Rohit Sharma batting practice : ಟೀಮ್ ಇಂಡಿಯಾ ಟೆಸ್ಟ್ ಆಡುತ್ತಿರುವ 500 ಮೀ. ದೂರದಲ್ಲೇ ರೋಹಿತ್ ಬ್ಯಾಟಿಂಗ್ ಅಭ್ಯಾಸ

ಎಡ್ಜ್’ಬಾಸ್ಟನ್: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (India Vs England Test match) ಉತ್ತಮ ಸ್ಥಿತಿಯಲ್ಲಿದ್ದು, 3ನೇ ದಿನದಂತ್ಯಕ್ಕೆ ಕೈಯಲ್ಲಿ 7 ವಿಕೆಟ್ ಉಳಿಸಿಕೊಂಡು 257 ರನ್”ಗಳ ಅಮೋಘ ಮುನ್ನಡೆ ಸಾಧಿಸಿದೆ. ಇತ್ತ ಟೀಮ್ ಇಂಡಿಯಾ ಎಡ್ಜ್”ಬಾಸ್ಟನ್ ಮೈದಾನದಲ್ಲಿ ಟೆಸ್ಟ್ ಪಂದ್ಯವಾಡ್ತಿದ್ರೆ,. ಅತ್ತ 500 ಮೀ. ದೂರದಲ್ಲಿ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಅಭ್ಯಾಸ ಶುರು (Rohit Sharma batting practice) ಮಾಡಿದ್ದಾರೆ.

ಕೋವಿಡ್’ನಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ, ಅಭ್ಯಾಸ ಆರಂಭಿಸಿದ್ದು, ಬರ್ಮಿಂಗ್’ಹ್ಯಾಮ್”ನ ಎಡ್ಜ್’ಬಾಸ್ಟನ್ ಮೈದಾನದ ಪಕ್ಕದಲ್ಲೇ ಇರುವ ಪ್ರಾಕ್ಟೀಸ್ ಗ್ರೌಂಡ್ ”ನಲ್ಲಿ ನೆಟ್ ಪ್ರಾಕ್ಟೀಸ್ ಆರಂಭಿಸಿದ್ದಾರೆ. ರೋಹಿತ್ ಶರ್ಮಾಗೆ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಮತ್ತು ವೇಗಿ ಉಮೇಶ್ ಯಾದವ್ ಅಭ್ಯಾಸಕ್ಕೆ ನೆರವಾಗುತ್ತಿದ್ದಾರೆ. ಅಶ್ವಿನ್ ಮತ್ತು ಉಮೇಶ್ ಯಾದವ್ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿಲ್ಲ.

ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ನಡೆದಿದ್ದ ಲೀಸೆಸ್ಟರ್’ಶೈರ್ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ರೋಹಿತ್ ಶರ್ಮಾ ಕೋವಿಡ್ ಪಾಸಿಟಿವ್”ಗೆ ಗುರಿಯಾಗಿದ್ದರು. ಹೀಗಾಗಿ ಅಭ್ಯಾಸ ಪಂದ್ಯವನ್ನು ಅರ್ಧದಲ್ಲೇ ತ್ಯಜಿಸಿದ್ದ ರೋಹಿತ್ ಶರ್ಮಾ ಟೀಮ್ ಹೋಟೆಲ್”ನಲ್ಲಿ ಐಸೋಲೇಷನ್”ಗೆ ಒಳಗಾಗಿದ್ದರು. ಶನಿವಾರ ನಡೆಸಲಾಗಿದ್ದ ಕೋವಿಡ್ ಪರೀಕ್ಷೆಯಲ್ಲಿ ‘ನೆಗೆಟಿವ್’ ರಿಸಲ್ಟ್ ಬಂದಿದ್ದು, ಭಾನುವಾರ ರೋಹಿತ್ ಶರ್ಮಾ ಅಭ್ಯಾಸ ಆರಂಭಿಸಿದ್ದಾರೆ.

ಕೋವಿಡ್ ಕಾರಣದಿಂದ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ, ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಆತಿಥೇಯ ಇಂಗ್ಲೆಂಡ್ ವಿರುದ್ಧ ಭಾರತ 3 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದ್ದು, ಮೊದಲ ಟಿ20 ಪಂದ್ಯ ಜುಲೈ 7ರಂದು ಸೌಥಾಂಪ್ಟನ್”ನಲ್ಲಿ ನಡೆಯಲಿದೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡುತ್ತಿರುವ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾಗೆ ಮೊದಲ ಟಿ20 ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿತ್ತು, ಈ ಆಟಗಾರರು 2 ಹಾಗೂ 3ನೇ ಟಿ20 ಪಂದ್ಯಗಳಲ್ಲಿ ಆಡಲಿದ್ದಾರೆ.

ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

2 ಹಾಗೂ 3ನೇ ಟಿ20 ಪಂದ್ಯಕ್ಕೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ಡಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಬ್ ಪಂಥ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, .ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್ಪಿತ್ ಬೂಮ್ರ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಉಮ್ರಾನ್ ಮಲಿಕ್.

ಇದನ್ನೂ ಓದಿ : ದೆಹಲಿಯ ಗುರುದ್ವಾರದಲ್ಲಿ ಮಲಗುತ್ತಿದ್ದ ಹುಡುಗ.. ಈಗ ಕ್ರಿಕೆಟ್ ಜಗತ್ತಿನ ಟಾಕ್ ಆಫ್ ದಿ ಟೌನ್ !

ಇದನ್ನೂ ಓದಿ : ಗುಡ್ ನ್ಯೂಸ್ : ರೋಹಿತ್ ಶರ್ಮಾಗೆ ಕೋವಿಡ್ ನೆಗೆಟಿವ್ !

Rohit Sharma batting practice in 500m distance team India playing Test

Comments are closed.