ಆಸೀಸ್ ವಿರುದ್ಧದ ಕೊನೆಯ 2 ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ ಪ್ರಕಟ, ವೈಫಲ್ಯದ ನಡುವೆಯೂ ರಾಹುಲ್ ಸ್ಥಾನಕ್ಕಿಲ್ಲ ಧಕ್ಕೆ

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾವನ್ನು ಪ್ರಕಚಿಸಲಾಗಿದ್ದು, ವೈಫಲ್ಯದ ನಡುವೆಯೂ ಕನ್ನಡಿಗ ಕೆ.ಎಲ್ ರಾಹುಲ್ (KL Rahul Select) ಅವರ ಮೇಲೆ ಟೀಮ್ ಮ್ಯಾನೇಜ್ಮೆಂಟ್ ನಂಬಿಕೆಯಿಟ್ಟಿದೆ. ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳ 3 ಇನ್ನಿಂಗ್ಸ್’ಗಳಲ್ಲೂ ರಾಹುಲ್ (KL Rahul Select)ಎಡವಿದ್ದರು. 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದ್ದು, 3ನೇ ಟೆಸ್ಟ್ ಪಂದ್ಯ ಮಾರ್ಚ್ 1ರಂದು ಇಂದೋರ್’ನಲ್ಲಿ ಆರಂಭವಾಗಲಿದೆ. 4ನೇ ಹಾಗೂ ಅಂತಿಮ ಟೆಸ್ಟ್ ಮಾರ್ಚ್ 13ರಂದು ಅಹ್ಮದಾಬಾದ್’ನಲ್ಲಿ ಆರಂಭವಾಗಲಿದೆ.

ಮಾರ್ಚ್ 17ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೂ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕೌಟುಂಬಿಕ ಕಾರಣಗಳ ಕಾರಣ ಮೊದಲ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ 3 ಹಾಗೂ 4ನೇ ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜೈದೇವ್ ಉನಾದ್ಕಟ್, ಕುಲ್ದೀಪ್ ಯಾದವ್.

ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜೈದೇವ್ ಉನಾದ್ಕಟ್.

ಇದನ್ನೂ ಓದಿ : Axar Patel : ಟೀಮ್ ಇಂಡಿಯಾಗೆ ಆಪದ್ಬಾಂಧವನಾದ ಅಕ್ಷರ್, ರೋಚಕ ಘಟ್ಟದಲ್ಲಿ ದೆಹಲಿ ಟೆಸ್ಟ್; 2ನೇ ದಿನ ಆಸೀಸ್ ಮೇಲುಗೈ

ಇದನ್ನೂ ಓದಿ : Virat Kohli world record : ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಅತಿ ವೇಗದ 25 ಸಾವಿರ ರನ್; ಸಚಿನ್ ವಿಶ್ವದಾಖಲೆ ಪುಡಿಗಟ್ಟಿದ ಕಿಂಗ್ ಕೊಹ್ಲಿ

Comments are closed.