Guinness record: ಐಪಿಎಲ್ ಪಂದ್ಯದ ಮೂಲಕ ಗಿನ್ನೆಸ್ ದಾಖಲೆ ಸೃಷ್ಟಿಸಿದ ನರೇಂದ್ರ ಮೋದಿ ಸ್ಟೇಡಿಯಂ

ಅಹಮದಾಬಾದ್: Guinness record: ಅತ್ಯಾಧುನಿಕ ಸೌಲಭ್ಯಗಳು ಸೇರಿದಂತೆ ನಾನಾ ವೈಶಿಷ್ಟ್ಯಗಳನ್ನು ಹೊಂದಿರುವ ಅಹಮದಾಬಾದ್ ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಮತ್ತೊಂದು ವಿಶೇಷ ದಾಖಲೆ ಸೃಷ್ಟಿಸಿದೆ. ವಿಶ್ವದ ಅತ್ಯಂತ ದೊಡ್ಡ ಕ್ರೀಡಾ ಕಾಂಪ್ಲೆಕ್ಸ್ ಎಂಬ ಗಿನ್ನೆಸ್ ದಾಖಲೆಯನ್ನು ನರೇಂದ್ರ ಮೋದಿ ಸ್ಟೇಡಿಯಂ ಪಡೆದುಕೊಂಡಿದೆ. ಕಳೆದ ಆವೃತ್ತಿಯ ಐಪಿಎಲ್ ಪಂದ್ಯದ ಮೂಲಕ ಈ ಹೆಗ್ಗಳಿಕೆ ಬಂದಿದೆ.

ವಿಶ್ವದಲ್ಲಿಯೇ ಅತಿದೊಡ್ಡ ಕ್ರೀಡಾಂಗಣವೆಂದು ಗುರುತಿಸಿಕೊಂಡಿರುವ ಗುಜರಾತ್ ನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ ಅಭಿಮಾನಿಗಳ ಹಾಜರಾತಿಯಿದ ವಿಶ್ವದಾಖಲೆ ಪುಟ ಸೇರಿದೆ. 2022ರ ಇಂಡಿಯನ್ ಪ್ರೀಮಿಯರ್ ಲೀಗ್ ನ(IPL) ಫೈನಲ್ ಪಂದ್ಯದಲ್ಲಿ ಅತಿಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ ಹಾಜರಾಗಿದ್ದು, ಇದು ಗಿನ್ನೆಸ್ ದಾಖಲೆಗೆ ಪಾತ್ರವಾಗಿದೆ.

ಇದನ್ನೂ ಓದಿ: Indian Student Died : ಸೈಕಲ್‌ಗೆ ಪಿಕಪ್‌ ಟ್ರಕ್‌ ಢಿಕ್ಕಿ : ಕೆನಡಾದಲ್ಲಿ ಭಾರತದ ವಿದ್ಯಾರ್ಥಿ ಸಾವು

ಮೇ 29ರಂದು ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಪಂದ್ಯ ವೀಕ್ಷಿಸಲು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂಗೆ 1,01,566 ಮಂದಿ ಪ್ರೇಕ್ಷಕರು ಹಾಜರಾಗಿದ್ದರು. ಈ ಮೂಲಕ ಏಕಕಾಲಕ್ಕೆ ಅತಿ ಹೆಚ್ಚು ಕ್ರೀಡಾಪ್ರೇಮಿಗಳಿಗೆ ಪ್ರವೇಶಾವಕಾಶ ಕಲ್ಪಿಸಿಕೊಟ್ಟ ಸ್ಟೇಡಿಯಂ ಇದಾಗಿದೆ. ಟಿ-20 ಕ್ರಿಕೆಟ್ ನ ಇತಿಹಾಸದಲ್ಲೇ ಹಾಜರಾದ ಅತಿ ದೊಡ್ಡ ಅಭಿಮಾನಿಗಳ ಸಂಖ್ಯೆ ಎನಿಸಿಕೊಂಡಿದ್ದು ವಿಶ್ವದಾಖಲೆಯನ್ನು ಸೃಷ್ಟಿಸಿದೆ.

ವಿಶ್ವದಾಖಲೆಗೆ ಸೇರ್ಪಡೆಗೊಂಡ ಮಾಹಿತಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಪುರಸ್ಕಾರದ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Vehicle Scrap: ವಾಯುಮಾಲಿನ್ಯ ತಡೆಯುವತ್ತ ಕೇಂದ್ರ ದಿಟ್ಟ ನಿರ್ಧಾರ; 15 ವರ್ಷ ಪೂರೈಸಿದ ಎಲ್ಲಾ ಸರ್ಕಾರಿ ವಾಹನಗಳು ಗುಜರಿಗೆ…

ಭಾರತ ಗಿನ್ನೆಸ್ ವಿಶ್ವದಾಖಲೆ ಬರೆದಿರುವುದು ಪ್ರತಿಯೊಬ್ಬರಿಗೂ ಹೆಮ್ಮೆಯ ವಿಚಾರವಾಗಿದೆ. ಇದು ದೇಶದ ಎಲ್ಲಾ ಅಭಿಮಾನಿಗಳ ಬೆಂಬಲ ಹಾಗೂ ಉತ್ಸಾಹದಿಂದ ಸಾಧ್ಯವಾಗಿದೆ. ಅಭಿನಂದನೆಗಳು ಎಂದು ಬಿಸಿಸಿಐ ಟ್ವಿಟರ್ ನಲ್ಲಿ ಬರೆದುಕೊಂಡಿದೆ.

ಮೇ 29ರಂದು ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ ರಾಯಲ್ಸ್ ಬಳಗ ನಿಗದಿತ 20 ಓವರ್ ಗಳಲ್ಲಿ 130 ರನ್ ಪೇರಿಸಿದ್ದರೆ, ಗುಜರಾತ್ ಟೈಟಾನ್ಸ್ ತಂಡ ಇನ್ನೂ 11 ಎಸೆತಗಳು ಬಾಕಿ ಇರುವಂತೆಯೇ ಗುರಿ ಮುಟ್ಟಿ ಗೆಲುವು ಸಾಧಿಸಿತ್ತು.

Guinness record: BCCI sets Guinness World Record for biggest crowd attendance of T20 match

Comments are closed.