Saurav Ganguly : ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ : ಸ್ಪಷ್ಟನೆ ಕೊಟ್ಟ ಶಾ

ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ (Saurav Ganguly ) ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಯಲ್ಲಿಯೂ ಹರಿದಾಡುತ್ತಿದೆ. ಮಾಜಿ ಕ್ರಿಕೆಟಿಗ ಗಂಗೂಲಿ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸುತ್ತಿದ್ದೇನೆ ಎಂದು ಹೇಳುವ ಟ್ವೀಟ್‌ ಮಾಡಿದ್ದರು. ಜೊತೆಗೆ ಅಮಿತ್‌ ಶಾ ಜೊತೆಗಿನ ಔತಣ ಕೂಟ ರಾಜಕೀಯಕ್ಕೆ ಸೇರುತ್ತಾರೆ ಅನ್ನೋ ಮಾತುಗಳು ಕೇಳಿಬಂದಿದೆ. ಈ ನಡುವಲ್ಲೇ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರು ಈ ಕುರಿತು ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅವರು, ಇಂದು ಸಂಜೆ 5:20 ಕ್ಕೆ ತಮ್ಮ ಟ್ವೀಟರ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದರು. ಟ್ವೀಟ್‌ನಲ್ಲಿ, ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡುವ ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿದ್ದೇನೆ. ತಾನು ಜೀವನದ ಹೊಸ ಅಧ್ಯಾಯವನ್ನು ಪ್ರವೇಶಿಸಲು ಯೋಜಿಸುತ್ತಿದ್ದೇನೆ. 1992 ರಲ್ಲಿ ಕ್ರಿಕೆಟ್‌ನೊಂದಿಗೆ ನನ್ನ ಪ್ರಯಾಣವನ್ನು ಪ್ರಾರಂಭಿಸಿ 2022ನೇ ವರ್ಷಕ್ಕೆ 30 ವರ್ಷವನ್ನು ಪೂರೈಸಿದ್ದೇನೆ. ಅಂದಿನಿಂದ ಕ್ರಿಕೆಟ್ ನನಗೆ ಬಹಳಷ್ಟು ನೀಡಿದೆ. ಮುಖ್ಯವಾಗಿ, ಇದು ನನಗೆ ನಿಮ್ಮೆಲ್ಲರ ಬೆಂಬಲವನ್ನು ನೀಡಿದೆ. ನಾನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪ್ರಯಾಣದ ಭಾಗವಾಗಿತ್ತು, ನನ್ನನ್ನು ಬೆಂಬಲಿಸಿದೆ ಮತ್ತು ನಾನು ಇಂದು ಇರುವ ಸ್ಥಳಕ್ಕೆ ತಲುಪಲು ಸಹಾಯ ಮಾಡಿದೆ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದರು.

ಇಂದು, ನಾನು ಬಹುಶಃ ಬಹಳಷ್ಟು ಜನರಿಗೆ ಸಹಾಯ ಮಾಡಬಹುದೆಂದು ನಾನು ಭಾವಿಸುವ ಏನನ್ನಾದರೂ ಪ್ರಾರಂಭಿಸಲು ಯೋಜಿಸುತ್ತಿದ್ದೇನೆ. ನಾನು ನನ್ನ ಜೀವನದ ಈ ಅಧ್ಯಾಯವನ್ನು ಪ್ರವೇಶಿಸುವಾಗ ನಿಮ್ಮ ಬೆಂಬಲವನ್ನು ನೀವು ಮುಂದುವರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದರು. 49 ವರ್ಷ ವಯಸ್ಸಿನ ಗಂಗೂಲಿ ಅವರನ್ನು ಅಕ್ಟೋಬರ್ 2019 ರಲ್ಲಿ BCCI ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಅವರ ಮೂರು ವರ್ಷಗಳ ಅಧಿಕಾರಾವಧಿಯು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳಲಿದೆ.

ಸೌರವ್‌ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷರಾದ ನಂತರದಲ್ಲಿ ಟೀಂ ಇಂಡಿಯಾದ ಮೂರು ಸ್ವರೂಪಗಳ ನಾಯಕತ್ವದಲ್ಲಿ ಬದಲಾವಣೆಯನ್ನು ಕಂಡಿದೆ. 2017 ರಿಂದಲೂ ಭಾರತ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವ ವಿರಾಟ್‌ ಕೊಹ್ಲಿ ಅವರು, ನವೆಂಬರ್ 2021 ರಲ್ಲಿ ಟಿ 20 ನಾಯಕತ್ವದಿಂದ ಕೆಳಗೆ ಇಳಿದಿದ್ದರು. ಅಲ್ಲದೇ ಏಕದಿನ ಹಾಗೂ ಟೆಸ್ಟ್‌ ತಂಡದ ನಾಯಕತ್ವದಿಂದಲೂ ಕೆಳಗಿಳಿದಿದ್ದಾರೆ. ನಂತರದಲ್ಲಿ ರೋಹಿತ್‌ ಶರ್ಮಾ ಟೀಂ ಇಂಡಿಯಾದ ನಾಯಕನಾಗಿ ನೇಮಕವಾಗಿದ್ದಾರೆ.

ಸೌರವ್‌ ಗಂಗೂಲಿ ಅವರು ಟ್ವೀಟ್‌ ಮಾಡಿದ ಬೆನ್ನಲ್ಲೇ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ತ್ಯೆಜಿಸುತ್ತಾರೆ ಎಂದು ಸುದ್ದಿಯಾಗಿತ್ತು. ಇನ್ನು ಗಂಗೂಲಿ ಅವರ ನಿವಾಸದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ಔತಣಕೂಟದಲ್ಲಿ ಭಾಗಿಯಾಗಿದ್ದರು. ಇದರ ಬೆನ್ನಲ್ಲೇ ಗಂಗೂಲಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅಂತಾನೂ ಹೇಳಲಾಗುತ್ತಿತ್ತು. ಆದರೆ ಇದೀಗ ಗಂಗೂಲಿ ರಾಜೀನಾಮೆಯ ಕುರಿತು ಬಿಸಿಸಿಐ ಕಾರ್ಯದರ್ಶಿ ಜೈಶಾ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ. ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಅವರು ರಾಜೀನಾಮೆಯನ್ನು ನೀಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ : Hardik Pandya : ಹಾರ್ದಿಕ್‌ ಪಾಂಡ್ಯಗೆ ಕೃನಾಲ್‌ ಪಾಂಡ್ಯ ಭಾವನಾತ್ಮಕ ಸಂದೇಶ

ಇದನ್ನೂ ಓದಿ : FIR against Mahendra Singh Dhoni : ಟೀಂ ಇಂಡಿಯಾ ಮಾಜಿ ನಾಯಕ ಧೋನಿ ವಿರುದ್ಧ ದಾಖಲಾಯ್ತು ಎಫ್​ಐಆರ್​

Saurav Ganguly not resigned BCCI President Jay Shah clarifies

Comments are closed.