Sourav Ganguly admitted hospital :ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಸೋಮವಾರ ರಾತ್ರಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಆರ್ಟಿ ಪಿಸಿಆರ್ ವರದಿಯಲ್ಲಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ಕೂಡಲೇ ಅವರನ್ನು ಕೋಲ್ಕತ್ತಾದ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.
ಕೋವಿಡ್ ಸಾಂಕ್ರಾಮಿಕ ಶುರುವಾದಾಗಿನಿಂದ ಇದೇ ಮೊದಲ ಬಾರಿಗೆ ಸೌರವ್ ಗಂಗೂಲಿಗೆ ಕೊರೊನಾ ಸೋಂಕು ತಗುಲಿದಂತಾಗಿದೆ. ಸೌರವ್ ಗಂಗೂಲಿ ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಸ್ವೀಕರಿಸಿದ್ದಾರೆ. ಆದರೆ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ವೃತ್ತಿ ಪರ ಕಾರ್ಯದ ನಿಮಿತ್ತ ಸಾಕಷ್ಟು ಪ್ರಯಾಣವನ್ನು ಮಾಡಿದ್ದಾರೆ. 49 ವರ್ಷದ ಸೌರವ್ ಗಂಗೂಲಿಯನ್ನು ಕೋಲ್ಕತ್ತಾದ ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ವೈದ್ಯರು ಸೌರವ್ ಗಂಗೂಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಸೌರವ್ ಗಂಗೂಲಿ ಅವರಿಗೆ ಸೋಮವಾರ ರಾತ್ರಿ ಆರ್ಟಿ ಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು. ಈ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಓಮಿಕ್ರಾನ್ ಆತಂಕ ಬೇರೆ ಇರೋದ್ರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲು ಮಾಡಿರೋದಾಗಿ ಬಿಸಿಸಿಐ ಮೂಲಗಳು ತಿಳಿಸಿವೆ .
ಕೆಲ ಸಮಯದ ಹಿಂದಷ್ಟೇ ಸೌರವ್ ಗಂಗೂಲಿ ಸಹೋದರ ಸ್ನೇಹಾಶಿಷ್ ಗಂಗೂಲಿ ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ವರ್ಷದ ಆರಂಭದಲ್ಲಿ ಹೃದಯಾಘಾತದ ಹಿನ್ನೆಲೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗಾಗಿ ಸೌರವ್ ಗಂಗೂಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಜಿಮ್ ಮಾಡುತ್ತಿದ್ದ ವೇಳೆಯಲ್ಲಿ ಸೌರವ್ ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಬಳಿಕ ಗುಣಮುಖರಾಗಿದ್ದ ಅವರು ಬಿಸಿಸಿಐ ಕೆಲಸಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.
ಇದನ್ನು ಓದಿ : Ghar Wapsi: ಘರ್ ವಾಪಸಿ ಮಾಡಿದ ಒಂದೇ ಕುಟುಂಬದ 9 ಮಂದಿ: ಹಿಂದೂ ಧರ್ಮಕ್ಕೆ ಮರುಮತಾಂತರ
ಇದನ್ನೂ ಓದಿ : Kids register Covid vaccine: ಜನವರಿಯಿಂದ ಮಕ್ಕಳಿಗೆ ಕೊರೊನಾ ಲಸಿಕೆ ನೋಂದಣಿಗೆ ಅನುಮತಿ..!
ಇದನ್ನೂ ಓದಿ : Ahmedabad IPL 2022 : ಗ್ಯಾರಿ ಕ್ರಿಸ್ಟನ್, ಆಶಿಶ್ ನೆಹ್ರಾ, ವಿಕ್ರಮ್ ಸೋಲಂಕಿ ಸೆಳೆಯಲು ಮುಂದಾದ ಅಹಮದಾಬಾದ್
ಇದನ್ನೂ ಓದಿ : Jofra Archer IPL 2022 : ಎಬಿ ಡಿವಿಲಿಯರ್ಸ್ ಬೆನ್ನಲ್ಲೇ ಐಪಿಎಲ್ ಮೆಗಾ ಹರಾಜಿನಿಂದ ಹೊರ ಬಿದ್ದ ಖ್ಯಾತ ಆಟಗಾರ
Sourav Ganguly admitted to hospital after testing positive for Covid