Virat Kohli Big Statement : “ಏಷ್ಯಾ ಕಪ್, ವಿಶ್ವಕಪ್ ಗೆಲ್ಲಲು ಯಾವ ತ್ಯಾಗಕ್ಕೂ ಸಿದ್ಧ” ಕೊಹ್ಲಿ ಮಾತಿನ ಅರ್ಥವೇನು ?

ಬೆಂಗಳೂರು: ಕಳೆದರೆಡು ವರ್ಷಗಳಿಂದ ತಮ್ಮ ಅಸಲಿ ಆಟದ ಖದರ್ ಕಳೆದುಕೊಂಡಿರುವ ಟೀಮ್ ಇಂಡಿಯಾದ ಮಾಜಿ ನಾಯಕ, ಆಧುನಿಕ ಬ್ಯಾಟಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ (Virat Kohli Big Statement) ಕೊನೆಗೂ ಮೌನ ಮುರಿದಿದ್ದಾರೆ. ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್ ಗೆಲ್ಲುವ ನಿಟ್ಟಿನಲ್ಲಿ ಯಾವ ತ್ಯಾಗಕ್ಕಾದಲೂ ತಾವು ಸಿದ್ಧ ಎಂದಿದ್ದಾರೆ ಕೊಹ್ಲಿ. “ನನ್ನ ಗುರಿ ಭಾರತ ಏಷ್ಯಾ ಕಪ್ ಮತ್ತು ಟಿ20 ವಿಶ್ವಕಪ್ ಗೆಲ್ಲಲು ನೆರವಾಗುವುದು. ಅದಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ”.

  • ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ಆಟಗಾರ.

ವಿರಾಟ್ ಕೊಹ್ಲಿ ಅವರನ್ನು ಟಿ20 ವಿಶ್ವಕಪ್”ನಲ್ಲಿ ಆಡುವ ಟೀಮ್ ಇಂಡಿಯಾದಿಂದ ಕೈಬಿಡಬೇಕೆಂಬ ವಾದಗಳ ಮಧ್ಯೆಯೇ ಕೊಹ್ಲಿ ಈ ಹೇಳಿಕೆ ಕೊಟ್ಟಿದ್ದಾರೆ. ಆ ಮೂಲಕ ತಾವು ಟಿ29 ವಿಶ್ವಕಪ್ ಆಡುವ ಇರಾದೆ ಹೊಂದಿರುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಏಷ್ಯಾಕಪ್ ಟೂರ್ನಿ (Asia Cup) ಅರಬ್ ರಾಷ್ಟ್ರ ಯುನೈಟೆಡ್ ಅರಬ್ ಎಮಿರೇಟ್ಸ್”ನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆಯಲಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿ (ICC T20 World Cup) ಮುಂದಿನ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಕಾಂಗರೂ ನಾಡು ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆಯಲಿದೆ. 33 ವರ್ಷದ ಕೊಹ್ಲಿ ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿಯಲ್ಲಿ ಭಾರೀ ವೈಫಲ್ಯ ಎದುರಿಸಿದ್ದರು. ಇಂಗ್ಲೆಂಡ್ ಪ್ರವಾಸದಲ್ಲಿ ಆಡಿದ 6 ಇನ್ನಿಂಗ್ಸ್’ಗಳಲ್ಲಿ ಕೇವಲ 76 ರನ್ ಗಳಿಸಲಷ್ಟೇ ಶಕ್ತವಾಗಿದ್ದರು.

ಇಂಗ್ಲೆಂಡ್ ಪ್ರವಾಸದಲ್ಲಿ ಎದುರಿಸಿದ ವೈಫಲ್ಯದಿಂದಾಗಿ ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಜುಲೈ 29ರಂದು ಆರಂಭವಾಗಲಿರುವ ವಿಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಆಯ್ಕೆ ಮಾಡಲಾಗಿರುವ ತಂಡದಿಂದಲೂ ವಿರಾಟ್ ಕೊಹ್ಲಿ ಅವರನ್ನು ಹೊರಗಿಡಲಾಗಿದೆ. ಕ್ರಿಕೆಟ್’ನಿಂದ ಬಿಡುವು ಸಿಕ್ಕಿರುವ ಕಾರಣ ಪತ್ನಿ ಅನುಷ್ಕಾ ಶರ್ಮಾ ಮತ್ತು ಪುತ್ರಿ ವಾಮಿಕಾ ಜೊತೆ ಕೊಹ್ಲಿ ಯುರೋಪ್ ಪ್ರವಾಸಕ್ಕೆ ತೆರಳಿದ್ದಾರೆ.

ಔಟ್ ಆಫ್ ಫಾರ್ಮ್ ವಿರಾಟ್ ಕೊಹ್ಲಿ ಫಾರ್ಮ್ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಂದಿನ ತಿಂಗಳು ನಡೆಯಲಿರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ಸಾಧ್ಯತೆಯಿದೆ. ಆಗಸ್ಟ್’ನಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ, ಆತಿಥೇಯರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಏಕದಿನ ಸರಣಿಯ ಮೂರು ಪಂದ್ಯಗಳು ಕ್ರಮವಾಗಿ ಆಗಸ್ಟ್ 18, ಆಗಸ್ಟ್ 20 ಮತ್ತು ಆಗಸ್ಟ್ 22ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿವೆ.

ಇದನ್ನೂ ಓದಿ : Hardik Pandya Retirement : ಏಕದಿನ ಕ್ರಿಕೆಟ್‌ನಿಂದ ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ನಿವೃತ್ತಿ !

ಇದನ್ನೂ ಓದಿ : Age Fraud Detector Software : ವಯಸ್ಸಿನಲ್ಲಿ ಮೋಸ ಮಾಡುವವರಿಗೆ ಬ್ಯಾಡ್ ನ್ಯೂಸ್.. ಬಿಸಿಸಿಐ ಬಳಿಯಿದೆ ಹೊಸ ಅಸ್ತ್ರ !

Virat Kohli Big Statement Ready to make any sacrifice to win Asia Cup, World Cup” What does Kohli’s words mean

Comments are closed.