Asia Cup 2022: ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲು ದುಬೈಗೆ ಹಾರಿದ ರೋಹಿತ್ ಶರ್ಮಾ ಬಳಗ

ಮುಂಬೈ: (Asia Cup 2022 Rohit Sharma team) ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲು ಸೋಮವಾರ ಮಧ್ಯರಾತ್ರಿ ದುಬೈಗೆ ಪ್ರಯಾಣ ಬೆಳೆಸಿದೆ. ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ಸಹಿತ ಟೀಮ್ ಇಂಡಿಯಾ ಆಟಗಾರರು ಮುಂಬೈನಿಂದ ದುಬೈಗೆ ತೆರಳಿದ್ದಾರೆ. ವಿರಾಟ್ ಕೊಹ್ಲಿ ಜೊತೆ ಪತ್ನಿ ಅನುಷ್ಕಾ ಶರ್ಮಾ ಮತ್ತು ಪುತ್ರಿ ವಾಮಿಕಾ ಕೂಡ ದುಬೈಗೆ ತೆರಳಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಕೋವಿಡ್-19 ಪಾಸಿಟಿವ್’ಗೆ ಗುರಿಯಾಗಿರುವ ಕಾರಣ ತಂಡದೊಂದಿಗೆ ಪ್ರಯಾಣ ಬೆಳೆಸಿಲ್ಲ.

ಜಿಂಬಾಬ್ವೆ ಪ್ರವಾಸದಲ್ಲಿದ್ದ ಕೆ.ಎಲ್ ರಾಹುಲ್, ದೀಪಕ್ ಹೂಡ, ದೀಪಕ್ ಚಹರ್, ಅಕ್ಷರ್ ಪಟೇಲ್ ಮತ್ತು ಆವೇಶ ಖಾನ್ ಈಗಾಗಲೇ ಹರಾರೆಯಿಂದ ಹೊರಟಿದ್ದು, ಇಂದು ರಾತ್ರಿ (ಮಂಗಳವಾರ) ದುಬೈ ತಲುಪಲಿದ್ದಾರೆ. ಏಷ್ಯಾ ಕಪ್ ಟಿ20 ಟೂರ್ನಿ ಇದೇ ಶನಿವಾರ (ಆಗಸ್ಟ್ 27) ಆರಂಭವಾಗಲಿದ್ದು, ಭಾನುವಾರ ದುಬೈನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. . ಟೂರ್ನಿಯ ಫೈನಲ್ ಪಂದ್ಯ ಸೆಪ್ಟೆಂಬರ್ 11ರಂದು ನಡೆಯಲಿದೆ. ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯಕ್ಕೂ ಮೊದಲು ಭಾರತ ತಂಡ ದುಬೈನಲ್ಲಿ 3 ದಿನಗಳ ಕಾಲ ಅಭ್ಯಾಸ ನಡೆಸಲಿದೆ.

ಯುಎಇ, ಕುವೈಟ್, ಸಿಂಗಾಪುರ್ ಮತ್ತು ಹಾಂಕಾಂಗ್ ತಂಡಗಳು ಅರ್ಹತಾ ಸುತ್ತಿನಲ್ಲಿ ಆಡಲಿದ್ದು, ಈ ಸುತ್ತಿನ ವಿಜೇತ ತಂಡ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ಜೊತೆ ಪ್ರಧಾನ ಸುತ್ತಿನಲ್ಲಿ ಆಡಲಿದೆ. ಟೂರ್ನಿಯಲ್ಲಿ ಆಡಲಿರುವ ಆರು ತಂಡಗಳನ್ನು 2 ಗ್ರೂಪ್’ಗಳಾಗಿ ವಿಭಾಗಿಸಲಾಗಿದ್ದು, ಭಾರತ, ಪಾಕಿಸ್ತಾನ ಮತ್ತು ಅರ್ಹತಾ ಸುತ್ತಿನ ವಿಜೇತ ತಂಡ ಗ್ರೂಪ್ ‘ಎ’ನಲ್ಲಿ ಸ್ಥಾನ ಪಡೆದ್ರೆ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಗ್ರೂಪ್ ‘ಬಿ’ನಲ್ಲಿ ಕಾಣಿಸಿಕೊಂಡಿವೆ. ಪ್ರತೀ ತಂಡಗಳು ಗ್ರೂಪ್ ಹಂತದಲ್ಲಿ ತಲಾ ಒಂದು ಬಾರಿ ಮುಖಾಮುಖಿಯಾಗಲಿವೆ. ಅಗ್ರ ಎರಡು ತಂಡಗಳು ಸೂಪರ್-4 ಹಂತಕ್ಕೆ ಪ್ರವೇಶ ಪಡೆಯಲಿದ್ದು, ಸೂಪರ್-4 ಹಂತದಲ್ಲಿ ಎಲ್ಲಾ ನಾಲ್ಕು ತಂಡಗಳು ಪ್ರತೀ ತಂಡದ ವಿರುದ್ಧ ಆಡಲಿವೆ. ಸೂಪರ್-4ನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಫೈನಲ್ ಪ್ರವೇಶಿಸಲಿವೆ.

ಏಷ್ಯಾಕಪ್ ಟಿ20 (Asia Cup 2022) ಟೂರ್ನಿಯ ವೇಳಾಪಟ್ಟಿ
Group A
ಭಾರತ Vs ಪಾಕಿಸ್ತಾನ: 28 ಆಗಸ್ಟ್, ದುಬೈ
ಭಾರತ Vs ಕ್ವಾಲಿಫೈಯರ್ ಟೀಮ್: 31 ಆಗಸ್ಟ್, ದುಬೈ
ಪಾಕಿಸ್ತಾನ Vs ಕ್ವಾಲಿಫೈಯರ್ ಟೀಮ್: 02 ಸೆಪ್ಟೆಂಬರ್, ಶಾರ್ಜಾ

Group B
ಶ್ರೀಲಂಕಾ Vs ಅಫ್ಘಾನಿಸ್ತಾನ: 27 ಆಗಸ್ಟ್, ದುಬೈ
ಬಾಂಗ್ಲಾದೇಶ Vs ಅಫ್ಘಾನಿಸ್ತಾನ: 30 ಆಗಸ್ಟ್, ಶಾರ್ಜಾ
ಶ್ರೀಲಂಕಾ Vs ಬಾಂಗ್ಲಾದೇಶ: 01 ಸೆಪ್ಟೆಂಬರ್, ದುಬೈ

ಸೂಪರ್-4 ಹಂತ
B1 Vs B2: 03 ಸೆಪ್ಟೆಂಬರ್, ಶಾರ್ಜಾ
A1 Vs A2: 04 ಸೆಪ್ಟೆಂಬರ್, ದುಬೈ
A1 Vs B1: 06 ಸೆಪ್ಟೆಂಬರ್, ದುಬೈ
A2 Vs B2: 07 ಸೆಪ್ಟೆಂಬರ್, ದುಬೈ
A1 Vs B2: 08 ಸೆಪ್ಟೆಂಬರ್, ದುಬೈ
B1 Vs A2: 09 ಸೆಪ್ಟೆಂಬರ್, ದುಬೈ
ಫೈನಲ್: 11 ಸೆಪ್ಟೆಂಬರ್, ದುಬೈ

ಪಂದ್ಯಗಳ ಆರಂಭ: ರಾತ್ರಿ 7.30ಕ್ಕೆ (ಭಾರತೀಯ ಕಾಲಮಾನ)
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್’ವರ್ಕ್ (Star Sports network)
ಲೈವ್ ಸ್ಟ್ರೀಮಿಂಗ್: ಡಿಸ್ನಿ+ಹಾಟ್’ಸ್ಟಾರ್ (Disney + Hotstar)

ಏಷ್ಯಾಕಪ್ ಚಾಂಪಿಯನ್ಸ್
ಭಾರತ: 1984, 1988, 1990-91, 1995, 2010, 2016, 2018
ಶ್ರೀಲಂಕಾ: 1986, 1997, 2004, 2008, 2014
ಪಾಕಿಸ್ತಾನ: 2000, 2012

ಇದನ್ನೂ ಓದಿ : Rahul Dravid : ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್‌ಗೆ ಕೋವಿಡ್, ಏಷ್ಯಾ ಕಪ್‌ಗೆ ಡೌಟ್ ?

ಇದನ್ನೂ ಓದಿ : Mayank Agarwal out : ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವದಿಂದ ಮಯಾಂಕ್’ಗೆ ಕೊಕ್.. ಕುಂಬ್ಲೆ ಬಳಿಕ ಮತ್ತೊಬ್ಬ ಕನ್ನಡಿಗನ ಪಟ್ಟಕ್ಕೆ ಕುತ್ತು

Rohit Sharma team flew to Dubai to play in the Asia Cup 2022 tournament

Comments are closed.