ಹೈದರಾಬಾದ್’ನಲ್ಲಿ RRR ಸ್ಟಾರ್ NTR ಭೇಟಿ ಮಾಡಿದ ಟೀಮ್ ಇಂಡಿಯಾ ಸ್ಟಾರ್ಸ್

ಹೈದರಾಬಾದ್: NTR met Team India : ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕಾಗಿ ಹೈದರಾಬಾದ್’ನಲ್ಲಿರುವ ಟೀಮ್ ಇಂಡಿಯಾ ಆಟಗಾರರು RRR ಸ್ಟಾರ್, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜ್ಯೂನಿಯರ್ NTR ಅವರನ್ನು ಭೇಟಿ ಮಾಡಿದ್ದಾರೆ.

ಟೀಮ್ ಇಂಡಿಯಾದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್, ವಿಕೆಟ್ ಕೀಪರ್ ಇಶಾನ್ ಕಿಶನ್, ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್, ಯುವ ಆರಂಭಿಕ ಬ್ಯಾಟ್ಸ್’ಮನ್ ಶುಭಮನ್ ಗಿಲ್ ಮತ್ತು ಮಧ್ಯಮ ವೇಗದ ಬೌಲರ್ ಶಾರ್ದೂಲ್ ಠಾಕೂರ್, ನಂದಮೂರಿ ತಾರಕ ರಾಮ ರಾವ್ (ಜ್ಯೂನಿಯರ್ NTR) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎಸ್ಎಸ್ ರಾಜಮೌಳಿ ನಿರ್ದೇಶನದ, ಜ್ಯೂನಿಯರ್ NTR ಮತ್ತು ರಾಮ್ ಚರಣ್ ತೇಜ ಅಭಿನಯದ RRR ಸಿನಿಮಾ ಬಾಕ್ಸ್ ಆಫೀಸ್’ನಲ್ಲಿ ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿತ್ತು. ಅಷ್ಟೇ ಅಲ್ಲ RRR ಚಿತ್ರ ಇತ್ತಿಚೆಗಷ್ಟೇ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೂ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಜ್ಯೂನಿಯರ್ NTR ಅವರಿಗೆ ಟೀಮ್ ಇಂಡಿಯಾ ಆಟಗಾರರು ಅಭಿನಂದನೆ ಸಲ್ಲಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಪ್ರಥಮ ಪಂದ್ಯ (India Vs New Zealand ODI series) ಇಂದು ಹೈದರಾಬಾದ್’ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ 2ನೇ ಪಂದ್ಯ ಜನವರಿ 21ಕ್ಕೆ ರಾಯ್ಪುರ ಹಾಗೂ ಜನವರಿ 24ರಂದು ಇಂದೋರ್’ನಲ್ಲಿ ನಡೆಯಲಿವೆ.

ಕಿವೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದರೆ ಐಸಿಸಿ ಏಕದಿನ rankingನಲ್ಲಿ ನಂ.1 ಸ್ಥಾನಕ್ಕೇರಲಿದೆ. ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ, ಸದ್ಯ ಐಸಿಸಿ rankingನಲ್ಲಿ 110 ರೇಟಿಂಗ್ ಪಾಯಿಂಟ್’ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ವಿಶ್ವಚಾಂಪಿಯನ್ ಇಂಗ್ಲೆಂಡ್(113) ಮತ್ತು ಆಸ್ಟ್ರೇಲಿಯಾ (112) ಮೊದಲೆರಡು ಸ್ಥಾನಗಳಲ್ಲಿವೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳಾಪಟ್ಟಿ
ಮೊದಲ ಏಕದಿನ: ಜನವರಿ 18 (ಹೈದರಾಬಾದ್)
2ನೇ ಏಕದಿನ: ಜನವರಿ 21 (ರಾಯ್ಪುರ)
3ನೇ ಏಕದಿನ: ಜನವರಿ 24 (ಇಂದೋರ್)

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ವೇಳಾಪಟ್ಟಿ
ಮೊದಲ ಟಿ20: ಜನವರಿ 27 (ರಾಂಚಿ)
2ನೇ ಟಿ20: ಜನವರಿ 29 (ಲಕ್ನೋ)
3ನೇ ಟಿ20: ಫೆಬ್ರವರಿ 01 (ಅಹ್ಮದಾಬಾದ್)

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ (India’s ODI squad against New Zealand)
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ಉಪನಾಯಕ), ಸೂರ್ಯಕುಮಾರ್ ಯಾದವ್, ಕೆ.ಎಸ್ ಭರತ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ (India’s T20I squad against New Zealand):
ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್(ಉಪನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಕೇಶ್ ಕುಮಾರ್.

ಇದನ್ನೂ ಓದಿ : ಕನ್ನಡಿಗ ಸುನಿಲ್ ಜೋಶಿ ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ಆಯ್ಕೆ

ಇದನ್ನೂ ಓದಿ : Shreyas Iyer ruled out : ನ್ಯೂಜಿಲೆಂಡ್ ಏಕದಿನ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್

RRR Star NTR met Team India Stars in Hyderabad

Comments are closed.