ಅಹಮದಾಬಾದ್ : ವಿಶ್ವಕಪ್‌ನಲ್ಲಿ(World Cup 2023) ಸತತ ಎರಡು ಪಂದ್ಯಗಳನ್ನು ಜಯಿಸಿರುವ ಭಾರತ ತಂಡ (Indian Cricket Team) ಮುಂದಿನ ಪಂದ್ಯದಲ್ಲಿ ಭಾರತ ತಂಡದ ವಿರುದ್ದ ಸೆಣೆಸಾಡಲಿದೆ. ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ಕ್ರಿಕೆಟ್ ತಂಡ ಈಗಾಗಲೇ ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿದ್ದು, ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill) ಕೂಡ ಅಹಮದಾಬಾದ್‌ಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ಡೆಂಗ್ಯೂನಿಂದ ಬಳಲುತ್ತಿರುವ ಶುಭಮನ್ ಗಿಲ್ ಈಗಾಗಲೇ ವಿಶ್ವಕಪ್‌ನ ಆರಂಭಿಕ ಎರಡು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದಾರೆ. ಭಾರತ ಆಸ್ಟ್ರೇಲಿಯಾ ತಂಡದ ವಿರುದ್ದ ಚೆನ್ನೈನಲ್ಲಿ ಪಂದ್ಯವನ್ನು ಆಡಿದ್ದು, ಈ ವೇಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗಿಲ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದ್ರೆ ಶುಭಮನ್ ಗಿಲ್ ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಇದೀಗ ಅಫ್ಘಾನಿಸ್ತಾನದ ವಿರುದ್ದ ಟೀಂ ಇಂಡಿಯಾ ಗೆಲುವು ದಾಖಲಿಸಿದ್ದು, ಪಾಕಿಸ್ತಾನ ವಿರುದ್ದದ ಪಂದ್ಯಕ್ಕಾಗಿ ರೋಹಿತ್ ಶರ್ಮಾ ಪಡೆ ಅಹಮದಾಬಾದ್ ಗೆ ಪ್ರಯಾಣಿಸಿದೆ.

ಇದನ್ನೂ ಓದಿ : ರೋಹಿತ್ ಶರ್ಮಾ ಭರ್ಜರಿ ಶತಕ : ಒಂದೇ ಪಂದ್ಯದಲ್ಲಿ 2 ವಿಶ್ವದಾಖಲೆ ಬರೆದ ಟೀಂ ಇಂಡಿಯಾ ನಾಯಕ
ಇದೀಗ ಶುಭಮನ್ ಗಿಲ್ ಅಹಮದಾಬಾದ್‌ಗೆ ಪ್ರಯಾಣಿಸಿರುವುದು ಕುತೂಹಲ ಮೂಡಿಸಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಶುಭಮನ್ ಗಿಲ್ ಹೆಚ್ಚು ಆರೋಗ್ಯವಾಗಿ ಇದ್ದಂತೆಯ ಕಂಡು ಬಂದಿದ್ದಾರೆ. ಇದೀಗ ಶುಭಮನ್ ಗಿಲ್ ಪಾಕಿಸ್ತಾನ ವಿರುದ್ದ ಕಣಕ್ಕೆ ಇಳಿಯಲಿದ್ದಾರೆ.

ಅಕ್ಟೋಬರ್ 14 ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನದ ಘರ್ಷಣೆಗೆ ಅವರು ಯಶಸ್ವಿಯಾಗಬಹುದೆಂಬ ಭರವಸೆ ಇನ್ನೂ ಇದೆ. ಡೆಂಗ್ಯೂನಿಂದ ಶುಭಮನ್ ಗಿಲ್ ಚೇತರಿಸಿಕೊಳ್ಳುತ್ತಿದ್ದು, ಗುರುವಾರ ಇಂದು ಟೀಂ ಇಂಡಿಯಾವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.
ಇದನ್ನೂ ಓದಿ : ವಿಶ್ವಕಪ್ ಭಾರತ Vs ಪಾಕಿಸ್ತಾನ ಪಂದ್ಯ: ಕೇಸರಿ ಜರ್ಸಿಯಲ್ಲಿ ಕಣಕ್ಕಿಳಿಯುತ್ತಾ ಭಾರತ, ಬಿಸಿಸಿಐ ಹೇಳಿದ್ದೇನು ?
24 ವರ್ಷದ ಶುಭಮನ್ ಗಿಲ್ ಶೀಘ್ರದಲ್ಲಿಯೇ ಕ್ರಿಕೆಟ್‌ಗೆ ಮರಳಲಿದ್ದಾರೆ. ಅವರು ಆರೋಗ್ಯ ಶೀಘ್ರದಲ್ಲಿಯೇ ಚೇತರಿಕೆಯನ್ನು ಕಾಣುತ್ತಿದೆ ಆದರೆ ಆಸ್ಟ್ರೇಲಿಯಾ ವಿರುದ್ದ ಪಂದ್ಯದ ವೇಳೆಯಲ್ಲಿ ಅವರ ಪ್ಲೇಟ್ಲೆಟ್ಸ್ 1 ಲಕ್ಷಕ್ಕಿಂತಲೂ ಕಡಿಮೆಯಾಗಿತ್ತು. ಹೀಗಾಗಿ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
Shubman Gill has reached Ahmedabad and will join Indian Team for match against Pakistan, Please God do some miracle and make him match fit ❤️🤞 #INDvsPAK pic.twitter.com/c4hYvhBE6o
— Shubman Gang (@ShubmanGang) October 11, 2023
ದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ದ ಪಂದ್ಯಕ್ಕೂ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾರತ ತಂಡ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಕೂಡ ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಮಾಹಿತಿಯನ್ನು ನೀಡಿದ್ದರು. ಇದೀಗ ಶುಭಮನ್ ಅಹಮದಾಬಾದ್‌ಗೆ ತೆರಳಿರುವ ಸುದ್ದಿ ಅಭಿಮಾನಿಗಳಿಗೆ ಸಂತಸವನ್ನು ತರಿಸಿದೆ.
ಇದನ್ನೂ ಓದಿ : ವಿಶ್ವಕಪ್‌ನಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿದ ದಕ್ಷಿಣ ಆಫ್ರಿಕಾ : ವೇಗದ ಶತಕ ಸಿಡಿಸಿದ ಮಕ್ರಮ್
ಭಾರತ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಏಕದಿನ ಕ್ರಿಕೆಟ್‌ನಲ್ಲಿ ಅಗ್ರ ರಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ನಾಯಕ ಬಾಬರ್ ಅಜಂ ಅಗ್ರಸ್ಥಾನದಲ್ಲಿದ್ದು, ಶುಭಮನ್ ಗಿಲ್ ವಿಶ್ವಕಪ್ ಪಂದ್ಯಾವಳಿಯಲ್ಲಿಯೇ ಅಗ್ರಸ್ಥಾನಕ್ಕೇ ಏರಲಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ಡೆಂಗ್ಯೂ ಶುಭಮನ್ ಗಿಲ್‌ಗೆ ಶಾಕ್ ಕೊಟ್ಟಿದೆ.
ಪಾಕಿಸ್ತಾನ ವಿರುದ್ದ ಪಂದ್ಯಕ್ಕೆ ಶುಭಮನ್ ಗಿಲ್ ಲಭ್ಯತೆ ತೀರಾ ಅಗತ್ಯವಾಗಿತ್ತು. ಶುಭಮನ್ ಗಿಲ್ ವಿರುದ್ದ ಕಣಕ್ಕೆ ಇಳಿದಿರುವ ಇಶಾನ್ ಕಿಶನ್ ಎರಡೂ ಪಂದ್ಯಗಳಲ್ಲಿ ಹೇಳಿಕೊಳ್ಳುವ ಪ್ರದರ್ಶನವನ್ನು ನೀಡಿಲ್ಲ. ಆದರೆ ಭಾರತ ತಂಡ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.
ಸದ್ಯ ಶುಭಮನ್ ಗಿಲ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಏಷ್ಯಾ ಹಾಗೂ ಆಸ್ಟ್ರೇಲಿಯಾ ವಿರುದ್ದ ಸರಣಿಯಲ್ಲಿಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು, ಎರಡೂ ಟ್ರೋಫಿಗಳನ್ನು ಗೆಲ್ಲುವಲ್ಲಿ ಶುಭಮನ್ ಗಿಲ್ ಮಹತ್ವದ ಪಾತ್ರವನ್ನು ವಹಿಸಿದ್ದರು. ಇದೀಗ ವಿಶ್ವಕಪ್‌ನಲ್ಲಿ ತಂಡವನ್ನು ಸೇರ್ಪಡೆಗೊಂಡ್ರೆ ಭಾರತಕ್ಕೆ ಆನೆಬಲ ಬರಲಿದೆ.
Shubman Gill Playing for India vs Pakistan match Here is Shubman Gill Health Big updates