ಲಂಡನ್: ಆತಿಥೇಯ ಇಂಗ್ಲೆಂಡ್ ವಿರುದ್ಧ ಶುಕ್ರವಾರ ಆರಂಭವಾಗಲಿರುವ 5ನೇ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರ ಬಿದ್ದಿದ್ದಾರೆ (Rohit Sharma to miss the final England Test). ರೋಹಿತ್ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah named captain) ಮುನ್ನಡೆಸಲಿದ್ದಾರೆ.
ಲೀಸೆಸ್ಟರ್ ಶೈರ್ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ನಡೆದ ಕೋವಿಡ್ ಟೆಸ್ಟ್’ನಲ್ಲಿ ನಾಯಕ ರೋಹಿತ್ ಶರ್ಮಾ ಅವರಿಗೆ ಪಾಸಿಟಿವ್ ರಿಸಲ್ಟ್ ಬಂದಿತ್ತು. ಹೀಗಾಗಿ ಅಭ್ಯಾಸ ಪಂದ್ಯದ 2ನೇ ಇನ್ನಿಂಗ್ಸ್”ನಲ್ಲಿ ರೋಹಿತ್ ಆಡಿರಲಿಲ್ಲ. ಸದ್ಯ ಲೀಸೆಸ್ಟರ್’ನ ಹೋಟೆಲ್’ನಲ್ಲಿ ರೋಹಿತ್ ಶರ್ಮಾ ಐಸೋಲೇಷನ್”ನಲ್ಲಿದ್ದು, ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಚೇತರಿಸಿಕೊಳ್ಳುವ ಸಾಧ್ಯತೆ ಇಲ್ಲದಿರುವ ಕಾರಣ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ.
1983ರ ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಕಪಿಲ್ ದೇವ್ ಅವರ ನಂತರ ವೇಗದ ಬೌಲರ್ ಒಬ್ಬ ಇದುವರೆಗೆ ಭಾರತ ಟೆಸ್ಟ್ ತಂಡದ ಚುಕ್ಕಾಣಿ ಹಿಡಿದಿಲ್ಲ. ಈಗ ಆ ಅವಕಾಶ ವೇಗಿ ಜಸ್ಪ್ರೀತ್ ಬುಮ್ರಾಗೆ ಒಲಿದು ಬಂದಿದೆ. ಕೋವಿಡ್ ಕಾರಣದಿಂದ ಕಳೆದ ವರ್ಷ ಮೊಟಕುಗೊಂಡಿದ್ದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ (India Vs England Test Series) ಸರಣಿಯ ಅಂತಿಮ ಪಂದ್ಯವನ್ನು ಭಾರತ ಜುಲೈ ಒಂದರಿಂದ ಆಡಲಿದೆ. 4 ಪಂದ್ಯಗಳು ಈಗಾಗಲೇ ಮುಗಿದಿದ್ದು, ಭಾರತ 2-1ರಲ್ಲಿ ಮುನ್ನಡೆಯಲ್ಲಿದೆ.
ಅಂತಿಮ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಇಂಗ್ಲೆಂಡ್ ನೆಲದಲ್ಲಿ ಭಾರತ 15 ವರ್ಷಗಳ ನಂತರ ಟೆಸ್ಟ್ ಸರಣಿಯನ್ನು ಗೆಲ್ಲಲಿದೆ. ಹಾಲಿ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ 2007ರಲ್ಲಿ 1-0 ಅಂತರದಲ್ಲಿ ಇಂಗ್ಲೆಂಡ್”ನಲ್ಲಿ ಟೆಸ್ಟ್ ಸರಣಿ ಗೆದ್ದ ನಂತರ ಭಾರತ ಕ್ರಿಕೆಟ್ ಜನಕರ ನಾಡಿನಲ್ಲಿ ಸರಣಿ ಗೆದ್ದಿಲ್ಲ.
ಇದನ್ನೂ ಓದಿ : No Place for Virat Kohli : ಸೆಹ್ವಾಗ್ ಟಿ20 ವಿಶ್ವಕಪ್ ತಂಡದಲ್ಲಿ ವಿರಾಟ್ ಕೊಹ್ಲಿಯೇ ಇಲ್ಲ
ಇದನ್ನೂ ಓದಿ : India Vs New Zealand : ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಟೂರ್: ಕಿವೀಸ್ ವಿರುದ್ಧ ಟಿ20, ಏಕದಿನ ಸರಣಿ ಆಡಲಿದೆ ಟೀಮ್ ಇಂಡಿಯಾ
ಇದನ್ನೂ ಓದಿ : Roger Binny Outrage Against Manish Pandey : ಮನೀಶ್ ಪಾಂಡೆ ವಿರುದ್ಧ ಕೆಎಸ್‌ಸಿಎ ಅಧ್ಯಕ್ಷ ಬಿನ್ನಿ ಕೆಂಡಾಮಂಡಲ
Rohit Sharma to miss the final England Test Jasprit Bumrah named captain