T20 World Cup Squad: ಟಿ20 ವಿಶ್ವಕಪ್‌ ತಂಡಕ್ಕೆ ಹಾರ್ದಿಕ್‌ ಪಾಂಡ್ಯ ನಾಯಕ : ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಔಟ್

ಮುಂಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಈಗಾಗಲೇ ಮುಕ್ತಾಯವನ್ನು ಕಂಡಿದ್ದು, ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ (T20 World Cup Squad) ಸಜ್ಜುಗೊಳ್ಳುತ್ತಿದೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದ ಹಾರ್ದಿಕ್‌ ಪಾಂಡ್ಯ (Hardik Pandya) ವಿಶ್ವಕಪ್‌ ತಂಡದ ನಾಯಕನಾಗಲಿದ್ದಾರೆ. ಆದ್ರೆ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat kohli) ಹಾಗೂ ಹಾಲಿ ನಾಯಕ ರೋಹಿತ್‌ ಶರ್ಮಾ ತಂಡದಿಂದ ಔಟ್‌ ಆಗಿದ್ದಾರೆ. ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ ಇದೀಗ ಭಾರತ ಟಿ20 ವಿಶ್ವಕಪ್ ತಂಡವನ್ನು ಆಯ್ಕೆ ಮಾಡಿದ್ದಾರೆ.

ಐಪಿಎಲ್ ಪ್ರದರ್ಶನದ ಆಧಾರದ ಮೇಲೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರ ಭಾರತ ಟಿ 20 ವಿಶ್ವಕಪ್ ತಂಡದಲ್ಲಿ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತು ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅವರಿಗೆ ಸ್ಥಾನವನ್ನು ನೀಡಿಲ್ಲ. ಚೋಪ್ರಾ ಅವರ ಐಪಿಎಲ್ ಸಾಧನೆಗಳ ಆಧಾರದ ಮೇಲೆ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ಟಿ20 ವಿಶ್ವಕಪ್ ತಂಡದ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.

ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಚೊಚ್ಚಲ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಪ್ರಶಸ್ತಿಯನ್ನು ಜಯಿಸಿದೆ. KL ರಾಹುಲ್ ಹೊರತುಪಡಿಸಿ, ರೋಹಿತ್ ಮತ್ತು ವಿರಾಟ್ ಅವರಿಗೆ ತಂಡದಲ್ಲಿ ಸ್ಥಾನ ನೀಡಿಲ್ಲ. ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ಅವರನ್ನು ಆರಂಭಿಕ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

ಯೂಟ್ಯೂಬ್‌ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಂಡದಲ್ಲಿ ಕೆಎಲ್ ರಾಹುಲ್ ಅವರಿಗೆ ಅಗ್ರಸ್ಥಾನವನ್ನು ನೀಡಿದ್ದಾರೆ. ರಾಹುಲ್ ಅವರು 15-17 ಓವರ್‌ಗಳವರೆಗೆ ಆಡಬಹುದು. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಅವರು 600 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಲ್ಲದೇ ರಾಹುಲ್‌ ಜೊತೆಯಾಗಿ ಇಶಾನ್ ಕಿಶನ್ ಅವರಿಗೆ ಸ್ಥಾನವನ್ನು ನೀಡಿದ್ದಾರೆ.

ನಾನು ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಆಡುವುದರ ಜೊತೆಗೆ ಉತ್ತಮ ಫಿನಿಶರ್‌ ಆಗಿರಬಹುದು. ಬಳಿಕ ದಿನೇಶ್‌ ಕಾರ್ತಿಕ್‌ ಅವರಿಗೆ ಸ್ಥಾನವನ್ನು ನೀಡಿದ್ದು, ಉತ್ತಮ ವಿಕೆಟ್‌ ಕೀಪರ್‌ ಕೂಡ ಹೌದು ಎಂದಿದ್ದಾರೆ. ಸದ್ಯ ಐಪಿಎಲ್‌ನಲ್ಲಿ ಅವರು 180-190 ಸ್ಟ್ರೈಕ್ ರೇಟ್‌ನಲ್ಲಿಆಟವಾಡಿದ್ದಾರೆ. ಅಲ್ಲದೇ ಹಲವು ಪಂದ್ಯಗಳಲ್ಲಿ ಫಿನಿಶರ್‌ ಆಗಿ ತಂಡಕ್ಕೆ ಗೆಲುವನ್ನು ತಂದುಕೊಟ್ಟಿದ್ದಾರೆ.

ಆಕಾಶ್ ಚೋಪ್ರಾ ಭಾರತ ಟಿ20 ವಿಶ್ವಕಪ್ ತಂಡ: ಕೆಎಲ್ ರಾಹುಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಸಿ), ದಿನೇಶ್ ಕಾರ್ತಿಕ್, ಕೃನಾಲ್ ಪಾಂಡ್ಯ, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಕುಲದೀಪ್ ಯಾದವ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ.

ಇದನ್ನೂ ಓದಿ : FIR against Mahendra Singh Dhoni : ಟೀಂ ಇಂಡಿಯಾ ಮಾಜಿ ನಾಯಕ ಧೋನಿ ವಿರುದ್ಧ ದಾಖಲಾಯ್ತು ಎಫ್​ಐಆರ್​

ಇದನ್ನೂ ಓದಿ : Saurav Ganguly : ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ : ಸ್ಪಷ್ಟನೆ ಕೊಟ್ಟ ಶಾ

T20 World Cup squad: Hardik Pandya captain, Virat kohli and Rohit Sharma out

Comments are closed.