ಭಾರತ – ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಭೀತಿ : ಇಲ್ಲಿದೆ ಭಾರತದ ಪ್ಲೇಯಿಂಗ್‌ XI

ವಿಶ್ವಕಪ್‌ನಲ್ಲಿ (world Cup 2023) ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಆಡುವ ಬಳಗದಲ್ಲಿ (India Playing XI) ಬದಲಾವಣೆ ನಿರೀಕ್ಷಿಸಲಾಗಿದೆ. ಇನ್ನೊಂದೆಡೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ವಿರುದ್ದದ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ.

ಅಹಮದಾಬಾದ್‌ : ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕೆ ಕಾತರರಾಗಿದ್ದಾರೆ. ವಿಶ್ವಕಪ್‌ನಲ್ಲಿ (world Cup 2023) ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಆಡುವ ಬಳಗದಲ್ಲಿ (India Playing XI) ಬದಲಾವಣೆ ನಿರೀಕ್ಷಿಸಲಾಗಿದೆ. ಇನ್ನೊಂದೆಡೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ವಿರುದ್ದದ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಪಂದ್ಯಕ್ಕೆ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸಜ್ಜಾಗುತ್ತಿವೆ. ರೋಹಿತ್‌ ಶರ್ಮಾ ನೇತೃತ್ವದ ಭಾರತ ತಂಡ ಈಗಾಗಲೇ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಕ್ಕೆ ಸೋಲಿನ ರುಚಿ ತೋರಿಸಿದೆ. ಪಾಕಿಸ್ತಾನ ವಿರುದ್ದದ ಪಂದ್ಯದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಈಗಾಗಲೇ ಅಹಮದಾಬಾದ್‌ ಗೆ ಪ್ರಯಾಣ ಬೆಳೆಸಿದೆ.

World Cup 2023 India vs Pakistan match Rain threat Here is IND vs PAK playing XI
Image Credit to Original Source

ಈಗಾಗಲೇ ಕಠಿಣ ಅಭ್ಯಾಸವನ್ನು ನಡೆಸಿದೆ. ಏಕದಿನ ಕ್ರಿಕೆಟ್‌ನಲ್ಲಿ ಭಾರತದ ವಿರುದ್ದ ಪಾಕಿಸ್ತಾನ ತಂಡ ಅತೀ ಹೆಚ್ಚು ಗೆಲುವು ದಾಖಲಿಸಿದೆ. ಆದರೆ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಇದುವರೆಗೂ ಭಾರತದ ವಿರುದ್ದ ಒಂದೇ ಒಂದು ಗೆಲುವು ದಾಖಲಿಸಿಲ್ಲ.

ಇದನ್ನೂ ಓದಿ : ಭಾರತ- ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಗುಡ್‌ನ್ಯೂಸ್ : ಅಹಮದಾಬಾದ್‌ನಲ್ಲಿ ನೆಟ್‌ ಫ್ರ್ಯಾಕ್ಟಿಸ್‌ ನಡೆಸಿದ ಶುಭಮನ್‌ ಗಿಲ್‌

ಭಾರತ ಪಾಕ್‌ ಪಂದ್ಯಕ್ಕೆ ಮಳೆಯ ಭೀತಿ
ಇನ್ನು ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಮುತ್ತಲೂ ಅಕ್ಟೋಬರ್‌ 14 ಮತ್ತು 15 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ನಾಳಿನ ಪಂದ್ಯದ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಭಾರತ ಹಾಗೂ ಪಾಕಿಸ್ತಾನ ಪಂದ್ಯದ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ಬಿಗಿ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿದೆ. ಪಂದ್ಯದ ಟಿಕೆಟ್‌ ಈಗಾಗಲೇ ಸೋಲ್ಡ್‌ ಔಟ್‌ ಆಗಿತ್ತು. ಅಲ್ಲದೇ ಬಸ್ಸು, ರೈಲು, ವಿಮಾನಗಳಲ್ಲಿಯೂ ಟಿಕೆಟ್‌ಗಳು ಸಿಗುತ್ತಿಲ್ಲ. ಆದರೆ ಮಳೆಯ ಭೀತಿಯ ಹಿನ್ನೆಲೆಯಲ್ಲೀಗ ಅಭಿಮಾನಿಗಳಿಗೆ ಆತಂಕ ಶುರುವಾಗಿದೆ.

ಇದನ್ನೂ ಓದಿ : ಭಾರತ – ಪಾಕಿಸ್ತಾನ ಪಂದ್ಯಕ್ಕೆ ಶುಭಮನ್‌ ಗಿಲ್‌ : ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್ಸ್‌

ಭಾರತ ಹಾಗೂ ಪಾಕಿಸ್ತಾನ ವಿರುದ್ದದ ಪಂದ್ಯದ ವೀಕ್ಷಣೆಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಝಕಾ ಅಶ್ರಫ್ ಅಹಮದಾಬಾದ್‌ಗೆ ಈಗಾಗಲೇ ಆಗಮಿಸಿದ್ದಾರೆ. ಬಿಸಿಸಿಐ ಆಹ್ವಾನದ ಮೇರೆಗೆ ಅವರು ಬಂದಿದ್ದಾಗಿ ಪಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

World Cup 2023 India vs Pakistan match Rain threat Here is IND vs PAK playing XI
Image Credit to Original Source

ಸಾಂಪ್ರದಾಯಿಕ ಎದುರಾಳಿಗಳ ಪಂದ್ಯಕ್ಕಾಗಿ ಬಿಸಿಸಿಐ ಹಲವು ಸಿದ್ದತೆಗಳನ್ನು ಮಾಡಿಕೊಂಡಿದೆ. ಪಂದ್ಯ ಆರಂಭಕ್ಕೂ ಮುನ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಪ್ರದರ್ಶನವೂ 30 ನಿಮಿಷಗಳ ಕಾಲ, ಮಧ್ಯಾಹ್ನ 12:30 ರಿಂದ ಮಧ್ಯಾಹ್ನ 1:00 ಗಂಟೆಯ ವರೆಗೆ ಇರಲಿದೆ. ಎಂದಿನಂತೆ ಮಧ್ಯಾಹ್ನ 1.30ಕ್ಕೆ ಟಾಸ್‌ ನಡೆಯಲಿದೆ.

IND vs PAK‌ ಪಂದ್ಯ : ಭಾರತದ ಪ್ಲೇಯಿಂಗ್ 11:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್/ಶುಭಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್), ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

IND vs PAK‌ ಪಂದ್ಯ : ಪಾಕಿಸ್ತಾನದ ಪ್ಲೇಯಿಂಗ್ 11:
ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್‌ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ.

ಇದನ್ನೂ ಓದಿ : ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಕ್ಕೆ ವಾಡಾ ನಿಷೇಧದ ಭೀತಿ !

ವಿಶ್ಕಕಪ್ 2023 ಭಾರತ ಮತ್ತು ಪಾಕಿಸ್ತಾನ ತಂಡಗಳು:
ಭಾರತ : ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್‌ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್ (ವಿಕೆಟ್‌ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ , ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ.

World Cup 2023 India vs Pakistan match Rain threat Here is IND vs PAK playing XI

Comments are closed.