Shreyas Iyer out : ಭಾರತ Vs ಆಸ್ಟ್ರೇಲಿಯಾ ಪ್ರಥಮ ಟೆಸ್ಟ್‌ನಿಂದ ಶ್ರೇಯಸ್ ಅಯ್ಯರ್ ಔಟ್, ಸೂರ್ಯ ಪದಾರ್ಪಣೆ!

ನಾಗ್ಪುರ: ಮಧ್ಯಮ ಕ್ರಮಾಂಕದ ಭರವಸೆಯ ಬ್ಯಾಟ್ಸ್’ಮನ್ ಶ್ರೇಯಸ್ ಅಯ್ಯರ್ (Shreyas Iyer out ) ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (Border-Gavaskar Trophy) ಪ್ರಥಮ ಟೆಸ್ಟ್ ಪಂದ್ಯದಿಂದ ಹೊರ ಬಿದ್ದಿದ್ದಾರೆ. ಅಯ್ಯರ್ ಅನುಪಸ್ಥಿತಿಯಲ್ಲಿ ಮುಂಬೈನ ಮತ್ತೊಬ್ಬ ಬ್ಯಾಟ್ಸ್’ಮನ್ ಸೂರ್ಯಕುಮಾರ್ ಯಾದವ್ (Suryakumar Yadav) ಆಡಲಿದ್ದು, ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಲಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪ್ರಥಮ ಟೆಸ್ಟ್ ಪಂದ್ಯ ಫೆಬ್ರವರಿ 9ರಂದು ನಾಗ್ಪುರದ ಜಮ್ತಾದಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಆರಂಭವಾಗಲಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೇಯಸ್ ಅಯ್ಯರ್ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಪ್ರಥಮ ಟೆಸ್ಟ್’ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಬಲಗೈ ಬ್ಯಾಟ್ಸ್’ಮನ್ ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿ ನಂತರ ಸರಣಿಯಿಂದ ಹೊರ ಬಿದ್ದಿದ್ದರು. ಬೆನ್ನು ನೋವಿನಿಂದ ಬಳಲುತ್ತಿದ್ದ ಅಯ್ಯರ್, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (National Cricket Academy) ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಸಂಪೂರ್ಣ ಫಿಟ್ ಆಗದ ಕಾರಣ ಕಾಂಗರೂಗಳ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದು, 2ನೇ ಟೆಸ್ಟ್ ಪಂದ್ಯದ ವೇಳೆಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಸಜ್ಜಾಗುತ್ತಿದ್ದು, ಇಂದಿನಿಂದ (ಗುರುವಾರ) ನಾಗ್ಪುರದ ಜಮ್ತಾದಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಭಾರತ ತಂಡದ ಅಭ್ಯಾಸ ಶಿಬಿರ ಆರಂಭವಾಗಲಿದೆ. 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9ರಂದು ನಾಗ್ಪುರದಲ್ಲಿ ಆರಂಭವಾಗಲಿದೆ.

ಭಾರತ Vs ಆಸ್ಟ್ರೇಲಿಯಾ ಟೆಸ್ಟ್ ಸರಣಿ 2023 (India Vs Australia test series):

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಕ್ರಿಕೆಟ್ ಜಗತ್ತಿನ ಅತ್ಯಂತ ಜಿದ್ದಾಜಿದ್ದಿನ ಸರಣಿ. ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತ, ಈ ಬಾರಿ ತವರಿನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನಲ್ಲಿ ಭಾರತ ಫೈನಲ್ ತಲುಪಬೇಕಾದರೆ ಆಸೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಭಾರತ ಕನಿಷ್ಠ 2-0 ಅಂತರದಲ್ಲಿ ಗೆಲ್ಲಬೇಕಿದೆ. ಆಸ್ಟ್ರೇಲಿಯಾ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನಲ್ಲಿ (ICC world test championship) ಫೈನಲ್ ತಲುಪಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳಾಪಟ್ಟಿ (India Vs Australia (Border-Gavaskar Trophy test series):

ಪ್ರಥಮ ಟೆಸ್ಟ್: ಫೆಬ್ರವರಿ 9-13 (ವಿಸಿಎ ಕ್ರೀಡಾಂಗಣ, ಜಮ್ತಾ; ನಾಗ್ಪುರ)
2ನೇ ಟೆಸ್ಟ್: ಫೆಬ್ರವರಿ 17-21 (ಫಿರೋಜ್ ಶಾ ಕ್ರೀಡಾಂಗಣ, ದೆಹಲಿ)
3ನೇ ಟೆಸ್ಟ್: ಮಾರ್ಚ್ 1-5 (HPCA ಕ್ರೀಡಾಂಗಣ, ಧರ್ಮಶಾಲಾ)
4ನೇ ಟೆಸ್ಟ್: ಮಾರ್ಚ್ 9-13 (ನರೇಂದ್ರ ಮೋದಿ ಕ್ರೀಡಾಂಗಣ, ಅಹ್ಮದಾಬಾದ್)

ಇದನ್ನೂ ಓದಿ : Shikhar Dhawan : ಶಿಖರ್ ಧವನ್’ಗೆ ಪೇಂಟಿಂಗ್ ಗಿಫ್ಟ್ ಕೊಟ್ಟ ಅಂತರಾಷ್ಟ್ರೀಯ ಚಿತ್ರಕಾರ ವಿಲಾಸ್ ನಾಯಕ್, ಕನ್ನಡಿಗನಿಗೆ ಥ್ಯಾಂಕ್ಸ್ ಎಂದ ಗಬ್ಬರ್

ಇದನ್ನೂ ಓದಿ : Exclusive: ಭಾರತ Vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

Shreyas Iyer Out From India Vs Australia First Test Suryakumar Yadav Debuts

Comments are closed.