ಸೋಮವಾರ, ಜೂನ್ 16, 2025
HomeSportsCricketRavindra Jadeja: 10 ದಿನಗಳ ನಂತರ ಬೆಡ್‌ನಿಂದ ಮೇಲೆದ್ದು ನಿಂತ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜ

Ravindra Jadeja: 10 ದಿನಗಳ ನಂತರ ಬೆಡ್‌ನಿಂದ ಮೇಲೆದ್ದು ನಿಂತ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜ

- Advertisement -

ಮುಂಬೈ: (Team India) ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜ (Ravindra Jadeja)ಅಭಿಮಾನಿಗಳಿಗೊಂದು ಶುಭಸುದ್ದಿ. (T20 World Cup)ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗದೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದ ರವೀಂದ್ರ ಜಡೇಜ, ಈಗ ಗುಡ್ ನ್ಯೂಸ್ ಕೊಟ್ಟಿದ್ದಾರೆ.ಬಲ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಕಂಪ್ಲೀಟ್ ಬೆಡ್ ರೆಸ್ಟ್’ನಲ್ಲಿದ್ದ ರವೀಂದ್ರ ಜಡೇಜ ಈಗ ಬೆಡ್’ನಿಂದ ಮೇಲೆದ್ದು (Ravindra Jadeja got out of bed) ಸ್ಟ್ರೆಚರ್ ಮೂಲಕ ನಡೆದಾಡಲು ಆರಂಭಿಸಿದ್ದಾರೆ. ತಮ್ಮ ನೆಚ್ಚಿನ ಕ್ರಿಕೆಟ್ ಹೀರೋ ಜಡೇಜ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಏಷ್ಯಾ ಕಪ್ ಟೂರ್ನಿಯಲ್ಲಿ (Asia Cup 2022) ಆಡುತ್ತಿದ್ದ ವೇಳೆ ರವೀಂದ್ರ ಜಡೇಜ (Ravindra Jadeja) ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಹಾಂಕಾಂಗ್ ವಿರುದ್ಧದ ಪಂದ್ಯ ನಂತರ ಜಡೇಜ ಅವರಿಗೆ ಬಲ ಮೊಣಕಾಲಿನಲ್ಲಿ ಗಾಯ ಕಾಣಿಸಿಕೊಂಡಿತ್ತು. ಹೀಗಾಗಿ ಟೂರ್ನಿಯಿಂದಲೇ ಹೊರ ಬಿದ್ದಿದ್ದರು. ಜಡೇಜ ಬದಲು ಎಡಗೈ ಸ್ಪಿನ್ ಆಲ್ರೌಂಡರ್ (Akshar Patel) ಅಕ್ಷರ್ ಪಟೇಲ್ ಟೀಮ್ ಇಂಡಿಯಾ (Team India)ಸೇರಿಕೊಂಡಿದ್ದರು.

(Asia Cup)ಏಷ್ಯಾ ಕಪ್ ಟೂರ್ನಿಯಲ್ಲಿ ಅರ್ಧದಲ್ಲೇ ತೊರೆದು ಮುಂಬೈಗೆ ವಾಪಸ್ಸಾಗಿದ್ದ ರವೀಂದ್ರ ಜಡೇಜ ಸೆಪ್ಟೆಂಬರ್ 5ರಂದು ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಆ ವಿಚಾರವನ್ನು ಸ್ವತಃ ಅವರೇ ಇನ್’ಸ್ಟಾಗ್ರಾಂ ಪೋಸ್ಟ್ ಮೂಲಕ ಹಂಚಿಕೊಂಡಿದ್ದದರು. “ಸರ್ಜರಿ ಸಕ್ಸಸ್ ಆಗಿದೆ. ಬಿಸಿಸಿಐ, ಟೀಮ್ ಇಂಡಿಯಾ (India Team)ಆಟಗಾರರು, ಸಹಾಯಕ ಸಿಬ್ಬಂದಿ, ಫಿಸಿಯೋ, ಡಾಕ್ಟರ್ಸ್ ಮತ್ತು ಕ್ರಿಕೆಟ್ ಪ್ರಿಯರಿಗೆ ಧನ್ಯವಾದಗಳು. ಸದ್ಯದಲ್ಲೇ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದೇನೆ. ನನ್ನ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಕೃತಜ್ಞತೆಗಳು” ಎಂದು ರವೀಂದ್ರ ಜಡೇಜ ಇನ್’ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು.

https://www.instagram.com/p/CiKo5RTKakq/?utm_source=ig_web_copy_link

ಐಸಿಸಿ ಟಿ20 ವಿಶ್ವಕಪ್(ICC T20 World Cup) ವೇಳೆಗೆ ರವೀಂದ್ರ ಜಡೇಜ ಚೇತರಿಸಿಕೊಳ್ಳುವ ಸಾಧ್ಯತೆಗಳಿಲ್ಲದ ಕಾರಣ ಅವರನ್ನು ವಿಶ್ವಕಪ್ ತಂಡದಿಂದ ಹೊರಗಿಡಲಾಗಿದೆ. ಮೂಲಗಳ ಪ್ರಕಾರ ರವೀಂದ್ರ ಜಡೇಜ ಸಂಪೂರ್ಣವಾಗಿ ಚೇತರಿಸಿಕೊಂಡು ಕ್ರಿಕೆಟ್ ಮೈದಾನಕ್ಕೆ ಮರಳು ಕನಿಷ್ಠ ಮೂರು ತಿಂಗಳು ಹಿಡಿಯಲಿದೆ. ಹೀಗಾಗಿ (ICC T20 World Cup)ಟಿ20 ವಿಶ್ವಕಪ್ ತಂಡದಲ್ಲಿ ಜಡೇಜ ಬದಲು ಗುಜರಾತ್’ನ ಮತ್ತೊಬ್ಬ ಎಡಗೈ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ.

ಟಿ20 ವಿಶ್ವಕಪ್ (T20 World Cup 2022) ಟೂರ್ನಿಯಲ್ಲಿ ಆಡಲಿರುವ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಇದನ್ನೂ ಓದಿ : ಭಾರತ Vs ದಕ್ಷಿಣ ಆಫ್ರಿಕಾ ಟಿ20 ಪಂದ್ಯದಲ್ಲಿ ಬಿಸಿಸಿಐ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಸಂಜು ಸ್ಯಾಮ್ಸನ್ ಫ್ಯಾನ್ಸ್

ಇದನ್ನೂ ಓದಿ : ರಾಬಿನ್ ಉತ್ತಪ್ಪ ಅಭಿಮಾನಿಗಳಿಗೆ ಗುಡ್ ನ್ಯೂಸ್.. ನಿವೃತ್ತಿಯಾದರೂ ಮತ್ತೆ ಆಡಲಿದ್ದಾರೆ ಕೊಡಗಿನ ವೀರ

ಐಸಿಸಿ ಟಿ20 ವಿಶ್ವಕಪ್(ICC T20 World Cup) ಟೂರ್ನಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದು, ಅಕ್ಟೋಬರ್ 23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುವ ತನ್ನ ಮೊದಲ ಪಂದ್ಯದಲ್ಲಿ 2007ರ ಚಾಂಪಿಯನ್ ಭಾರತ ತಂಡ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

Star all-rounder Ravindra Jadeja got out of bed after 10 days

RELATED ARTICLES

Most Popular