Dinesh Karthik: 12 ವರ್ಷಗಳ ನಂತರ ಮತ್ತೊಮ್ಮೆ ವಿಶ್ವಕಪ್ ಆಡಲಿದ್ದಾರೆ ಡಿಕೆ ; ನಾಲ್ಕೇ ಶಬ್ದಗಳಲ್ಲಿ ಖುಷಿ ಹಂಚಿಕೊಂಡ ಕಾರ್ತಿಕ್

ಬೆಂಗಳೂರು: (Dinesh Karthik Dreams come true) ಟೀಮ್ ಇಂಡಿಯಾದ 37 ವರ್ಷದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ದಿನೇಶ್ ಕಾರ್ತಿಕ್ ಅವರ ಕಥೆ ಕ್ರಿಕೆಟಿಗರಿಗೆ ದೊಡ್ಡ ಸ್ಫೂರ್ತಿ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದ ಡಿಕೆ, 18 ವರ್ಷಗಳ ನಂತರ ಮತ್ತೊಂದು ವಿಶ್ವಕಪ್ ಟೂರ್ನಿಯಲ್ಲಿ(ICC t20 World Cup 2022) ಆಡಲು ರೆಡಿಯಾಗಿದ್ದಾರೆ.

ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ (Indian Team for ICC T20 World CUp) 37 ವರ್ಷದ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ಕ್ರಿಕೆಟ್’ನಲ್ಲಿ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಕ್ಕಿರುವ ಖುಷಿಯನ್ನು ಟ್ವಿಟರ್’ನಲ್ಲಿ ಹಂಚಿಕೊಂಡಿರುವ ದಿನೇಶ್ ಕಾರ್ತಿಕ್ “ಕನಸುಗಳು ನನಸಾಗುತ್ತವೆ” ಎಂದು ಬರೆದುಕೊಂಡಿದ್ದಾರೆ.

ದಿನೇಶ್ ಕಾರ್ತಿಕ್ 2007ರಲ್ಲಿ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯ. ಎಂ.ಎಸ್ ಧೋನಿ ನಾಯಕತ್ವದಲ್ಲಿ ಭಾರತ ಚುಟುಕು ವಿಶ್ವಕಪ್ ಗೆದ್ದಾಗ ಡಿಕೆ, ಆ ತಂಡದ ಭಾಗವಾಗಿದ್ದರು. 2007ರ ಟಿ20 ವಿಶ್ವಕಪ್’ನಲ್ಲಿ 4 ಪಂದ್ಯಗಳನ್ನಾಡಿದ್ದ ದಿನೇಶ್ ಕಾರ್ತಿಕ್, 2010ರ ಟಿ20 ವಿಶ್ವಕಪ್’ನಲ್ಲಿ 2 ಪಂದ್ಯಗಳನ್ನಾಡಿದ್ದರು. ನಂತರ ಟಿ20 ವಿಶ್ವಕಪ್’ಗಳಲ್ಲಿ ಆಡಿದ್ದ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಡಿಕೆ ವಿಫಲರಾಗಿದ್ದರು. ಆದರೆ ಇದೀಗ ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿರುವ ಕಾರ್ತಿಕ್, 12 ವರ್ಷಗಳ ನಂತರ ಟಿ20 ವಿಶ್ವಕಪ್’ನಲ್ಲಿ ಆಡಲು ಸಜ್ಜಾಗಿದ್ದಾರೆ.

2022ರ ಟಿ20 ವಿಶ್ವಕಪ್’ನಲ್ಲಿ ಆಡಿ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡುವುದೇ ತಮ್ಮ ಜೀವನದ ಅತೀ ದೊಡ್ಡ ಗುರಿ ಎಂದು ಇದೇ ವರ್ಷದ ಏಪ್ರಿಲ್ 16ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದ ಬಳಿಕ ದಿನೇಶ್ ಕಾರ್ತಿಕ್ ಹೇಳಿದ್ದರು. ಅದಾಗಿ ಐದು ತಿಂಗಳ ನಂತರ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ದಿನೇಶ್ ಕಾರ್ತಿಕ್ ಸ್ಥಾನ ಪಡೆದಿದ್ದಾರೆ.

2006ರಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದ ಡಿಕೆ, ಭಾರತ ಆಡಿದ ಮೊಟ್ಟ ಮೊದಲ ಟಿ20 ಪಂದ್ಯದಲ್ಲೇ ಪಂದ್ಯಶ್ರೇಷ್ಠರಾಗಿ ಮೂಡಿ ಬಂದಿದ್ದರು. 18 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಒಟ್ಟು 50 ಟಿ20 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 28.19ರ ಸರಾಸರಿಯಲ್ಲಿ 139.95ರ ಉತ್ತಮ ಸ್ಟ್ರೈಕ್’ರೇಟ್’ನೊಂದಿಗೆ 592 ರನ್ ಕಲೆ ಹಾಕಿದ್ದಾರೆ.

ಇದನ್ನೂ ಓದಿ : T20 World Cup: 15 ಮಂದಿ ಸದಸ್ಯರ ಟೀಮ್ ಇಂಡಿಯಾ ಪ್ರಕಟ; ತಂಡದಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

ಇದನ್ನೂ ಓದಿ : ICC T20 World Cup India Team: ಭಾರತ ಟಿ20 ವಿಶ್ವಕಪ್ ತಂಡದಲ್ಲೊಬ್ಬ “ಕೋಟಾ” ಪ್ಲೇಯರ್

Dinesh Karthik Dreams come true select ICC t20 World Cup 2022

Comments are closed.