WPL 2025 Final : ಮಹಿಳಾ ಪ್ರೀಮಿಯರ್ ಲೀಗ್ 2025 (Womens Premier League 2025) ರ ಫೈನಲ್ ಪಂದ್ಯ ಇಂದು ನಡೆಯಲಿದೆ. ಮಾಜಿ ಚಾಂಪಿಯನ್ ಮುಂಬೈ (Mumbai Indians) ತಂಡದ ವಿರುದ್ದ ಎರಡು ರನ್ನರ್ಸ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ (Delhi Capitals ) ತಂಡ ಸೆಣೆಸಲಿದೆ. ಉದ್ಘಾಟನಾ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯಾದ್ರೂ ಚಾಂಪಿಯನ್ ಆಗುತ್ತಾ ಅನ್ನೋ ಕುತೂಹಲ ಮೂಡಿಸಿದೆ.
ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ (Womens Premier League 2025 Final) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಸತತ ಮೂರನೇ ಬಾರಿಗೆ ಫೈನಲ್ ಪ್ರವೇಶ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಹಿಳಾ ಪ್ರೀಮಿಯರ್ ಲೀಗ್‌ನ ಆರಂಭಿಕ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಸೋಲು ಕಂಡಿತ್ತು.
ಮಹಿಳಾ ಪ್ರೀಮಿಯರ್ ಲೀಗ್‌ನ 2ನೇ ಆವೃತ್ತಿಯಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಪ್ರವೇಶ ಪಡೆದಿದ್ದರೂ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ದ ಸೋಲು ಅನುಭವಿಸಿತ್ತು. ಆದರೆ ಇದೀಗ ಸತತ ಮೂರನೇ ಬಾರಿಗೆ ಫೈನಲ್ ಪ್ರವೇಶ ಪಡೆದಿದ್ದು, ಮಾಜಿ ಚಾಂಪಿಯನ್ ಮುಂಬೈ ವಿರುದ್ದ ಆಡಲಿದೆ. ಈ ಮೂಲಕ ಮುಂಬೈ ವಿರುದ್ದ ಸೇಡು ತೀರಿಸಿಕೊಳ್ಳುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ.

ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸತತ ಗೆಲುವು ದಾಖಲಿಸಿದೆ. ಒಟ್ಟು 8 ಪಂದ್ಯಗಳನ್ನು ಆಡಿದ್ದು ಈ ಪೈಕಿ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ರೆ, ಮುಂಬೈ ಇಂಡಿಯನ್ಸ್ ತಂಡ ಕೂಡ ಸಮಾನ ಗೆಲುವುದು ಕಂಡಿದೆ. ಆದರೆ ರನ್ ಧಾರಣೆಯ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಗ್ರಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ನೇರವಾಗಿ ಫೈನಲ್ ಪ್ರವೇಶ ಕಂಡಿದ್ರೆ, ಗುಜರಾತ್ ಟೈಟಾನ್ಸ್ ತಂಡವನ್ನು ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲಿಸುವ ಮೂಲಕ ಫೈನಲ್‌ಗೆ ಎಂಟ್ರಿ ಕೊಟ್ಟಿತ್ತು. ಮುಂಬೈ ಇಂಡಿಯನ್ಸ್ ತಂಡದಲ್ಲಿ ಹೇಲಿ ಮ್ಯಾಥ್ಯೂಸ್ ನ್ಯಾಟ್ ಸಿವರ್- ಬ್ರಂಟ್, ಡೆಲ್ಲಿ ಕ್ಯಾಪಿಟಲ್ಸ್ ನ ಮೆಗಾ ಲ್ಯಾನಿಂಗ್ ಶಿಫಾಲಿ ವರ್ಮಾ ಭರ್ಜರಿ ಫಾರ್ಮ್ ನಲ್ಲಿದ್ದಾರೆ.
ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಬಲಿಷ್ಠವಾಗಿದೆ. ಮಹಿಳಾ ಐಪಿಎಲ್ 3 ಆವೃತ್ತಿಯಲ್ಲಿ ಒಟ್ಟು 7 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ ಅತೀ ಹೆಚ್ಚು ಪಂದ್ಯಗಳನ್ನು ಜಯಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಒಟ್ಟು 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ರೆ, ಮುಂಬೈ ಇಂಡಿಯನ್ಸ್ 3 ಪಂದ್ಯಗಳಲ್ಲಿ ಗೆಲುವು ಕಂಡಿದೆ.

ಮಹಿಳಾ ಪ್ರೀಮಿಯರ್ ಲೀಗ್ (WPL 2025 Final ) ಸಂಭಾವ್ಯ ತಂಡ :
ಮುಬೈ ಇಂಡಿಯನ್ಸ್ : ಹೇಲಿ ಮ್ಯಾಥ್ಯೂಸ್, ಅಮೆಲಿಯಾ ಕೆರ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮನ್‌ಜೋತ್ ಕೌರ್, ಯಾಸ್ತಿಕಾ ಭಾಟಿಯಾ (ಕೀಪರ್), ಸಜೀವನ್ ಸಜಾನಾ, ಜಿ ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್ ಇಸ್ಮಾಯಿಲ್, ಸೈಕಾ ಇಶಾಕ್/ಪರುಣಿಕಾ ಸಿಸೋಡಿಯಾ
ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಸ್ ಜೊನಾಸೆನ್, ಜೆಮಿಮಾ ರೊಡ್ರಿಗಸ್, ಅನ್ನಾಬೆಲ್ ಸದರ್ಲ್ಯಾಂಡ್, ಮರಿಜಾನ್ನೆ ಕಪ್, ಸಾರಾ ಬ್ರೈಸ್, ನಿಕಿ ಪ್ರಸಾದ್, ಮಿನ್ನು ಮಣಿ, ಶಿಖಾ ಪಾಂಡೆ, ಟೈಟಾಸ್ ಸಾಧು/ಎನ್ ಚರಣಿ
ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಸ್ ಜೊನಾಸೆನ್, ಜೆಮಿಮಾ ರಾಡ್ರಿಗಸ್, ಅನ್ನಾಬೆಲ್ ಸದರ್ಲ್ಯಾಂಡ್, ಮರಿಜಾನ್ನೆ ಕಪ್, ಸಾರಾ ಬ್ರೈಸ್ (ಕೀಪರ್), ನಿಕಿ ಪ್ರಸಾದ್, ಮಿನ್ನು ಮಣಿ, ಶಿಖಾ ಪಾಂಡೆ, ಟೈಟಾಸ್ ಸಾಧು, ರಾಧಾ ಯಾದವ್, ಅರುಂಧತಿಯಾ, ಅರುಂಧತಿಯಾ, ಅಲಿಸ್ ಕಾಪ್ಹತಿಯಾ ರೆಡ್ಡಿ ಕಶ್ಯಪ್, ನಲ್ಲಪುರೆಡ್ಡಿ ಚರಣಿ
ಮುಂಬೈ ಇಂಡಿಯನ್ಸ್ ಮಹಿಳಾ ತಂಡ: ಯಾಸ್ತಿಕಾ ಭಾಟಿಯಾ(ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್(ನಾಐಕಿ), ಸಜೀವನ್ ಸಜನಾ, ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಜಿ ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್ ಇಸ್ಮಾಯಿಲ್, ಸೈಕಾ ಇಶಾಕ್, ಚಲೋಯ್ ಡಿ ಕ್ರೈನಾನ್, ಕ್ಲೋಯಿನ್ ಕೆ ಟ್ರಯಾನ್‌ಲರ್ ಕಲಿತಾ, ಪರುಣಿಕಾ ಸಿಸೋಡಿಯಾ, ಅಮನದೀಪ್ ಕೌರ್, ಅಕ್ಷಿತಾ ಮಹೇಶ್ವರಿ
WPL 2025 Final: Womens Premier League – Delhi Capitals win against Mumbai Indians in Kannada News