ಲಂಡನ್: ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Trouble in Virat Kohli), ಈ ವರ್ಷ ನಡೆಯುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳಲಿದ್ದಾರೆಯೇ? ಇಂಥದ್ದೊಂದು ಪ್ರಶ್ನೆ ಕ್ರಿಕೆಟ್ ಜಗತ್ತಿನಲ್ಲಿ ಸದ್ಯ ಸದ್ದು ಮಾಡ್ತಿದೆ. ಇತ್ತೀಚಿನ ತಿಂಗಳುಗಳಲ್ಲಿ ವೃತ್ತಿಜೀವನದ ಅತ್ಯಂತ ಕಳಪೆ ಫಾರ್ಮ್”ನಲ್ಲಿರುವ ವಿರಾಟ್ ಕೊಹ್ಲಿ, ಕಳೆದ ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಶತಕ ಬಾರಿಸಿಲ್ಲ. ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್”ಗಳಲ್ಲಿ ಕೊಹ್ಲಿ ದಯನೀಯ ವೈಫಲ್ಯ ಎದುರಿಸಿದ್ದರು.
ಇದೀಗ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ 2 ಬಾಗೂ 3ನೇ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡಲಿದ್ದು, ಆ ಎರಡು ಪಂದ್ಯಗಳೇ ಕೊಹ್ಲಿಯ ಟಿ20 ಕರಿಯರ್ ಅನ್ನು ನಿರ್ಧಾರ ಮಾಡಲಿವೆ ಎನ್ನಲಾಗ್ತಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯ ನಂತರ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳಲಿದೆ. ವಿಂಡೀಸ್ ನಾಡಿನಲ್ಲಿ ನಡೆಯಲಿರುವ 3 ಪಂದ್ಯಗಳ ಏಕದಿನ ಸರಣಿಗೆ ಈಗಾಗ್ಲೇ ಶಿಖರ್ ಧವನ್ ನಾಯಕತ್ವದಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ರಿಷಭ್ ಪಂತ್”ಗೆ ವಿಶ್ರಾಂತಿ ನೀಡಲಾಗಿದೆ.
🚨 NEWS 🚨: The All-India Senior Selection Committee has picked the squad for the three-match ODI series against the West Indies to be played at the Queen's Park Oval, Port of Spain, Trinidad.#TeamIndia | #WIvIND
— BCCI (@BCCI) July 6, 2022
ಏಕದಿನ ಸರಣಿಯ ನಂತರ ಟೀಮ್ ಇಂಡಿಯಾ, ಕೆರೆಬಿಯನ್ನರ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದ್ದು, ನಾಯಕ ರೋಹಿತ್ ಶರ್ಮಾ, ವಿಕೆಟ್ ಕೀಪರ್ ರಿಷಭ್ ಪಂತ್ ಮತ್ತು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಸರಣಿಯಲ್ಲಿ ಆಡಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಆಡುವ ಬಗ್ಗೆ ಇನ್ನೂ ಖಚಿತವಾಗಿಲ್ಲ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಬ್ಬರಿಸಿದರೆ ಮಾತ್ರ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿರುವ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲಿದ್ದಾರೆ. ಒಂದು ವೇಳೆ ವಿಂಡೀಸ್ ವಿರುದ್ಧದ ಸರಣಿಗೆ ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡ್ರೆ, ಮುಂದಿನ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಕಿಂಗ್ ಕೊಹ್ಲಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ. ಈಗಾಗ್ಲೇ 3ನೇ ಕ್ರಮಾಂಕದಲ್ಲಿ ಆಲ್ರೌಂಡರ್ ದೀಪಕ್ ಹೂಡ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ 2ನೇ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿ ಭರವಸೆ ಮೂಡಿಸಿರುವ ಕಾರಣ, ವಿರಾಟ್ ಕೊಹ್ಲಿ ಮೇಲೆ ಒತ್ತಡ ಹೆಚ್ಚಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಂದಿನ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ವೈಫಲ್ಯ ಎದುರಿಸಿದರೆ, ಅದೇ ಕಿಂಗ್ ಕೊಹ್ಲಿಯ ಟಿ20 ಕರಿಯರ್”ಗೆ ಅಂತ್ಯ ಹಾಡಿದ್ರೂ ಅಚ್ಚರಿ ಪಡ್ಬೇಕಿಲ್ಲ.
ಐಪಿಎಲ್-2022 ಟೂರ್ನಿಯಲ್ಲೂ ದಯನೀಯ್ ವೈಫಲ್ಯ ಎದುರಿಸಿದ್ದ 33 ವರ್ಷದ ವಿರಾಟ್ ಕೊಹ್ಲಿ, ಆಡಿದ 16 ಪಂದ್ಯಗಳಿಂದ ಕೇವಲ ಎರಡು ಅರ್ಧಶತಕಗಳ ಸಹಿತ 341 ರನ್ ಕಲೆ ಹಾಕಿದ್ದರು. ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ಕೇವಲ 116ರ ಸ್ಟ್ರೈಕ್”ರೇಟ್”ನಲ್ಲಿ ಆಡಿದ್ದು, ಅವರ ಬ್ಯಾಟಿಂಗ್ ಸಾಮರ್ಥ್ಯವನ್ನೇ ಪ್ರಶ್ನಿಸುವಂತೆ ಮಾಡಿತ್ತು.
ಐಪಿಎಲ್-2022: ವಿರಾಟ್ ಕೊಹ್ಲಿ ಸಾಧನೆ
ಪಂದ್ಯ: 16
ರನ್: 341
ಸರಾಸರಿ: 22.73
ಅರ್ಧಶತಕ: 02
ಸ್ಟ್ರೈಕ್”ರೇಟ್: 115.98
ಅಂತಾರಾಷ್ಟ್ರೀಯ ಟಿ20ಯಲ್ಲಿ ಕೊಹ್ಲಿ ಸಾಧನೆ
ಪಂದ್ಯ: 97
ರನ್: 3,296
ಸರಾಸರಿ: 51.50
ಅರ್ಧಶತಕ: 30
ಸ್ಟ್ರೈಕ್”ರೇಟ್: 137.67
ಇದನ್ನೂ ಓದಿ : MS Dhoni 41st birthday : ಎಂಎಸ್ ಧೋನಿಗೆ 41ನೇ ಹುಟ್ಟುಹಬ್ಬ: ವಿಶೇಷ ಗಿಫ್ಟ್ ಕೊಟ್ಟ ಪತ್ನಿ ಸಾಕ್ಷಿ, ರಿಷಬ್ ಪಂತ್
T20 career trouble in Virat Kohli, T20 World Cup ticket missing for King Kohli