T20 World Cup 2022 India : ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಾಡಲಿದೆ ಟೀಮ್ ಇಂಡಿಯಾ

ಬೆಂಗಳೂರು: ಸತತ 9 ವರ್ಷಗಳಿಂದ ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗುತ್ತಾ ಬಂದಿರುವ ಭಾರತ ತಂಡ, ಈ ವರ್ಷ ಟಿ20 ವಿಶ್ವಕಪ್ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಗೆಲ್ಲುವ ಮೂಲಕ ಭಾರತದ ವಿಶ್ವಕಪ್ ತಯಾರಿಗೆ ಭರ್ಜರಿ ಆರಂಭ ಸಿಕ್ಕಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿ ( T20 World Cup 2022 India ) ಮುಂದಿನ ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಈ ಹೈವೋಲ್ಟೇಜ್ ಟೂರ್ನಿಗೂ ಮುನ್ನ ಟೀಮ್ ಇಂಡಿಯಾ, ತವರು ನೆಲದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ತಲಾ ಮೂರು ಪಂದ್ಯಗಳ ಟಿ20 ಸರಣಿಗಳನ್ನಾಡಲಿದೆ.

ಆಸ್ಟ್ರೇಲಿಯಾ ವಿರುದ್ಧ ಸೆಪ್ಟೆಂಬರ್ 20ರಿಂದ 25ರ ಮಧ್ಯೆ 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ದಕ್,ಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 28ರಿಂದ ಆಕ್ಟೋಬರ್ 1ರವರೆಗೆ ನಡೆಯಲಿದೆ. ನಂತರ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನೂ ಆಡಲಿದೆ. ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳಿಗೆ ಆತಿಥ್ಯ ವಹಿಸುವ ನಿರ್ಧಾರವನ್ನು ಬಿಸಿಸಿಐ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.

ಅಕ್ಟೋಬರ್ 23ರಂದು ಮೆಲ್ಬೊರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

T20 World Cup 2022 India : ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯ ವೇಳಾಪಟ್ಟಿ

ಮೊದಲ ಟಿ20: ಸೆಪ್ಟೆಂಬರ್ 20 (ಮೊಹಾಲಿ)
ಎರಡನೇ ಟಿ20: ಸೆಪ್ಟೆಂಬರ್ 23 (ನಾಗ್ಪುರ)
ಮೂರನೇ ಟಿ20: ಸೆಪ್ಟೆಂಬರ್ 25 (ಹೈದರಾಬಾದ್)

ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯ ವೇಳಾಪಟ್ಟಿ
ಮೊದಲ ಟಿ20: ಸೆಪ್ಟೆಂಬರ್ 28 (ತಿರುವನಂತಪುರಂ)
ಎರಡನೇ ಟಿ20: ಅಕ್ಟೋಬರ್ 01 (ಗುವಾಹಟಿ)
ಮೂರನೇ ಟಿ20: ಅಕ್ಟೋಬರ್ 03 (ಇಂದೋರ್)

ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿಯ ವೇಳಾಪಟ್ಟಿ
ಮೊದಲ ಏಕದಿನ: ಅಕ್ಟೋಬರ್ 06 (ರಾಂಚಿ)
ಎರಡನೇ ಏಕದಿನ: ಅಕ್ಟೋಬರ್ 09 (ಲಕ್ನೋ)
ಮೂರನೇ ಏಕದಿನ: ಅಕ್ಟೋಬರ್ 11 (ದೆಹಲಿ)

ಇದನ್ನೂ ಓದಿ : India Star Shreyas Iyer : ಶ್ರೇಯಸ್ ಅಯ್ಯರ್ ಭೇಟಿ ಮಾಡಲು ವಿಂಡೀಸ್’ನಲ್ಲಿ ಎರಡು ಗಂಟೆ ಕಾದು ಕುಳಿತ ಹುಡುಗಿ

ಇದನ್ನೂ ಓದಿ : KL Rahul Health Report : ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿದ್ದಾರೆ ರಾಹುಲ್ ?

T20 World Cup 2022 India : India To Play Home T20 and ODIs Ahead

Comments are closed.