Rohit Sharma : ಗಾಯದಿಂದ ಚೇತರಿಸಿಕೊಂಡ ಹಿಟ್ ಮ್ಯಾನ್, ಬಿಕೆಸಿಯಲ್ಲಿ ರೋಹಿತ್ ಬ್ಯಾಟಿಂಗ್ ಅಭ್ಯಾಸ

ಮುಂಬೈ: ಬಾಂಗ್ಲಾದೇಶ ಪ್ರವಾಸದಲ್ಲಿ ಎಡಗೈ ಹೆಬ್ಬೆರಳ ಗಾಯಕ್ಕೊಳಗಾಗಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (India cricket team captain Rohit Sharma) ಗಾಯದಿಂದ ಚೇತರಿಸಿಕೊಂಡು, ಮತ್ತೆ ಬ್ಯಾಟಿಂಗ್ ಅಭ್ಯಾಸ (Rohit Sharma Resumes Practice) ಆರಂಭಿಸಿದ್ದಾರೆ.

ಮುಂಬೈನಲ್ಲಿ ಬಾಂದ್ರಾ ಕುರ್ಲಾ ಕಾಂಪ್ಲೆಂಕ್ಸ್’ನಲ್ಲಿರುವ (BKC) ಶರದ್ ಪವಾರ್ ಕ್ರಿಕೆಟ್ ಅಕಾಡೆಮಿಯಲ್ಲಿ ರೋಹಿತ್ ಶರ್ಮಾ ಭಾನುವಾರ ಕೆಲ ಹೊತ್ತು ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಎಡಗೈ ಹೆಬ್ಬೆರಳ ಗಾಯಕ್ಕೊಳಗಾಗಿ ಬಾಂಗ್ಲಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸ್ಸಾಗಿದ್ದ ರೋಹಿತ್ ಶರ್ಮಾ, ಬಾಂಗ್ಲಾ ಪ್ರವಾಸದ ನಂತರ ಇದೇ ಮೊದಲ ಬಾರಿ ಮೈದಾನದಲ್ಲಿ ಕಾಣಿಸಿಕೊಂಡರು.

ಬಾಂಗ್ಲಾದೇಶ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಆ ಪಂದ್ಯದಲ್ಲಿ ಕೈಗೆ ಬ್ಯಾಂಡೇಜ್ ಕಟ್ಟಿಕೊಂಡೇ ಬ್ಯಾಟಿಂಗ್ ಮಾಡಿದ್ದ ರೋಹಿತ್ 9ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದು 28 ಎಸೆತಗಳಲ್ಲಿ 51 ರನ್ ಸಿಡಿಸಿದ್ದರು. ಬಾಂಗ್ಲಾ ಪ್ರವಾಸದ ಮುಂದಿನ ಪಂದ್ಯಗಳಿಗೆ ರೋಹಿತ್ ಅಲಭ್ಯರಾದ ಕಾರಣ ಕನ್ನಡಿಗ ಕೆ.ಎಲ್ ರಾಹುಲ್ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ರೋಹಿತ್ ನಾಯಕತ್ವದಲ್ಲಿ ಏಕದಿನ ಸರಣಿಯ ಮೊದಲೆರಡೂ ಪಂದ್ಯಗಳನ್ನು ಸೋತು ಸರಣಿಯನ್ನು ಬಾಂಗ್ಲಾಗೆ ಒಪ್ಪಿಸಿದ್ದ ಟೀಮ್ ಇಂಡಿಯಾ, ರಾಹುಲ್ ನಾಯಕತ್ವದಲ್ಲಿ ಏಕದಿನ ಸರಣಿಯ ಕೊನೆಯ ಪಂದ್ಯ ಹಾಗೂ ಟೆಸ್ಟ್ ಸರಣಿಯ ಎರಡೂ ಪಂದ್ಯಗಳನ್ನು ಗೆದ್ದಿತ್ತು.

ಇದನ್ನೂ ಓದಿ : World Test Championship : 2ನೇ ಸ್ಥಾನದಲ್ಲಿ ಟೀಮ್ ಇಂಡಿಯಾ, ಹೇಗಿದೆ ಭಾರತದ ಫೈನಲ್ ಹಾದಿ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದನ್ನೂ ಓದಿ : Ravichandran Ashwin : “ನಿನ್ನನ್ನು ಇನ್ನೂ ನಾನು ಬ್ಲಾಕ್ ಮಾಡಿಲ್ಲವೇ” ರವಿಚಂದ್ರನ್ ಅಶ್ವಿನ್ ಹೀಗಂದದ್ದು ಯಾರಿಗೆ, ಯಾಕೆ?

ಇದನ್ನೂ ಓದಿ : CSK new captain: ಚೆನ್ನೈ ಸೂಪರ್ ಕಿಂಗ್ಸ್‌ಗೆ ಸಿಕ್ಕಿಯೇ ಬಿಟ್ಟ ಹೊಸ ಕ್ಯಾಪ್ಟನ್, ಈತನೇ ಧೋನಿ ಉತ್ತರಾಧಿಕಾರಿ

ಗಾಯದಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ತಂಡಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಆದರೆ ಜನವರಿ 3ರಂದು ಆರಂಭವಾಗಲಿರುವ ಲಂಕಾ ವಿರುದ್ಧದ ಟಿ20 ಸರಣಿಗೆ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆ.ಎಲ್ ರಾಹುಲ್ ಅವರಿಗೆ ವಿಶ್ರಾಂತಿ ನೀಡಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದ್ದು, ಟೀಮ್ ಇಂಡಿಯಾ ಕಂಬ್ಯಾಕ್’ಗೆ ರೋಹಿತ್ ಮತ್ತಷ್ಟು ದಿನ ಕಾಯಬೇಕಾಗಬಹುದು. ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜನವರಿ 3ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

Rohit Sharma Resumes Practice : Recovered from injury hit man, Rohit batting practice in BKC

Comments are closed.