ಸೋಮವಾರ, ಏಪ್ರಿಲ್ 28, 2025
HomeSportsCricketVirat Kohli : ರಾಯಲ್ ಚಾಲೆಂಜರ್ಸ್ ಸೈನ್ಯ ಸೇರಲು ಮುಂಬೈನಿಂದ ಹೊರಟ ರಣಬೇಟೆಗಾರ

Virat Kohli : ರಾಯಲ್ ಚಾಲೆಂಜರ್ಸ್ ಸೈನ್ಯ ಸೇರಲು ಮುಂಬೈನಿಂದ ಹೊರಟ ರಣಬೇಟೆಗಾರ

- Advertisement -

ಮುಂಬೈ : ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವನ್ನು ಸೇರಿಕೊಳ್ಳಲು ರಣಬೇಟೆಗಾರ ಮುಂಬೈನಿಂದ ಹೊರಟಿದ್ದಾನೆ. ಆ ರಣಬೇಟೆಗಾರನ ಹೆಸರು ಕಿಂಗ್ ಕೊಹ್ಲಿ, ವಿರಾಟ್ ಕೊಹ್ಲಿ (Virat Kohli). ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ನಂತರ ಚೆನ್ನೈನಿಂದ ಮುಂಬೈಗೆ ಪ್ರಯಾಣಿಸಿದ್ದ ವಿರಾಟ್ ಕೊಹ್ಲಿ, ತಮ್ಮದೇ ಸಂಸ್ಥೆ ಆಯೋಜಿಸುವ ಸ್ಪೋರ್ಟ್ಸ್ ಹಾರನ್ ಅವಾರ್ಡ್ಸ್ (Sports Honour Awards) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೀಗ ವಿರಾಟ್ ಕೊಹ್ಲಿ ಮುಂಬೈನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಶನಿವಾರ ರಾಯಲ್ ಚಾಲೆಂಜರ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಬೆಂಗಳೂರಿಗೆ ಪ್ರಯಾಣಿಸುವ ಹಾದಿಯಲ್ಲಿ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕರಾಗಿರುವ ವಿರಾಟ್ ಕೊಹ್ಲಿ, ಐಪಿಎಲ್ ಟೂರ್ನಿ ಆರಂಭವಾದ ದಿನದಿಂದಲೂ ಆರ್’ಸಿಬಿ ತಂಡದ ಪರ ಆಡುತ್ತಿದ್ದಾರೆ. ಸತತ 16 ವರ್ಷಗಳಿಂದ ಒಂದೇ ಫ್ರಾಂಚೈಸಿ ಪರ ಆಡುತ್ತಿರುವ ಏಕೈಕ ಆಟಗಾರನೆಂಬ ದಾಖಲೆಯೂ ವಿರಾಟ್ ಕೊಹ್ಲಿ ಹೆಸರಲ್ಲಿದೆ. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 2ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ

ಮಾರ್ಚ್ 31ರಂದು ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯ (IPL 2023) ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ (Gujarat Titans) ತಂಡ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವನ್ನು ಎದುರಿಸಲಿದೆ.

ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಆಟಗಾರರು ಮಾರ್ಚ್ 26ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ಪಂದ್ಯವಾಡಲಿದ್ದಾರೆ. ಅಂತರಾಷ್ಟ್ರೀಯ ಸರಣಿಯನ್ನಾಡುತ್ತಿರುವ ಆಟಗಾರರೆಲ್ಲಾ ಮಾರ್ಚ್ 25ರೊಳಗೆ ಆರ್’ಸಿಬಿ ಕ್ಯಾಂಪ್ ಸೇರುವ ನಿರೀಕ್ಷೆಯಿದ್ದು, ಸಂಪೂರ್ಣ ತಂಡ ಮಾರ್ಚ್ 26ರ ಅಭ್ಯಾಸ ಪಂದ್ಯದಲ್ಲಿ ಆಡಲಿದೆ. ಅದೇ ದಿನ ಆರ್’ಸಿಬಿ ತಂಡದ ಮಾಜಿ ದಿಗ್ಗಜರಾದ ಎಬಿ ಡಿವಿಲಿಯರ್ಸ್ ಮತ್ತು ಕ್ರಿಸ್ ಗೇಲ್ ಅವರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹಾಲ್ ಆಫ್ ಫೇಮ್ ಗೌರವ ನೀಡಲಿದೆ. ಇಬ್ಬರ ಜರ್ಸಿ ನಂಬರ್’ಗಳನ್ನು ರಿಟೈರ್ಡ್ ಮಾಡಿಸುವ ಮೂಲಕ ದಿಗ್ಗಜರಿಗೆ ಗೌರವ ಸಲ್ಲಿಸಲು ಆರ್’ಸಿಬಿ ಫ್ರಾಂಚೈಸಿ ಮುಂದಾಗಿದೆ.

ಇದನ್ನೂ ಓದಿ : IPL Injury : ಐಪಿಎಲ್ ಫ್ರಾಂಚೈಸಿಗಳಿಗೆ “ಇಂಜ್ಯುರಿ” ಶಾಕ್, ಯಾವೆಲ್ಲಾ ತಂಡಗಳಿಗೆ ತಟ್ಟಿದೆ ಗಾಯದ ಬಿಸಿ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದನ್ನೂ ಓದಿ : IPL 2023 RCB : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೆಸ್ಟ್ ಪ್ಲೇಯಿಂಗ್ XI, ಸ್ಟ್ರೆಂತ್ & ವೀಕ್ನೆಸ್

Sports Honor Awards : ಐಪಿಎಲ್-2023 : ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ತಂಡ :

ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್’ವೆಲ್, ಮಹಿಪಾಲ್ ಲೋಮ್ರೊರ್, ದಿನೇಶ್ ಕಾರ್ತಿಕ್,ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್’ವುಡ್, ಅನುಜ್ ರಾವತ್, ಆಕಾಶ್ ದೀಪ್, ಫಿನ್ ಅಲೆನ್, ಸುಯಾಶ್ ಪ್ರಭುದೇಸಾಯಿ, ಕರಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲೀ, ರೀಸಿ ಟಾಪ್ಲೀ, ಹಿಮಾನ್ಶು ಶರ್ಮಾ, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮೈಕೆಲ್ ಬ್ರೇಸ್’ವೆಲ್.

Sports Honor Awards : A warrior who left Mumbai to join the Royal Challengers army

RELATED ARTICLES

Most Popular