Dhoni meets CISF soldiers: RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸೈನಿಕರನ್ನು ಭೇಟಿ ಮಾಡಿದ ಧೋನಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಅತ್ಯಂತ ಮಹತ್ವದ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ದಿಗ್ಗಜ ಆಟಗಾರ, ತಲಾ ಖ್ಯಾತಿಯ ಎಂ.ಎಸ್ ಧೋನಿ (MS Dhoni) ಚೆನ್ನೈನಲ್ಲಿ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್’ನ ಸೈನಿಕರನ್ನು ಭೇಟಿ ಮಾಡಿದ್ದಾರೆ.

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challenges Bengaluru) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯವನ್ನು ಆರ್’ಸಿಬಿ ಗೆದ್ದರೆ ಐಪಿಎಲ್-2024 ಟೂರ್ನಿಯಲ್ಲಿ  ಪ್ಲೇ ಆಫ್ ಪ್ರವೇಶಿಸುವ ಅವಕಾಶವಿದೆ. ಒಂದು ವೇಳೆ ಚೆನ್ನೈ ಗೆದ್ದರೆ 16 ಅಂಕಗಳೊಂದಿಗೆ ಪ್ಲೇ ಆಫ್’ಗೆ ಲಗ್ಗೆ ಇಡಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಅತ್ಯಂತ ಮಹತ್ವದ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ದಿಗ್ಗಜ ಆಟಗಾರ, ತಲಾ ಖ್ಯಾತಿಯ ಎಂ.ಎಸ್ ಧೋನಿ (MS Dhoni) ಚೆನ್ನೈನಲ್ಲಿ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್’ನ ಸೈನಿಕರನ್ನು ಭೇಟಿ ಮಾಡಿದ್ದಾರೆ. CISF ಸೈನಿಕರ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

CSK former captain MS Dhoni meets CISF soldiers before match against RCB
Image Credit To Instagram

ಧೋನಿ ಕ್ರಿಕೆಟ್ ಆಟಗಾರ ಮಾತ್ರವಲ್ಲ, ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಧೋನಿ ಅವರ ಕ್ರಿಕೆಟ್ ಸಾಧನೆಗಳನ್ನು ಗೌರವಿಸಿ ಇಂಡಿಯನ್ ಆರ್ಮಿ ಧೋನಿ ಅವರಿಗೆ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಿ ಗೌರವಿಸಿದೆ.

43 ವರ್ಷದ ವಯಸ್ಸಿನ ಮಹೇಂದ್ರ ಸಿಂಗ್ ಧೋನಿ ಐಪಿಎಲ್-2024 ಟೂರ್ನಿಯ ನಂತರ ವೃತ್ತಿಪರ ಕ್ರಿಕೆಟ್’ಗೆ ವಿದಾಯ ಹೇಳುವ ಸಾಧ್ಯತೆಯಿದೆ. ಇದೇ ಕಾರಣದಿಂದ ಮೊನ್ನೆ ಚೆನ್ನೈನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ಗೆದ್ದ ನಂತರ ಧೋನಿ, ತಮ್ಮ ಹಾಗೂ ಸಿಎಸ್’ಕೆ ಅಭಿಮಾನಿಗಳಿಗೆ ಕಮ್ಮ ಹಸ್ತಾಕ್ಷರವುಳ್ಳ ಟೆನಿಸ್ ಬಾಲ್’ಗಳನ್ನು ಉಡುಗೊರೆಯಾಗಿ ನೀಡಿದ್ದರು.

ಇದನ್ನೂ ಓದಿ: Siraj Visits Vyshak House: ವೈಶಾಖ್ ಮನೆಗೆ ಬಂದ ಮೊಹಮ್ಮದ್ ಸಿರಾಜ್.. ಗೆಳೆಯನ ಕರೆಗೆ ಓಗೊಟ್ಟ ಆರ್’ಸಿಬಿ ವೇಗಿ!

CSK former captain MS Dhoni meets CISF soldiers before match against RCB
Image Credit To BCCI/IPL

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs CSK) ವಿರುದ್ಧದ ಪಂದ್ಯ ಧೋನಿ ಅವರಿಗೆ ಬೆಂಗಳೂರಿನಲ್ಲಿ ಕಟ್ಟ ಕಡೆಯ ಪಂದ್ಯವಾಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದರೆ, ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳನ್ನು ಚೆನ್ನೈನಲ್ಲೇ ಆಡುವ ಅವಕಾಶವಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್-2024 ಟೂರ್ನಿಯಲ್ಲಿ ಆಡಿರುವ 13 ಪಂದ್ಯಗಳಲ್ಲಿ ಆರು ಗೆಲುವು ಹಾಗೂ 7 ಸೋಲುಗಳೊಂದಿಗೆ 12 ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಪ್ಲೇ ಆಫ್ ಕನಸನ್ನು ಜೀವಂತವಾಗಿಡಬೇಕಾದರೆ ಶನಿವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು  ಆರ್’ಸಿಬಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಸಿಎಸ್’ಕೆ ವಿರುದ್ಧ ಆರ್’ಸಿಬಿ ಕನಿಷ್ಠ 18 ರನ್’ಗಳಿಂದ ಪಂದ್ಯ ಗೆಲ್ಲಬೇಕಿದೆ. ಒಂದು ವೇಳೆ ಚೇಸಿಂಗ್ ಮಾಡಿದರೆ ಸಿಎಸ್’ಕೆ ಒಡ್ಡುವ ಗುರಿಯನ್ನು 18.1 ಓವರ್’ಗಳ ಒಳಗೆ ತಲುಪಬೇಕಿದೆ. ಹಾಗಾದಲ್ಲಿ ಮಾತ್ರ ಆರ್’ಸಿಬಿಗೆ ಪ್ಲೇ ಆಫ್ ಪ್ರವೇಶಿಸುವ ಅವಕಾಶವಿದೆ.

ಚೆನ್ನೈ ಸೂಪರ್ ಕಿಂಗ್ಸ್ 13 ಪಂದ್ಯಗಳಿಂದ 7 ಗೆಲುವು ಹಾಗೂ 6 ಸೋಲುಗಳೊಂದಿಗೆ 14 ಪಾಯಿಂಟ್ಸ್ ಗಳಿಸಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಆರ್’ಸಿಬಿ +0.387 ರನ್ ರೇಟ್ ಹೊಂದಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ +0.528 ರನ್ ರೇಟ್ ಹೊಂದಿದೆ.

 

ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕ ಹಂಚಿಕೆಯಾಗಲಿದೆ. ಆಗ RCB ತಂಡ 14 ಪಂದ್ಯಗಳಿಂದ ಕೇವಲ 13 ಅಂಕ ಗಳಿಸಿದಂತಾಗುತ್ತದೆ. ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ 14 ಪಂದ್ಯಗಳಿಂದ 15 ಅಂಕ ಗಳಿಸಿ ಪ್ಲೇ ಆಫ್ ಹಂತಕ್ಕೇರಲಿದೆ.

 

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂ.ಎಸ್ ಧೋನಿ 5 ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಟ್ಟಿದ್ದಾರೆ. ಧೋನಿ ನಾಯಕತ್ವದಲ್ಲಿ 2010ರಲ್ಲಿ ಮೊದಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದ ಚೆನ್ನೈ ಸೂಪರ್ ಕಿಂಗ್ಸ್, ನಂತರ 2011, 2018, 2021 ಹಾಗೂ 2023ರಲ್ಲಿ ಪ್ರಶಸ್ತಿ ಗೆದ್ದುಕೊಂಡಿತ್ತು.

Comments are closed.