ಲಂಡನ್ : ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ತೋರಿದೆ. ಇಂಗ್ಲೆಂಡ್ ಇನ್ಸಿಂಗ್ಸ್ ಜೊತೆಗೆ 76 ರನ್‌ಗಳ ದಾಖಲಿಸುವ ಮೂಲಕ ಟೆಸ್ಟ್ ಸರಣಿಯನ್ನು 1-1 ರ ಅಂತರದಲ್ಲಿ ಸಮಬಲ ಸಾಧಿಸಿದೆ.
ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಕೇವಲ 78 ರನ್ ಗಳಿಗೆ ಭಾರತ ಸರ್ಪಪತನ ಕಂಡಿತ್ತು. ರೋಹಿತ್ ಶರ್ಮಾ ಹಾಗೂ ಅಜಿಂಕ್ಯಾ ರಹಾನೆ ಹೊರತು ಪಡಿಸಿ ಉಳಿದ ಯಾವೊಬ್ಬ ಆಟಗಾರರು ಕೂಡ ಎರಡಂಕಿ ರನ್ ದಾಟಲಿಲ್ಲ.
ನಂತರ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ ಜೋ ರೂಪ್ ಭರ್ಜರಿ ಶತಕ ಹಾಗೂ ಹಸೀಬ್ ಹಮೀದ್, ಜೋಸೆಫ್ ಬರ್ನ್ಸ್ ಹಾಗೂ ಡೇವಿಡ್ ಮಲನ್ ಅವರ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಂಡ 432ರನ್ ಗಳಿಸುವ ಮೂಲಕ ಇನ್ನಿಂಗ್ಸ್ ಮುನ್ನಡೆ ಸಾಧಿಸಿತ್ತು.
ಎರಡನೇ ಇನ್ನಿಂಗ್ಸ್‌ನಲ್ಲಿಯೂ ಭಾರತ ತಂಡ ಮತ್ತದೇ ಕಳಪೆ ಆಟದ ಪ್ರದರ್ಶನ ನೀಡಿದೆ. ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ ಹಾಗೂ ನಾಯಕ ವಿರಾಟ್ ಕೊಯ್ಲಿ ಅರ್ಧ ಶತಕ ಗಳಿಸುವ ಮೂಲಕ ಭಾರತ ತಂಡ 278ರನ್ ಗಳಿಗೆ ಸರ್ಪ ಪತನ ಕಾಣುವ ಮೂಲಕ ಸೋಲನ್ನು ಒಪ್ಪಿಕೊಂಡಿದೆ. ಈ ಮೂಲಕ ಮೊದಲ ಎರಡು ಪಂದ್ಯಗಳನ್ನು ಕೈ ಚೆಲ್ಲಿದ್ದ ಇಂಗ್ಲೆಂಡ್ ಮೂರನೇ ಪಂದ್ಯವನ್ನು ಗೆದ್ದು ಬೀಗಿದೆ.