Binny BCCI President : ಕನ್ನಡಿಗನಿಗೆ ಕ್ರಿಕೆಟ್ ಬಿಗ್ ಬಾಸ್ ಪಟ್ಟ..? ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರೋಜರ್ ಬಿನ್ನಿ !

ಮುಂಬೈ: (Roger Binny Sourav Ganguly) ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರೋಜರ್ ಬಿನ್ನಿ, ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿ, ಬಿಸಿಸಿಐ (BCCI) ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. 1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿರುವ 67 ವರ್ಷದ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಯಾಗುವ ಸಾಧ್ಯತೆಯಿದೆ ಎಂದು ಬಿಸಿಸಿಐನ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ.

“ರೋಜರ್ ಬಿನ್ನಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ನಾನು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ಜಯ್ ಶಾ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ರೆ, ಆಶಿಶ್ ಶೆಲ್ಲರ್ ಖಜಾಂಚಿ ಸ್ಥಾನಕ್ಕೆ ಮತ್ತು ದೇವಜಿತ್ ಸೈಕಿಯಾ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ” ಎಂದು ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ. ರೋಜರ್ ಬಿನ್ನಿಯವರ ಹೊರತಾಗಿ ಈ ಕ್ಷಣದವರೆಗೆ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ನಾಮಪತ್ರ ಸಲ್ಲಿಸಲು ಬುಧವಾರ ಅಂತಿಮ ದಿನವಾಗಿದ್ದು, ಈ ಕ್ಷಣದವರೆಗೆ ರೋಜರ್ ಬಿನ್ನಿ ಒಬ್ಬರೇ ಕಣದಲ್ಲಿದ್ದಾರೆ. ಅಕ್ಟೋಬರ್ 18ರಂದು ಮುಂಬೈನಲ್ಲಿ ಬಿಸಿಸಿಐ ವಾರ್ಷಿಕ ಮಹಾಸಭೆ ನಡೆಯಲಿದ್ದು, ಅವತ್ತೇ ಚುನಾವಣೆ ನಡೆಯಲಿದೆ.

ಬಿಸಿಸಿಐ ಹಾಲಿ ಖಜಾಂಚಿಯಾಗಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಹೋದರ ಅರುಣ್ ಧುಮಾಲ್ ಐಪಿಎಲ್’ನ ನೂತನ ಮುಖ್ಯಸ್ಥರಾಗಲಿದ್ದಾರೆ. ಇದುವರೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಐಪಿಎಲ್ ಮುಖ್ಯಸ್ಥರಾಗಿದ್ದರು. ಬಿಸಿಸಿಐನ ಹಾಲಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಗಂಗೂಲಿ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ. ಹೀಗಾಗಿ ಖಾಲಿಯಾಗಲಿರುವ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಸ್ಪರ್ಧಿಸಿದ್ದಾರೆ. ರೋಜರ್ ಬಿನ್ನಿ 2019ರಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಹಾಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಮತ್ತೊಂದು ಅವಧಿಗೆ ಕಾರ್ಯದರ್ಶಿಯಾಗಿಯೇ ಮುಂದುವರಿಯಲು ಬಯಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರನಾಗಿರುವ ಜಯ್ ಶಾ ಕೂಡ ಬಿಸಿಸಿಐ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ ; Virat Kohli : ಆಸ್ಟ್ರೇಲಿಯಾದ ಬೀದಿಗಳಲ್ಲಿ ರಾರಾಜಿಸುತ್ತಿದೆ ವಿರಾಟ್ ಕೊಹ್ಲಿ ಕಟೌಟ್.. ಕ್ಯಾಪ್ಟನ್ ರೋಹಿತ್‌ಗಿಲ್ಲ ಕಟೌಟ್ ಭಾಗ್ಯ

ಇದನ್ನೂ ಓದಿ : Syed Mushtaq Ali T20 : ಸೈಯದ್ ಮುಷ್ತಾಕ್ ಟಿ20 ಟೂರ್ನಿ: ಮಯಾಂಕ್ ನಾಯಕತ್ವದ ಕರ್ನಾಟಕಕ್ಕೆ ಮಹಾರಾಷ್ಟ್ರ ಎದುರಾಳಿ

Roger Binny replace Sourav Ganguly as BCCI President

Comments are closed.