ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ (Indian Cricket team head coach) ಆಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ನೇಮಕಗೊಳ್ಳುವುದು ಖಚಿತವಾಗಿದೆ. ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಗಂಭೀರ್ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಗಂಭೀರ್ ಅವರನ್ನು ನೂತನ ಕೋಚ್ ಆಗಿ ನೇಮಕ ಮಾಡಲು ಬಿಸಿಸಿಐ ಒಲವು ಹೊಂದಿದ್ದು, ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದೆ.

ಗೌತಮ್ ಗಂಭೀರ್ ಕೋಚ್ ಆಗುತ್ತಿದ್ದಂತೆ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲು ಕ್ರಿಕೆಟಿಗನೊಬ್ಬ ತುದಿಗಾಲಲ್ಲಿ ಕಾಯುತ್ತಿದ್ದಾನೆ. ಆತ ಬೇರಾರೂ ಅಲ್ಲ, ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಈ ಬಾರಿ ಐಪಿಎಲ್ ಟ್ರೋಫಿ ಗೆದ್ದು ಕೊಟ್ಟ ನಾಯಕ, ಮುಂಬೈ ಆಟಗಾರ ಶ್ರೇಯಸ್ ಅಯ್ಯರ್ (Shreyes Iyer).
ಬಿಸಿಸಿಐನ ಶಿಸ್ತು ಉಲ್ಲಂಘಿಸಿದ್ದ ಕಾರಣಕ್ಕಾಗಿ 29 ವರ್ಷದ ಬಲಗೈ ಬ್ಯಾಟ್ಸ್’ಮನ್ ಶ್ರೇಯಸ್ ಅಯ್ಯರ್ ಅವರನ್ನು ಬಿಸಿಸಿಐ ಈ ಬಾರಿ ವಾರ್ಷಿಕ ಒಪ್ಪಂದದಿಂದ ಹೊರಗಿಟ್ಟಿದೆ. ಅಷ್ಟೇ ಅಲ್ಲ, ಕಳೆದ ಫೆಬ್ರವರಿಯಲ್ಲಿ ಭಾರತ ತಂಡದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಕಳೆದುಕೊಂಡಿದ್ದರು. ಅಶಿಸ್ತಿನ ಕಾರಣಕ್ಕಾಗಿ ಬಿಸಿಸಿಐನ ಕೆಂಗಣ್ಣಿಗೆ ಶ್ರೇಯಸ್ ಅಯ್ಯರ್ ಗುರಿಯಾಗಿದ್ದರು.
ಇದನ್ನೂ ಓದಿ : Gautam Gambhir India Coach: ಗೌತಮ್ ಗಂಭೀರ್ ಟೀಮ್ ಇಂಡಿಯಾ ಕೋಚ್, ತಿಂಗಳ ಅಂತ್ಯದಲ್ಲಿ ಘೋಷಣೆ !

ಇದೀಗ ಗೌತಮ್ ಗಂಭೀರ್ ಟೀಮ್ ಇಂಡಿಯಾ ಕೋಚ್ ಆಗುವುದು ಪಕ್ಕಾ ಆಗಿದ್ದು, ಇದರಿಂದ ಶ್ರೇಯಸ್ ಅಯ್ಯರ್’ಗೆ ಅದೃಷ್ಟ ಖುಲಾಯಿಸಲಿದೆ ಎನ್ನಲಾಗುತ್ತಿದೆ. ಈ ಬಾರಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಗೌತಮ್ ಗಂಭೀರ್ ಮತ್ತು ಶ್ರೇಯಸ್ ಅಯ್ಯರ್ ಜುಗಲ್ಬಂದಿಯಲ್ಲಿ 10 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ ಆಗಿತ್ತು. 42 ವರ್ಷದ ಗಂಭೀರ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ (ಮಾರ್ಗದರ್ಶಕ) ಆಗಿ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
ಇದನ್ನೂ ಓದಿ : CCPL 2024 : ಕನ್ನಡಿಗ ಮುಕುಂದ್ ಗೌಡ ಮಾರ್ಗದರ್ಶನದ ರಾಯ್ಪುರ ರೈನೋಸ್ ಚೊಚ್ಚಲ ಚಾಂಪಿಯನ್
ಭಾರತ ತಂಡದ ನೂತನ ಮುಖ್ಯ ಕೋಚ್ ಅವಧಿ ಮೂರೂವರೆ ವರ್ಷಗಳದ್ದಾಗಿರುತ್ತದೆ. 2024ರ ಜುಲೈ 1ಕ್ಕೆ ಆರಂಭವಾಗಿ 2027ರ ಡಿಸೆಂಬರ್ 31ಕ್ಕೆ ಕೋಚ್ ಹುದ್ದೆ ಅವಧಿ ಕೊನೆಗೊಳ್ಳಲಿದೆ. ಭಾರತ ಪುರುಷರ ತಂಡದ ಪರ್ಫಾಮೆನ್ಸ್ ಮತ್ತು ಮ್ಯಾನೇಜ್ಮೆಂಟ್ ಜವಾಬ್ದಾರಿ ಮುಖ್ಯ ತರಬೇತು ದಾರನದ್ದಾಗಿರುತ್ತದೆ.ಟೀಮ್ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಜೂನ್ 31ಕ್ಕೆ ಅಂತ್ಯಗೊಳ್ಳಲಿದೆ. ಐಸಿಸಿ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ದ್ರಾವಿಡ್ ಭಾರತ ತಂಡದ ಕೋಚ್ ಹುದ್ದೆ ತೊರೆಯಲಿದ್ದಾರೆ.
ಇದನ್ನೂ ಓದಿ : USA Cricket Team : ಟಿ20 ವಿಶ್ವಕಪ್’ನಿಂದ ಪಾಕ್ ಔಟ್, ಸೂಪರ್-8 ತಲುಪಿ ಇತಿಹಾಸ ನಿರ್ಮಿಸಿದ ಅಮೆರಿಕ
Gautam Gambhir is the Team India Coach but Shreyas Iyer is lucky!