ಮುಂಬೈನ ಗಲ್ಲಿಯಲ್ಲಿ ಮಕ್ಕಳೊಂದಿಗೆ ಟೆನಿಸ್ ಬಾಲ್ ಕ್ರಿಕೆಟ್ ಆಡಿ “ಸುಪ್ಲಾ ಶಾಟ್” ಬಾರಿಸಿದ ಸೂರ್ಯಕುಮಾರ್ ಯಾದವ್

ಮುಂಬೈ: ಟಿ20 ಕ್ರಿಕೆಟ್’ನ ನಂ.1 ಬ್ಯಾಟ್ಸ್’ಮನ್ ಸೂರ್ಯಕುಮಾರ್ ಯಾದವ್ (Suryakumar Yadav Supla shot), ಮುಂಬೈನ ಗಲ್ಲಿಯಲ್ಲಿ ಮಕ್ಕಳೊಂದಿಗೆ ಟೆನಿಸ್ ಬಾಲ್ ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಇಂದೋರ್’ನ ಹೋಳ್ಕರ್ ಕ್ರೀಡಾಂಗಣದಲ್ಲಿ ಕಳೆದ ಶುಕ್ರವಾರ ಅಂತ್ಯಗೊಂಡ 3ನೇ ಟೆಸ್ಟ್ ಪಂದ್ಯದ ನಂತರ ಟೀಮ್ ಇಂಡಿಯಾ ಆಟಗಾರರಿಗೆ 3 ದಿನಗಳ ಬ್ರೇಕ್ ಸಿಕ್ಕಿತ್ತು.

ಈ ಹಿನ್ನೆಲೆಯಲ್ಲಿ ಇಂದೋರ್’ನಿಂದ ತವರೂರು ಮುಂಬೈಗೆ ಆಗಮಿಸಿದ್ದ ಸೂರ್ಯಕುಮಾರ್ ಯಾದವ್, ತಮ್ಮ ಮನೆ ಸಮೀಪದ ಗಲ್ಲಿಯಲ್ಲಿ ಮಕ್ಕಳೊಂದಿಗೆ ಟೆನಿಸ್ ಬಾಲ್ ಕ್ರಿಕೆಟ್ ಆಡಿದ್ದಾರೆ. ಈ ವೇಳೆ ಸೂರ್ಯಕುಮಾರ್ ಯಾದವ್ ತಮ್ಮ ನೆಚ್ಚಿನ “ಸುಪ್ಲಾ ಶಾಟ್” (Supla Shot) ಬಾರಿಸಿ ಗಮನ ಸೆಳೆದಿದ್ದಾರೆ. ಈ ವಿಡಿಯೊವನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ಇನ್’ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದೆ.

https://www.instagram.com/reel/CpbzcEajoi4/?utm_source=ig_web_copy_link

32 ವರ್ಷದ ಸೂರ್ಯಕುಮಾರ್ ಯಾದವ್ ಬಾರ್ಡರ್-ಗವಾಸ್ಕರ್ ಟೆಸ್ಟ್ (Border-Gavaskar test series) ಸರಣಿಯ ಮೊದಲ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದರು. ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಧೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದಿದ್ದ ಸೂರ್ಯ ಕೇವಲ 7 ರನ್ ಗಳಿಸಿ ಔಟಾಗಿದ್ದರು. ಆದರೆ 2ನೇ ಟೆಸ್ಟ್ ಪಂದ್ಯಕ್ಕೆ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ ಕಾರಣ ಮುಂದಿನ ಎರಡೂ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್’ಗೆ ಪ್ಲೇಯಿಂಗ್ XIನಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲೂ ಸೂರ್ಯಕುಮಾರ್ ಯಾದವ್ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ.

ಇದನ್ನೂ ಓದಿ : Prithvi Shaw meets Kiccha Sudeep: ಕಿಚ್ಚ ಸುದೀಪ್ ಭೇಟಿ ಮಾಡಿದ ಪೃಥ್ವಿ ಶಾ, ಇನ್’ಸ್ಟಾಗ್ರಾಮ್’ನಲ್ಲಿ ಸಂತಸ ಹಂಚಿಕೊಂಡ ಮುಂಬೈಕರ್

ಇದನ್ನೂ ಓದಿ : Women’s Premier League: ಸತತ ಎರಡು ಸೋಲುಗಳ ಎಫೆಕ್ಟ್, ರಾಯಲ್ ಚಾಲೆಂಜರ್ಸ್ ತಂಡದ ಪ್ಲೇ ಆಫ್ ಹಾದಿ ಕಷ್ಟ ಕಷ್ಟ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಭಾರತ ಗೆದ್ದಿದ್ರೆ, ಇಂದೋರ್’ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 9 ವಿಕೆಟ್’ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಸರಣಿಯಲ್ಲಿ ಭಾರತ 2-1ರಲ್ಲಿ ಮುನ್ನಡೆಯಲ್ಲಿದ್ದು, 4ನೇ ಟೆಸ್ಟ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಐಸಿಸಿ ಟೆಟ್ ಚಾಂಪಿಯನ್’ಷಿಪ್’ನಲ್ಲಿ ಫೈನಲ್ ಪ್ರವೇಶಿಸಬೇಕಾದರೆ ಅಹ್ಮದಾಬಾದ್ ಟೆಸ್ಟ್ ಪಂದ್ಯವನ್ನು ಭಾರತ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆಸ್ಟ್ರೇಲಿಯಾ ತಂಡ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನಲ್ಲಿ ಫೈನಲ್ ತಲುಪಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನ ಫೈನಲ್ ಪಂದ್ಯ ಮುಂದಿನ ಜೂನ್’ನಲ್ಲಿ ಇಂಗ್ಲೆಂಡ್’ನ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ.

ಇದನ್ನೂ ಓದಿ : MS Dhoni : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಕ್ಯಾಪ್ಟನ್ ಕೂಲ್ ಧೋನಿ ಹವಾ, ಮಹಿಳಾ ಮಣಿಗಳಿಗೆ ಮಾಹಿಯೇ ದ್ರೋಣಾಚಾರ್ಯ

Suryakumar Yadav Supla shot: Suryakumar Yadav played tennis ball cricket with children in Mumbai’s alley and hit the “Supla shot”.

Comments are closed.