Hardik Pandya and Krunal Pandya brother Vaibhav Pandya arrested : ಮುಂಬೈ : ಸಹೋದರರಿಗೆ ವಂಚಿಸಿದ ಆರೋಪದ ಹಿನ್ನೆಲೆಯೆಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಅವರ ಮಲತಾಯಿಯ ಮಗ ವೈಭವ್ ಪಾಂಡ್ಯ (Vaibav Pandya) ಎಂಬವರನ್ನು ಬಂಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಅವರಿಗೆ ವ್ಯವಹಾರದಲ್ಲಿ ₹ 4 ಕೋಟಿಗೂ ಅಧಿಕ ಹಣವನ್ನು ವಂಚಿಸಿದ ಆರೋಪ ಕೇಳಿಬಂದಿದೆ. ಇದೀಗ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಮಲ ಸಹೋದರ ವೈಭವ್ ಪಾಂಡ್ಯ ಅವರನ್ನು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಬಂಧಿಸಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎನ್‌ಐಎ ವರದಿ ಮಾಡಿದೆ.
ಇದನ್ನೂ ಓದಿ : ಒಂದೇ ಪಂದ್ಯದಲ್ಲಿ ಹೀರೋ ಟ್ರೆಂಡಿಂಗ್ ಆದ ಲಕ್ನೋ ಸೂಪರ್ ಜೈಂಟ್ಸ್ ಬೌಲರ್ ಮಯಾಂಕ್ ಯಾದವ್
ಮುಂಬೈ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ. ವೈಭವ್ ಪಾಂಡ್ಯ ಪಾಲುದಾರಿಕೆಯ ಸಂಸ್ಥೆಯಿಂದ ಸುಮಾರು ₹4.3 ಕೋಟಿ ರೂಪಾಯಿಯನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರು. ಇದರಿಂದಾಗಿ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರಿಗೆ ನಷ್ಟ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪಾಂಡ್ಯ ಸಹೋದರರು ದೂರು ನೀಡಿದ್ದರು ಎಂದು ಇಒಡಬ್ಲ್ಯೂ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ನಿನ್ನೆಯಷ್ಟೇ ವೈಭವ್ ಪಾಂಡ್ಯ ಅವರನ್ನು ಬಂಧಿಸಲಾಗಿದ್ದು, ವಂಚನೆ ಹಾಗೂ ನಕಲಿ ಆರೋಪ ಹೊರಿಸಲಾಗಿದೆ. ಸದ್ಯ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದು, ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನೆಡೆಸುತ್ತಿದ್ದಾರೆ. ಇನ್ನು ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆಡುತ್ತಿದ್ದಾರೆ.
ಇದನ್ನೂ ಓದಿ: IPL 2024: ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದ ಬೆಂಕಿ ಬೌಲರ್, ಶ್ರೀಲಂಕಾದ ಈ 3 ಆಟಗಾರರು ಐಪಿಎಲ್‌ಗೆ ಅನುಮಾನ
ಕಳೆದ ಎರಡು ವರ್ಷಗಳಿಂದಲೂ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದು, ಗುಜರಾತ್ ತಂಡ ಮೊದಲ ಆವೃತ್ತಿಯಲ್ಲಿಯೇ ಐಪಿಎಲ್ ಟ್ರೋಫಿಯನ್ನು ಜಯಿಸಿತ್ತು. ಆದರೆ ಈ ಬಾರಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡಕ್ಕೆ ಎರಡು ವರ್ಷಗಳ ಬಳಿಕ ವಾಪಾಸಾಗಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಹೀನಾಯ ಪ್ರದರ್ಶನವನ್ನು ನೀಡುತ್ತಿದ್ದು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಐದು ಬಾರಿ ಐಪಿಎಲ್ ಟ್ರೋಫಿಯನ್ನು ಜಯಿಸಿ ಕೊಟ್ಟಿದ್ದ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗೆ ಇಳಿಸಿರುವುದು ರೋಹಿತ್ ಶರ್ಮಾ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೇ ಕ್ರಿಕೆಟ್ ವಲಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ದ ಮುನಿಸಿಕೊಂಡಿದ್ದಾರೆ.
ಇದನ್ನೂ ಓದಿ : ಐಪಿಎಲ್ 2024ರಲ್ಲಿ ಆರ್‌ಸಿಬಿ ಪರ ಎಬಿ ಡಿವಿಲಿಯರ್ಸ್ : ತಂಡಕ್ಕೆ ಆಹ್ವಾನಿಸಿದ ವಿರಾಟ್ ಕೊಹ್ಲಿ
ಕಳೆದ ಐಪಿಎಲ್ ಋತುವಿನಲ್ಲಿ ಕೆಎಲ್ ರಾಹುಲ್ ಗಾಯಗೊಂಡು ಐಪಿಎಲ್‌ನಿಂದ ಹೊರಗೆ ಬೀಳುತ್ತಿದ್ದಂತೆಯೇ ಕೃನಾಲ್ ಪಾಂಡ್ಯ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ತಂಡವನ್ನು ಮುನ್ನೆಡೆಸಿದ್ದರು. ಆದರೆ ಟ್ರೋಫಿ ಜಯಿಸಲು ಸಾಧ್ಯವಾಗಿರಲಿಲ್ಲ.
Crores of rupees fraud case: IPL 2024 Mumbai Indians Captain Hardik Pandya and Krunal Pandya brother Vaibhav Pandya arrested Mumbai Police