ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ನೂತನ ಕೋಚ್ ಆಗಿ ಟೀಮ್ ಇಂಡಿಯಾ ಮಾಜಿ ನಾಯಕ, (Delhi Capitals coach Sourav Ganguly) ಬಂಗಾಳದ ಹುಲಿ ಖ್ಯಾತಿಯ ಸೌರವ್ ಗಂಗೂಲಿ (Sourav Ganguly) ನೇಮಕಗೊಳ್ಳುವ ಸಾಧ್ಯತೆಯಿದೆ.
ಸೌರವ್ ಗಂಗೂಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿದ್ದು, ಮುಂದಿನ ಸಾಲಿನಲ್ಲಿ ಮುಖ್ಯ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದೆ ಎಂದು ತಿಳಿದು ಬಂದಿದೆ. ಡೆಲ್ಲಿ ತಂಡದ ಹೆಡ್ ಕೋಚ್ ಆಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ (Ricky Ponting) ತಮ್ಮ ಜವಾಬ್ದಾರಿಯಿಂದ ಹಿಂದಕ್ಕೆ ಸರಿಯಲು ನಿರ್ಧರಿಸಿರುವ ಕಾರಣ, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ದಾದಾಗೆ ಕೋಚ್ ಪಟ್ಟ ಕಟ್ಟುವ ಸಾಧ್ಯತೆಯಿದೆ. ಕೋಚ್ ಜವಾಬ್ದಾರಿ ತ್ಯಜಿಸುವ ಬಗ್ಗೆ ಡೆಲ್ಲಿ ಫ್ರಾಂಚೈಸಿ ಜೊತೆ ಪಾಂಟಿಂಗ್ ಈಗಾಗಲೇ ಮಾತುಕತೆ ನಡೆಸಿದ್ದಾರೆ.
ರಿಕಿ ಪಾಂಟಿಂಗ್ 2018ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಿದ್ದು, ಐಪಿಎಲ್ ಟ್ರೋಫಿ ಗೆಲ್ಲಲು ಡೆಲ್ಲಿ ತಂಡ ವಿಫಲವಾಗುತ್ತಾ ಬಂದಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳನ್ನಷ್ಟೇ ಗೆದ್ದಿದ್ದ ಡೆಲ್ಲಿ ಕ್ಯಾಪಿಟಲ್ಸ್, ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು.
ಸೌರವ್ ಗಂಗೂಲಿ 2019ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾರ್ಗದರ್ಶಕರಾಗಿ ನೇಮಕಗೊಂಡಿದ್ದರು. ಅದೇ ವರ್ಷ ಐಪಿಎಲ್’ನಲ್ಲಿ ಪ್ಲೇ ಆಫ್ ಪ್ರವೇಶಿಸಿದ್ದ ಕ್ಯಾಪಿಟಲ್ಸ್ ಪಡೆ, 2020ರಲ್ಲೂ ಪ್ಲೇ ಆಫ್ ಹಂತಕ್ಕೇರಿತ್ತು. ಇದೀಗ ಡೆಲ್ಲಿ ತಂಡದ ಕೋಚಿಂಗ್ ಜವಾಬ್ದಾರಿ ವಹಿಸಿಕೊಳ್ಳಲು ಸೌರವ್ ಗಂಗೂಲಿ ಉತ್ಸುಕರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : Karnataka Vs Namibia : ಅಂತರಾಷ್ಟ್ರೀಯ ತಂಡದ ವಿರುದ್ಧ ಏಕದಿನ ಸರಣಿ ಗೆದ್ದ ಕನ್ನಡದ ಹುಡುಗರು
50 ವರ್ಷದ ಸೌರವ್ ಗಂಗೂಲಿ ಅವರಿಗೆ ಕೋಚಿಂಗ್ ಅನುಭವವಿಲ್ಲ. ಟೀಮ್ ಇಂಡಿಯಾ ನಾಯಕನಾಗಿ ಮಿಂಚಿದ್ದ ಗಂಗೂಲಿ, ಬಿಸಿಸಿಐ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಹೊಸ ಜವಾಬ್ದಾರಿಯನ್ನು ಎದುರು ನೋಡುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಿ ಗಂಗೂಲಿ ಅವರ ಹೆಸರನ್ನು ಡೆಲ್ಲಿ ಫ್ರಾಂಚೈಸಿ ಘೋಷಣೆ ಮಾಡುವ ಸಾಧ್ಯತೆಯಿದೆ.
Delhi Capitals coach Sourav Ganguly : Kok for Delhi Capitals coach Ricky Ponting, Sourav Ganguly is the new head coach?