Shaheen Shah Afridi : ಕಾಲಿಗೆ ಸ್ಟ್ರೆಚರ್ ಕಟ್ಟಿಕೊಂಡಿದ್ದ ಪಾಕ್ ವೇಗಿ ಅಫ್ರಿದಿಯನ್ನು ಭೇಟಿ ಮಾಡಿದ ಕೊಹ್ಲಿ, ರಾಹುಲ್

ದುಬೈ: (shaheen shah afridi) ಟೀಮ್ ಇಂಡಿಯಾ ಆಟಗಾರರು ಏಷ್ಯಾ ಕಪ್ ಟೂರ್ನಿಗೆ (Asia Cup 2022) ಸಜ್ಜಾಗುತ್ತಿದ್ದು, ಭಾನುವಾರ ನಡೆಯಲಿರುವ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯವನ್ನು ಎದುರು ನೋಡುತ್ತಿದ್ದಾರೆ. ದುಬೈನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡದ ಆಟಗಾರರು ಕಳೆದೆರಡು ದಿನಗಳಿಂದ ಅಭ್ಯಾಸ ನಡೆಸುತ್ತಿದ್ದಾರೆ. ಅಭ್ಯಾಸದ ವೇಳೆ ಭಾರತ ತಂಡದ ಆಟಗಾರರು ಕಾಲಿನ ಗಾಯದಿಂದ ಬಳಲುತ್ತಿರುವ ಪಾಕಿಸ್ತಾನ ತಂಡದ ಯುವ ಎಡಗೈ ವೇಗದ ಬೌಲರ್ ಶಾಹೀನ್ ಷಾ ಅಫ್ರಿದಿಯನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಪಾಕಿಸ್ತಾನ ತಂಡ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಗಾಯಾಳು ವೇಗಿ ಅಫ್ರಿದಿ ಬಲಗಾಲಿಗೆ ಸ್ಟ್ರೆಚರ್ ಕಟ್ಟಿಕೊಂಡು ಬೌಂಡರಿ ಗೆರೆಯ ಬಳಿ ಕೂತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಅಫ್ರಿದಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಗಾಯದ ಬಗ್ಗೆ ಮಾಹಿತಿ ಪಡೆದ ಕೊಹ್ಲಿ, ನಿಗಾ ವಹಿಸುವಂತೆ ಅಫ್ರಿದಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ಕೊಹ್ಲಿಗೆ ಅಫ್ರಿದಿ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಈ ವೀಡಿಯೊವನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ತನ್ನ ಟ್ವಿಟರ್’ನಲ್ಲಿ ಪ್ರಕಟಿಸಿದೆ.

ವಿರಾಟ್ ಕೊಹ್ಲಿ ಅಷ್ಟೇ ಅಲ್ಲದೆ ಟೀಮ್ ಇಂಡಿಯಾದ ಉಪನಾಯಕ ಕೆ.ಎಲ್ ರಾಹುಲ್, ವಿಕೆಟ್ ಕೀಪರ್ ರಿಷಭ್ ಪಂತ್ ಹಾಗೂ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೂಡ ಗಾಯಾಳು ಶಾಹೀನ್ ಷಾ ಅಫ್ರಿದಿಯನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

22 ವರ್ಷದ ಯುವ ಎಡಗೈ ವೇಗದ ಬೌಲರ್ ಅಫ್ರಿದಿ ಅಲಭ್ಯತೆ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡಕ್ಕೆ ದೊಡ್ಡ ಹಿನ್ನಡೆ. ಕಳೆದ ವರ್ಷ ದುಬೈನಲ್ಲೇ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಶಾಹೀನ್ ಶಾ ಅಫ್ರಿದಿ ಭಾರತಕ್ಕೆ ಸಿಂಹಸ್ವನ್ನರಾಗಿದ್ದರು. ರೋಹಿತ್ ಶರ್ಮಾ, ಕೆ.ಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಮೂಲಕ ಭಾರತದ ಬ್ಯಾಟಿಂಗ್ ಕ್ರಮಾಂಕವನ್ನು ಧ್ವಂಸ ಮಾಡಿದ್ದರು.

ಇದನ್ನೂ ಓದಿ : Virat Kohli: “ನಾನು ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿಲ್ಲ, ಆದರೆ..” ಫಾರ್ಮ್ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ

ಇದನ್ನೂ ಓದಿ : Sheldon Jackson: “ನನ್ನ ವಯಸ್ಸು 35, 75 ಅಲ್ಲ” ಅವಕಾಶ ಸಿಗದಿದ್ದಕ್ಕೆ ಬಿಸಿಸಿಐ ವಿರುದ್ಧ ಆಕ್ರೋಶ ಹೊರ ಹಾಕಿದ ಕ್ರಿಕೆಟರ್

shaheen shah afridi meet virat Kohli Asia Cup 2022 Ind vs Pak

Comments are closed.