Kannada News Next

cricket

ಮಂದಾನ, ಶಫಾಲಿ, ಶ್ರೀ ಚರಣಿ ಭರ್ಜರಿ ಆಟ : ಭಾರತದ ವಿರುದ್ದ ಶ್ರೀಲಂಕಾ ಪಡೆ ದೂಳೀಪಟ

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್‌ ನಡೆಸಿದ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 183ರನ್‌ ಕಲೆ ಹಾಕಿತ್ತು.

By Arun Gundmi | ಅರುಣ್‌ ಗುಂಡ್ಮಿ Editor-in-Chief
shafali verma smriti mandhana record partnership asia cup

ಭಾರತ ಮಹಿಳಾ ಕ್ರಿಕೆಟ್‌ ತಂಡ ಸತತ 8ನೇ ಬಾರಿ ಏಷ್ಯಾಕಪ್‌ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ಮೂಲಕ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದೆ. ಸ್ಮೃತಿ ಮಂದಾನ, ಶಫಾಲಿ ವರ್ಮಾ ಹಾಗೂ ಶ್ರೀ ಚರಣಿ ಅವರ ಭರ್ಜರಿ ಆಟದ ನೆರವಿನಿಂದ ಭಾರತದ ಮಹಿಳಾ ಕ್ರಿಕೆಟ್‌ ತಂಡ ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ಮಹಿಳಾ ತಂಡವನ್ನು ರೋಚಕವಾಗಿ ಗೆಲುವು ಕಂಡಿದೆ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್‌ ನಡೆಸಿದ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 183ರನ್‌ ಕಲೆ ಹಾಕಿತ್ತು. ನಂತರ ಬ್ಯಾಟಿಂಗ್‌ಗೆ ಇಳಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 111 ರನ್‌ ಗಳಿಸಲು ಮಾತ್ರವೇ ಸಾಧ್ಯವಾಯಿತು. ಭಾರತ ತಂಡದ ಆರಂಭಿಕ ಆಟಗಾರರಾದ ಸ್ಮೃತಿ ಮಂದಾನ, ಶಫಾಲಿ ವರ್ಮಾ ಅವರ ಸ್ಪೋಟಕ ಅರ್ಧ ಶತಕ ಮತ್ತು ಸ್ಪಿನ್ನರ್‌ ಶ್ರೀಚರಣಿ ಅವರ ಮಾಂತ್ರಿಕ ಬೌಲಿಂಗ್‌ ಭಾರತಕ್ಕೆ ಸತತ 8ನೇ ಬಾರಿಗೆ ಏಷ್ಯಾ ಕಪ್‌ ಗೆಲ್ಲಿಸಿಕೊಟ್ಟಿದೆ.

ಟಾಸ್‌ ಗೆದದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಸ್ಮೃತಿ ಮಂದಾನ ಹಾಗೂ ಶಫಾಲಿ ವರ್ಮ ಉತ್ತಮ ಆರಂಭವೊದಗಿಸಿದ್ರು. ಮೊದಲ ವಿಕೆಟ್‌ಗೆ 12.5 ಓವರ್‌ಗಳಲ್ಲಿ 129ರನ್‌ ಕಲೆ ಹಾಕಿದ್ದರು. ಮಹಿಳಾ ಏಷ್ಯಾಕಪ್‌ನಲ್ಲಿ ಭಾರತ ತಂಡ 2026ರ ಸಾಲಿನಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಭರ್ಜರಿಯಾಗಿ ಸೋಲಿಸುವ ಮೂಲಕ ಎ ಬಣದಲ್ಲಿ ಅಗ್ರಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿತ್ತು. ಭಾರತ ತಂಡ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ದ 40 ರನ್‌ ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಎಂಟ್ರಿ ಕೊಟ್ಟಿತ್ತು.