Jasprit Bumrah fitness update : ಟಿ20 ವಿಶ್ವಕಪ್‌ನಲ್ಲಿ ಆಡ್ತಾರಾ ಜಸ್‌ಪ್ರೀತ್ ಬುಮ್ರಾ..? ಬ್ರೇಕಿಂಗ್ ನ್ಯೂಸ್ ಕೊಟ್ಟ ಬಿಸಿಸಿಐ ಅಧ್ಯಕ್ಷ ಗಂಗೂಲಿ

ಮುಂಬೈ: (Jasprit Bumrah fitness update) ಟೀಮ್ ಇಂಡಿಯಾದ ಪ್ರೀಮಿಯಂ ಫಾಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದು, ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2022) ಆಡುವುದೂ ಬಹುತೇಕ ಅನುಮಾನ. ಬುಮ್ರಾ ಅನುಪಸ್ಥಿತಿ ವಿಶ್ವಕಪ್ ಗೆಲ್ಲುವ ಭಾರತ ತಂಡದ ಕನಸಿಗೆ ದೊಡ್ಡ ಪೆಟ್ಟು ನೀಡಲಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಜಸ್’ಪ್ರೀತ್ ಬುಮ್ರಾ ಹೊರ ಬಿದ್ದಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (BCCI President Sourav Ganguly) ಬುಮ್ರಾ ವಿಚಾರದಲ್ಲಿ ಬಿಗ್ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ.

(Jasprit Bumrah fitness update)ಇಂಗ್ಲೆಂಡ್ ಪ್ರವಾಸದ ನಂತರ ಬೆನ್ನು ನೋವಿನ ಕಾರಣ ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ಹೊರಗುಳಿದಿದ್ದ 28 ವರ್ಷದ ಬಲಗೈ ವೇಗದ ಬೌಲರ್ ಜಸ್’ಪ್ರೀತ್ ಬುಮ್ರಾ, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದ್ದರು. ಆದರೆ ಎರಡೇ ಪಂದ್ಯಗಳನ್ನಾಡುವಷ್ಟರಲ್ಲಿ ಮತ್ತೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರ ಬಿದ್ದಿದ್ದು, ಅವರ ಬದಲು ಯುವ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಬಿಸಿಸಿಐ ಮೂಲಗಳು ಈ ಹಿಂದೆ ಹೇಳಿರುವ ಪ್ರಕಾರ ಜಸ್’ಪ್ರೀತ್ ಬುಮ್ರಾ ಟಿ20 ವಿಶ್ವಕಪ್’ನಲ್ಲಿ ಆಡುವುದು ಅನುಮಾನ. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ವೇಗಿ ಬುಮ್ರಾ ವಿಚಾರದಲ್ಲಿ ಇನ್ನೂ ಆಶಾವಾದಿಯಾಗಿದ್ದಾರೆ. “ಬುಮ್ರಾ ಇನ್ನೂ ಟಿ20 ವಿಶ್ವಕಪ್’ನಿಂದ ಹೊರ ಬಿದ್ದಿಲ್ಲ. ಮುಂದಿನ ಎರಡು ಮೂರು ದಿಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರ ಬೀಳಲಿದೆ” ಎಂದಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜಸ್’ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ (India Vs South Africa T20 Series) ಆಡಬೇಕಿತ್ತು. ಆದರೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (National Cricket Academy) ಮರಳಿರುವ ಬುಮ್ರಾ, ಬಿಸಿಸಿಐ ಮೆಡಿಕಲ್ ಟೀಮ್’ನ ಮೇಲುಸ್ತುವಾರಿಯಲ್ಲಿದ್ದಾರೆ.

ಇದನ್ನೂ ಓದಿ : ಟಿ20 ವಿಶ್ವಕಪ್ ಕ್ಯಾಶ್ ಪ್ರೈಜ್ ₹45 ಕೋಟಿ, ಚಾಂಪಿಯನ್ಸ್‌ಗೆ ಸಿಗಲಿದೆ ₹13 ಕೋಟಿ

ಇದನ್ನೂ ಓದಿ :  “ಪ್ರೇಯಸಿ ಜೊತೆ ಡೇಟಿಂಗ್‌ಗೆ ಹೋಗ್ಬೇಕು, ₹300 ಕೊಡಿ” ಅಂದ ಫ್ಯಾನ್’ಗೆ ₹500 ಕೊಟ್ಟ ಕ್ರಿಕೆಟಿಗ ಅಮಿತ್ ಮಿಶ್ರಾ

ಇದನ್ನೂ ಓದಿ : “ಐಪಿಎಲ್’ಗೆ ಸದಾ ರೆಡಿ.. ವಿಶ್ವಕಪ್ ಬಂದ್ರೆ ಹೊರ ನಡಿ ; ಬುಮ್ರಾ ವಿರುದ್ಧ ಕ್ರಿಕೆಟ್ ಪ್ರಿಯರು ಫುಲ್ ಗರಂ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಲು ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಅಕ್ಟೋಬರ್ 6ರಂದು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದೆ. ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ತಂಡ ಆತಿಥೇಯ ಆಸ್ಟ್ರೇಲಿಯಾ (ಅಕ್ಟೋಬರ್ 17) ಹಾಗೂ ನ್ಯೂಜಿಲೆಂಡ್ (ಅಕ್ಟೋಬರ್ 19) ವಿರುದ್ಧ ಎರಡು ಅಭ್ಯಾಸ ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ 2007ರ ಚಾಂಪಿಯನ್ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

Will Jasprit Bumrah play in the T20 World Cup? BCCI president Ganguly gave the breaking news

Comments are closed.