಡೆದಿದ್ದರು. ಈ ಹಿಂದೆ ಸಂದೀಪ್ ಪಾಟೀಲ್ ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದಾಗ, ಬಿನ್ನಿ ಆ ತಂಡದಲ್ಲಿದ್ದರು.

ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ಜಯ್ ಶಾ (Jay Shah) ಮುಂದುವರಿದಿದ್ದಾರೆ. ಕಾರ್ಯದರ್ಶಿ ಸ್ಥಾನಕ್ಕೂ ಜಯ್ ಶಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಅವರ ಆಯ್ಕೆಯೂ ಅವಿರೋಧವಾಗಿ ಆಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಯಾಗಿ ರಾಜೀವ್ ಶುಕ್ಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತ ಬಿಸಿಸಿಐನಿಂದ ಹೊರ ಬಿದ್ದಿರುವ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಬಂಗಾಳ ಕ್ರಿಕೆಟ್ ಸಂಸ್ಥೆಯ (Cricket Association of Bengal) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಮುಂದಾಗಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸಲಿರುವ ಗಂಗೂಲಿ, ತವರು ಕ್ರಿಕೆಟ್ ಸಂಸ್ಥೆಗೆ ಮರಳಲು ಸಜ್ಜಾಗಿದ್ದಾರೆ.

ಇದನ್ನೂ ಓದಿ : T20 World Cup 2022 : ಆಟಗಾರರಿಗೆ ಬಿಗ್ ರಿಲೀಫ್, ಕೋವಿಡ್ ಪಾಸಿಟಿವ್ ಬಂದರೂ ವಿಶ್ವಕಪ್‌ನಲ್ಲಿ ಆಡಬಹುದು

ಇದನ್ನೂ ಓದಿ : Virat Kohli fitness report : ವಿರಾಟ್ ಕೊಹ್ಲಿ ಫಿಟ್ನೆಸ್ ‘ಕಿಂಗ್’, NCA ವರದಿಯಲ್ಲಿ ಕೊಹ್ಲಿ ಫಿಟ್ನೆಸ್ ಸೀಕ್ರೆಟ್ ರಿವೀಲ್

Roger Binny elected as BCCI president

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular