Team India Head Coach : ಭಾರತ ಕ್ರಿಕೆಟ್ ತಂಡದ ನೂತನ ಹೆಡ್ ಕೋಚ್ (Team India Head Coach) ಆಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ನೇಮಕ ಪಕ್ಕಾ ಎನ್ನಲಾಗುತ್ತಿದೆ. ಗಂಭೀರ್ ಕೋಚ್ ಆಗ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದಂತೆ ಟೀಮ್ ಇಂಡಿಯಾದ ಮಾಜಿ ನಾಯಕ, ಬಂಗಾಳದ ಹುಲಿ ಖ್ಯಾತಿಯ ಸೌರವ್ ಗಂಗೂಲಿ (Sourav Ganguly) ಅಚ್ಚರಿಯ ಬರಹವೊಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಟೀಮ್ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಜೂನ್ 31ಕ್ಕೆ ಅಂತ್ಯಗೊಳ್ಳಲಿದೆ. ಐಸಿಸಿ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ದ್ರಾವಿಡ್ ಭಾರತ ತಂಡದ ಕೋಚ್ ಹುದ್ದೆ ತೊರೆಯಲಿದ್ದಾರೆ. ಹೀಗಾಗಿ ನೂತನ ಕೋಚ್ ಆಯ್ಕೆಗೆ ಬಿಸಿಸಿಐ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.
ಐಪಿಎಲ್ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್ ಅವರನ್ನು ಭಾರತ ತಂಡದ ನೂತನ ಹೆಡ್ ಕೋಚ್ ಆಗಿ ನೇಮಕ ಮಾಡಲು ಬಿಸಿಸಿಐ ಒಲವು ಹೊಂದಿದೆ. ನೂತನ ಕೋಚ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹೊತ್ತಲ್ಲೇ ಸೌರವ್ ಗಂಗೂಲಿ ನೀಡಿರುವ ಅಭಿಪ್ರಾಯದ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
https://x.com/SGanguly99/status/1796058066942632023
“ಒಬ್ಬರ ಜೀವನದಲ್ಲಿ ತರಬೇತುದಾರನಿಗೆ ತುಂಬಾ ಮಹತ್ವವಿದೆ. ಅವರ ಮಾರ್ಗದರ್ಶನ ಮತ್ತು ನಿರಂತರ ತರಬೇತಿಯು ಮೈದಾನದ ಒಳಗೆ ಮತ್ತು ಹೊರಗೆ ಯಾವುದೇ ವ್ಯಕ್ತಿಯ ಭವಿಷ್ಯವನ್ನು ರೂಪಿಸುತ್ತದೆ. ಹೀಗಾಗಿ ಕೋಚ್ ಆಯ್ಕೆಯನ್ನು ಅತ್ಯಂತ ಬುದ್ಧಿವಂತಿಕೆ ಯಿಂದ ಮಾಡಿ” ಎಂದು ಸೌರವ್ ಗಂಗೂಲಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಇದನ್ನೂ ಓದಿ : Yuvraj Singh 2.0 Loading: ಯುವರಾಜ್ ಸಿಂಗ್ ತಯಾರು ಮಾಡಿದ ಹುಡುಗ ಅಭಿಷೇಕ್ ಶರ್ಮಾ ಐಪಿಎಲ್’ನಲ್ಲಿ ಧೂಳೆಬ್ಬಿಸಿದ!
ಈ ಮೂಲಕ ಗೌತಮ್ ಗಂಭೀರ್ ಅವರ ನೇಮಕವನ್ನು ಗಂಗೂಲಿ ವಿರೋಧಿಸಿದ್ರಾ ಎಂಬ ಪ್ರಶ್ನೆಗಳು ಎದ್ದಿವೆ. ಗಂಭೀರ್ ಒಳ್ಳೆಯ ಆಟಗಾರನಾಗಿದ್ದರೂ, ಮೈದಾನ ಹಾಗೂ ಮೈದಾನದ ಹೊರಗೆ ಅವರ ನಡವಳಿಕೆಗಳು ಸಾಕಷ್ಟು ಬಾರಿ ವಿವಾದಕ್ಕೆ ಕಾರಣವಾಗಿವೆ. ಇದನ್ನೇ ಉಲ್ಲೇಖಿಸಿ ಸೌರವ್ ಗಂಗೂಲಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾನೆ ಎನ್ನಲಾಗುತ್ತಿದೆ.

ಭಾರತ ತಂಡದ ನೂತನ ಮುಖ್ಯ ಕೋಚ್ ಅವಧಿ ಮೂರೂವರೆ ವರ್ಷಗಳದ್ದಾಗಿರುತ್ತದೆ. 2024ರ ಜುಲೈ 1ಕ್ಕೆ ಆರಂಭವಾಗಿ 2027ರ ಡಿಸೆಂಬರ್ 31ಕ್ಕೆ ಕೋಚ್ ಹುದ್ದೆ ಅವಧಿ ಕೊನೆಗೊಳ್ಳಲಿದೆ. ಭಾರತ ಪುರುಷರ ತಂಡದ ಪರ್ಫಾಮೆನ್ಸ್ ಮತ್ತು ಮ್ಯಾನೇಜ್ಮೆಂಟ್ ಜವಾಬ್ದಾರಿ ಮುಖ್ಯ ತರಬೇತುದಾರನದ್ದಾಗಿರುತ್ತದೆ.
ಇದನ್ನೂ ಓದಿ : Team India Head Coach : ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

- ಭಾರತ ತಂಡದ ಕೋಚ್ ಆಗಲು ಬಿಸಿಸಿಐ ನಿಗದಿ ಪಡಿಸಿರುವ ಮಾನದಂಡಗಳು:
- 30 ಟೆಸ್ಟ್ ಅಥವಾ 50 ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರಬೇಕು; ಅಥವಾ
- ಪೂರ್ಣ ಸದಸ್ಯತ್ವ ಹೊಂದಿರುವ ಟೆಸ್ಟ್ ಆಡುವ ರಾಷ್ಟ್ರೀಯ ತಂಡಕ್ಕೆ ಕನಿಷ್ಠ ಎರಡು ವರ್ಷ ಕೋಚ್ ಆಗಿ ಕಾರ್ಯನಿರ್ವಹಿಸಿರಬೇಕು; ಅಥವಾ
- ಅಸೋಸಿಯೇಟ್ ಸದಸ್ಯ ರಾಷ್ಟ್ರಗಳ ತಂಡದ ಹೆಡ್ ಕೋಚ್/ಐಪಿಎಲ್ ಅಥವಾ ಅದಕ್ಕೆ ಸರಿಸಮನಾದ ಅಂತರಾಷ್ಟ್ರೀಯ ಲೀಗ್/ಫಸ್ಟ್ ಕ್ಲಾಸ್ ತಂಡಗಳ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ ಅನುಭವವಿರಬೇಕು; ಅಥವಾ
- ಕನಿಷ್ಠ 3 ವರ್ಷ ರಾಷ್ಟ್ರೀಯ ಎ ತಂಡಗಳ ಕೋಚ್ ಆಗಿರಬೇಕು; ಅಥವಾ
- ಬಿಸಿಸಿಐನ ಲೆವೆಲ್ 3 ಸರ್ಟಿಫಿಕೇಟ್ ಹೊಂದಿರಬೇಕು
- ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 60 ವರ್ಷಕ್ಕಿಂತ ಕಡಿಮೆ ಇರಬೇಕು
Did you warn Gautam Gambhir not to give him the title of coach ? What did Sourav Ganguly write in X ?