ಬೆಂಗಳೂರು: WPL Captain list 2023 : ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ (Women’s Premier League 2023) ಆರಂಭಕ್ಕಿನ್ನು 48 ಗಂಟೆಗಳಷ್ಟೇ ಬಾಕಿ. ಚೊಚ್ಚಲ ಆವೃತ್ತಿಯ ಡಬ್ಲ್ಯೂಪಿಎಲ್ (WPL) ಟೂರ್ನಿಯಲ್ಲಿ ಒಟ್ಟು 5 ತಂಡಗಳು ಆಡಲಿವೆ. WPLನಲ್ಲಿ ಆಡಲಿರುವ ಎಲ್ಲಾ 5 ತಂಡಗಳ ನಾಯಕಿಯರನ್ನು ಹೆಸರಿಸಲಾಗಿದ್ದು, ವಿಶೇಷ ಏನೆಂದರೆ 5 ತಂಡಗಳ ಪೈಕಿ 3 ತಂಡಗಳಿಗೆ ಆಸ್ಟ್ರೇಲಿಯಾದ ಆಟಗಾರ್ತಿಯರೇ ನಾಯಕಿಯರಾಗಿ ಆಯ್ಕೆಯಾಗಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಟೀಮ್ ಇಂಡಿಯಾ ಉಪನಾಯಕಿ ಸ್ಮತಿ ಮಂಧನ ನಾಯಕಿಯಾಗಿದ್ರೆ, ಮುಂಬೈ ಇಂಡಿಯನ್ಸ್ ತಂಡವನ್ನು ಟೀಮ್ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಗುಜರಾತ್ ಜೈಂಟ್ಸ್ ತಂಡವನ್ನು ಆಸ್ಟ್ರೇಲಿಯಾದ ಬೆತ್ ಮೂನಿ ಮುನ್ನಡೆಸಲಿದ್ರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಐಸಿಸಿ ಟಿ20 ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದಾರೆ. ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ ಅಲೀಸಾ ಹೀಲಿ ಯುಪಿ ವಾರಿಯರ್ಸ್ ತಂಡದ ಸಾರಥ್ಯ ವಹಿಸಲಿದ್ದಾರೆ.
The SKIPPERS are ready for the Women's Premier League 💪
— Female Cricket (@imfemalecricket) March 2, 2023
Who will claim the Trophy?🤔#CricketTwitter #WPL2023 pic.twitter.com/TAuGqJswD6
WPL Captain list 2023: 5 ತಂಡಗಳ ನಾಯಕಿಯರ ಪಟ್ಟಿ
- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮತಿ ಮಂಧನ (ಭಾರತ)
- ಮುಂಬೈ ಇಂಡಿಯನ್ಸ್: ಹರ್ಮನ್ ಪ್ರೀತ್ ಕೌರ್ (ಭಾರತ)
- ಗುಜರಾತ್ ಜೈಂಟ್ಸ್: ಬೆತ್ ಮೂನಿ (ಆಸ್ಟ್ರೇಲಿಯಾ)
- ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ಆಸ್ಟ್ರೇಲಿಯಾ)
- ಯುಪಿ ವಾರಿಯರ್ಸ್: ಅಲೀಸಾ ಹೀಲಿ (ಆಸ್ಟ್ರೇಲಿಯಾ)
ಬಿಸಿಸಿಐನ ಮಹತ್ವಾಕಾಂಕ್ಷೆಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ ಮಾರ್ಚ್ 4ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 5ರಂದು ನಡೆಯುವ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.
WPL ಟೂರ್ನಿ: RCB ತಂಡದ ವೇಳಾಪಟ್ಟಿ
ಮಾರ್ಚ್ 5: Vs ಡೆಲ್ಲಿ ಕ್ಯಾಪಿಟಲ್ಸ್ (ಬ್ರೆಬೋರ್ನ್ ಕ್ರೀಡಾಂಗಣ, ಮುಂಬೈ; 3.30 pm)
ಮಾರ್ಚ್ 6: Vs ಮುಂಬೈ ಇಂಡಿಯನ್ಸ್ (ಬ್ರೆಬೋರ್ನ್ ಕ್ರೀಡಾಂಗಣ, ಮುಂಬೈ; 7.30 pm)
ಮಾರ್ಚ್ 8: Vs ಗುಜರಾತ್ ಜೈಂಟ್ಸ್ (ಬ್ರೆಬೋರ್ನ್ ಕ್ರೀಡಾಂಗಣ, ಮುಂಬೈ; 7.30 pm)
ಮಾರ್ಚ್ 10: Vs ಯುಪಿ ವಾರಿಯರ್ಸ್ (ಬ್ರೆಬೋರ್ನ್ ಕ್ರೀಡಾಂಗಣ, ಮುಂಬೈ; 7.30 pm)
ಮಾರ್ಚ್ 13: Vs ಡೆಲ್ಲಿ ಕ್ಯಾಪಿಟಲ್ಸ್ (ಡಿ.ವೈ ಪಾಟೀಲ್ ಕ್ರೀಡಾಂಗಣ, ಮುಂಬೈ; 7.30 pm)
ಮಾರ್ಚ್ 15: Vs ಯುಪಿ ವಾರಿಯರ್ಸ್ (ಡಿ.ವೈ ಪಾಟೀಲ್ ಕ್ರೀಡಾಂಗಣ, ಮುಂಬೈ; 7.30 pm)
ಮಾರ್ಚ್ 18: Vs ಗುಜರಾತ್ ಜೈಂಟ್ಸ್ (ಬ್ರೆಬೋರ್ನ್ ಕ್ರೀಡಾಂಗಣ, ಮುಂಬೈ; 7.30 pm)
ಮಾರ್ಚ್ 21: Vs ಮುಂಬೈ ಇಂಡಿಯನ್ಸ್ (ಡಿ.ವೈ ಪಾಟೀಲ್ ಕ್ರೀಡಾಂಗಣ, ಮುಂಬೈ; 3.30 pm)
ಇದನ್ನೂ ಓದಿ : Japrit Bumrah : ವೇಗಿ ಜಸ್‌ಪ್ರೀತ್ ಬುಮ್ರಾಗೆ ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆ, ಏಳು ತಿಂಗಳು ಕ್ರಿಕೆಟ್‌ನಿಂದ ಔಟ್
ಇದನ್ನೂ ಓದಿ : ಬೆಂಗಳೂರಿನ ಐಬಿಸಿ ನಾಲೆಡ್ಜ್ ಪಾರ್ಕ್ ನಲ್ಲಿ ಟೈಗರ್ 5 ಸ್ಪೋರ್ಟ್ಸ್ ನ ಹೊಸ ಸೌಲಭ್ಯ ಪ್ರಾರಂಭ