Sanju Samson Replace Rahul : ಕೆ.ಎಲ್ ರಾಹುಲ್ ಬದಲು ಸಂಜು ಸ್ಯಾಮ್ಸನ್’ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ

ಬೆಂಗಳೂರು: (Sanju Samson Replace Rahul) ಕೋವಿಡ್’ನಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯಿಂದ (India Vs West Indies T20) ಹೊರಬಿದ್ದಿರುವ ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಸ್ಥಾನದಲ್ಲಿ ಕೇರಳದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್ (Sunju Samson) ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿದ್ದ ಭಾರತ ತಂಡದಲ್ಲಿ ರಾಹುಲ್ ಸ್ಥಾನ ಪಡೆದಿದ್ದರು. ಸ್ಪೋರ್ಟ್ಸ್ ಹರ್ನಿಯಾ (Sports Hernia) ಸಮಸ್ಯೆಗೆ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಪಡೆದು ಬಂದಿದ್ದ ರಾಹುಲ್, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಖಾಡೆಮಿಯಲ್ಲಿ ಅಭ್ಯಾಸವನ್ನೂ ಆರಂಭಿಸಿದ್ದರು. ಇನ್ನೇನು ವಿಂಡೀಸ್ ಪ್ರವಾಸಕ್ಕೆ ಸಿದ್ಧ ಎನ್ನುವಷ್ಟರಲ್ಲಿ ರಾಹುಲ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಗೆ ನಾಯಕನಾಗಿ ಆಯ್ಕೆಯಾಗಿದ್ದ ರಾಹುಲ್ ಅವರಿಗೆ ಅಲ್ಲೂ ಅದೃಷ್ಟ ಕೈ ಕೊಟ್ಟಿತ್ತು. ಸರಣಿ ಆರಂಭಕ್ಕೆ ಮುನ್ನಾ ದಿನ ತೊಡೆ ಸಂಧು (Groin Injury) ಗಾಯಕ್ಕೊಳಗಾಗಿ ಇಡೀ ಸರಣಿಯಿಂದಲೇ ಹೊರ ಬಿದ್ದಿದ್ದರು. ನಂತರ ಇಂಗ್ಲೆಂಡ್ ಪ್ರವಾಸಕ್ಕೂ ರಾಹುಲ್ ಅಲಭ್ಯರಾಗಿದ್ದರು. ಈಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದಲೂ ರಾಹುಲ್ ಹೊರ ಬಿದ್ದಿರುವ ಕಾರಣ, ಅವರ ಜಾಗದಲ್ಲಿ ಸಂಜು ಸ್ಯಾಮ್ಸನ್ ಅವಕಾಶ ಪಡೆದಿದ್ದಾರೆ. ಸಂಜು ಸ್ಯಾಮ್ಸನ್ ವಿಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಭಾರತ ತಂಡದಲ್ಲಿದ್ದರು.

ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಪರಿಷ್ಕೃತ ತಂಡ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಆರ್.ಅಶ್ವಿನ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಭಾರತ Vs ವೆಸ್ಟ್ ಇಂಡೀಸ್: ಟಿ20 ಸರಣಿಯ ವೇಳಾಪಟ್ಟಿ
ಜುಲೈ 29: ಮೊದಲ ಟಿ20 ಪಂದ್ಯ (ಟ್ರಿನಿಡಾಡ್)
ಆಗಸ್ಟ್ 01: ಎರಡನೇ ಟಿ20 ಪಂದ್ಯ (ಸೇಂಟ್ ಕಿಟ್ಸ್)
ಆಗಸ್ಟ್ 02: ಮೂರನೇ ಟಿ20 ಪಂದ್ಯ (ಸೇಂಟ್ ಕಿಟ್ಸ್)
ಆಗಸ್ಟ್ 06: ನಾಲ್ಕನೇ ಟಿ20 ಪಂದ್ಯ (ಫ್ಲೋರಿಡಾ)
ಆಗಸ್ಟ್ 07: ಐದನೇ ಟಿ20 ಪಂದ್ಯ (ಫ್ಲೋರಿಡಾ)

ಇದನ್ನೂ ಓದಿ : IPL Vs ILT20 : ಐಪಿಎಲ್‌ಗೆ ಸವಾಲ್ ಹಾಕಲು ಬರಲಿದೆ ಮತ್ತೊಂದು ಟಿ20 ಲೀಗ್, ಇದು ILT20 ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದನ್ನೂ ಓದಿ : Mayank Agarwal shares Childhood Photo: ಬಾಲ್ಯದ ಮುದ್ದಾದ ಫೋಟೋ ಹಂಚಿಕೊಂಡ ಕರ್ನಾಟಕ ಕ್ರಿಕೆಟರ್ ಮಯಾಂಕ್ ಅಗರ್ವಾಲ್

Sanju Samson Replace Rahul Against India Vs West Indies T20

Comments are closed.