Gautham Gambhir : ದೆಹಲಿ: ಭಾರತ ಕ್ರಿಕೆಟ್ ತಂಡದ ಹೊಸ ಕೋಚ್ ಆಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ನೇಮಕಗೊಂಡಿದ್ದು, ಇದೀಗ ಅವರು ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಬಿಜೆಪಿಯ ಮಾಜಿ ಸಂಸದರಾಗಿರುವ ಗೌತಮ್ ಗಂಭೀರ್, 2019ರ ಲೋಕಸಭಾ ಚುನಾವಣೆಯಲ್ಲಿ ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸಿದ್ದರು.

ಆದರೆ ಈ ಬಾರಿಯ ಚುನಾವಣೆಯಿಂದ ಹಿಂದೆ ಸರಿದಿದ್ದ ಗಂಭೀರ್, ಕ್ರಿಕೆಟ್ ವೃತ್ತಿಜೀವನವನ್ನು ಮುಂದುವರಿಸುವ ಉದ್ದೇಶದಿಂದ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದರು. 42 ವರ್ಷದ ಗೌತಮ್ ಗಂಭೀರ್ ಇದೀಗ ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ತರಬೇತುದಾರನಾಗಿ (Head coach of Indian Cricket Team) ನೇಮಕಗೊಂಡಿದ್ದಾರೆ. ಈ ಹೊತ್ತಿನಲ್ಲಿ ಗಂಭೀರ್ ಅವರು ಸಂಸದರಾಗಿದ್ದಾಗ ಮಾಡಿದ್ದ ಒಂದು ಒಳ್ಳೆಯ ಕೆಲಸದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
https://x.com/VIKRAMPRATAPSIN/status/1802606557454274631
ಇದನ್ನೂ ಓದಿ : Yuvraj Singh: 42ನೇ ವಯಸ್ಸಲ್ಲೂ ಅದೇ ಖದರ್, ಅದೇ ಪವರ್: ಕಾಂಗರೂ ಬೇಟೆಯಾಡಿದ ಯುವರಾಜ !
ಗಂಭೀರ್ ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾಗ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ರೂಪಾಯಿಗೆ ಹೊಟ್ಟೆ ತುಂಬಾ ಊಟ ಹಾಕುವ ಕ್ಯಾಂಟೀನ್’ಗಳನ್ನು ತೆರೆದಿದ್ದರು. ಬಡವರ ಹೊಟ್ಟೆ ತುಂಬಿಸುವ ಈ ಯೋಜನೆ ಭಾರೀ ಯಶಸ್ಸು ಕಂಡಿತ್ತು. ಭಾರತ ತಂಡದ ನೂತನ ಮುಖ್ಯ ಕೋಚ್ ಅವಧಿ ಮೂರೂವರೆ ವರ್ಷಗಳದ್ದಾಗಿರುತ್ತದೆ. ಗೌತಮ್ ಗಂಭೀರ್ ಅವರ ಮುಖ್ಯ ಕೋಚ್ ಅವಧಿಯು ಜುಲೈ 1 2024ಕ್ಕೆ ಆರಂಭವಾಗಿ ಡಿಸೆಂಬರ್ 31 2027ಕ್ಕೆ ಅಂತ್ಯಗೊಳ್ಳಲಿದೆ. ಭಾರತ ಪುರುಷರ ಕ್ರಿಕೆಟ್ ತಂಡದ ಸಾಧನೆ ಮ್ತು ಆಡಳಿತದ ಜವಾಬ್ದಾರಿ ಮುಖ್ಯ ತರಬೇತುದಾರನದ್ದಾಗಿರುತ್ತದೆ.

ಟೀಮ್ ಇಂಡಿಯಾದ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಜೂನ್ 31ಕ್ಕೆ ಅಂತ್ಯಗೊಂಡಿತ್ತು. ಐಸಿಸಿ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ದ್ರಾವಿಡ್ ಭಾರತ ತಂಡದ ಕೋಚ್ ಹುದ್ದೆ ತೊರೆದಿದ್ದರು. ಇದೇ ಕಾರಣದಿಂದಲೇ ಬಿಸಿಸಿಐ ಹೊಸ ಕೋಚ್ ನೇಮಕಕ್ಕೆ ಅರ್ಜಿಗಳನ್ನು ಆಹ್ವಾನಿಸಿತ್ತು. ಗೌತಮ್ ಗಂಭೀರ್ ಅವರು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್‌ಆಗಿ ನೇಮಕ ಮಾಡಲು ಬಿಸಿಸಿಐ ಒಲವು ವ್ಯಕ್ತಪಡಿಸಿತ್ತು.
ಇದನ್ನೂ ಓದಿ : India Champions Champion: ಪಾಕಿಸ್ತಾನವನ್ನು ಸೋಲಿಸಿದ ಭಾರತಕ್ಕೆ ಮತ್ತೆ ವಿಶ್ವ ಚಾಂಪಿಯನ್ ಪಟ್ಟ!
ಕೊನೆಗೆ ಅವರೇ ಭಾರತ ತಂಡದ ನೂತನ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ. 42 ವರ್ಷದ ಗೌತಮ್ ಗಂಭೀರ್ ಭಾರತ ಪರ 58 ಟೆಸ್ಟ್, 147 ಏಕದಿನ ಹಾಗೂ 37 ಟಿ20 ಪಂದ್ಯಗಳನ್ನಾಡಿದ್ದಾರೆ. 2016ರಲ್ಲಿ ಗಂಭೀರ್ ತಮ್ಮ ವೃತ್ತಿಜೀವನದ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಡಿದ್ದರು. ಐಪಿಎಲ್-2024 ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿದ್ದ ಗಂಭೀರ್, ಕೆಕೆಆರ್ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.
ಇದನ್ನೂ ಓದಿ : Rahul Dravid : ರಾಹುಲ್ ದ್ರಾವಿಡ್ ಬಗ್ಗೆ ರಾಜ್ಯ ಸರ್ಕಾರ, ರಾಜ್ಯ ಕ್ರಿಕೆಟ್ ಸಂಸ್ಥೆಗೆ ಏಕಿಷ್ಟು ನಿರ್ಲಕ್ಷ್ಯ ?
Gautham Gambhir Indian Cricket team Coach Give 1rs Unlimited Meals Gautham Gambhir Foundation