Team India : ಕಿವೀಸ್, ಆಸೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ, ಯಾರಿಗೆಲ್ಲಾ ಸ್ಥಾನ?

ಬೆಂಗಳೂರು: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಜನವರಿ 18ರಂದು ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿ ಹಾಗೂ ಜನವರಿ 27ಕ್ಕೆ ಆರಂಭವಾಗುವ 3 ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾ (Team India) ವನ್ನು ಪ್ರಕಟಿಸಲಾಗಿದೆ. ಮದುವೆಯ ಕಾರಣ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಅಲಭ್ಯರಾಗಿರುವ ಕನ್ನಡಿಗ ಕೆ.ಎಲ್ ರಾಹುಲ್, ಆಸ್ಟ್ರೇಲಿಯಾ ವಿರುದ್ಥದ ಟೆಸ್ಟ್ ಸರಣಿಗೆ ತಂಡದ ಉಪನಾಯಕನಾಗಿ ವಾಪಸ್ಸಾಗಲಿದ್ದಾರೆ.

ಕಿವೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿರುವ ತಂಡದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅವರನ್ನು ಹೊರಗಿಡಲಾಗಿದೆ. ಇದೇ ವೇಳೆ ಫೆಬ್ರವರಿ 9ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ (India’s ODI squad against New Zealand) :
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ಉಪನಾಯಕ), ಸೂರ್ಯಕುಮಾರ್ ಯಾದವ್, ಕೆ.ಎಸ್ ಭರತ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ (India’s T20I squad against New Zealand):
ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್(ಉಪನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಕೇಶ್ ಕುಮಾರ್.

ಇದನ್ನೂ ಓದಿ : Rahul Dravid health problem : ರಾಹುಲ್ ದ್ರಾವಿಡ್’ಗೆ BP ಪ್ರಾಬ್ಲಮ್, ಟೀಮ್ ಇಂಡಿಯಾ ಕ್ಯಾಂಪ್ ತೊರೆದು ಬೆಂಗಳೂರಿಗೆ ಬಂದ ಕೋಚ್

ಇದನ್ನೂ ಓದಿ : Veda Krishnamurthy marriage : ತಾಯಿಯ ಜನ್ಮದಿನದಂದೇ ಪ್ರೀತಿಸಿದ ಹುಡುಗನ ರಿಜಿಸ್ಟರ್ ಮದುವೆಯಾದ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

ಇದನ್ನೂ ಓದಿ : ನಾಳೆಯಿಂದ ಮಹಿಳಾ U19 ವಿಶ್ವಕಪ್; ಶೆಫಾಲಿ ವರ್ಮಾ ಸಾರಥ್ಯದ ಭಾರತಕ್ಕೆ ದಕ್ಷಿಣ ಆಫ್ರಿಕಾ ಮೊದಲ ಎದುರಾಳಿ

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ(India’s Test squad for the first two Tests against Australia):
ರೋಹಿತ್ ಶರ್ಮಾ(ನಾಯಕ), ಕೆ.ಎಲ್ ರಾಹುಲ್(ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್ ಭರತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಆರ್.ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜೈದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.

Team India announced for the series against Kiwis, Aussies, who has a place?

Comments are closed.