ಟೀಮ್ ಇಂಡಿಯಾ ಭರವಸೆಯ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂದೆಯಾಗಿದ್ದಾರೆ. ನಮಗೆ ಗಂಡು ಮಗು ಜನಿಸಿದೆ ಎಂದು ಪಾಂಡ್ಯ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.
ಹಾರ್ದಿಕ್ ಪಾಂಡ್ಯ ಭಾರತದ ಸರ್ವಶ್ರೇಷ್ಟ ಆಲ್ ರೌಂಡರ್ ಆಟಗಾರ. ಹಾರ್ದಿಕ್ ಪಾಂಡ್ಯ ವರ್ಷದ ಮೊದಲ ದಿನದಂದು ನಟಿ ಸ್ಟಾಂಕೋವಿಕ್ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಲಾಕ್ ಡೌನ್ ಸಮಯದಲ್ಲಿ ತಾನು ತಂದೆಯಾಗುತ್ತಿರುವ ಸುದ್ದಿಯನ್ನು ಪ್ರಕಟಿಸಿ ಎಲ್ಲರಿಗೂ ಅಚ್ಚರಿಯನ್ನು ಮೂಡಿಸಿದ್ದರು. ಆದರೆ ಈ ನಡುವಲ್ಲೇ ಸ್ಟಾಂಕೋವಿಕ್ ಹಾಗೂ ಹಾರ್ದಿಕ್ ಪಾಂಡ್ಯ ವಿವಾಹವಾಗಿದ್ದಾರೆ ಎನ್ನಲಾಗುತ್ತಿದೆ.

ಆದರೆ ಮದುವೆಯಾಗದೆ ಹಾರ್ದಿಕ್ ಪಾಂಡ್ಯ ತಂದೆಯಾದ್ರಾ ಅಂತಾನೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು. ಇದೀಗ ಹಾರ್ದಿಕ್ ಪಾಂಡ್ಯ ತಂದೆಯಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಾರ್ದಿಕ್ ಪಾಂಡ್ಯ ಅವರ ಮಗುವಿನ ಕೈ ಹಿಡಿದುಕೊಂಡಿರುವ ಚಿತ್ರವನ್ನು ಪ್ರಕಟಿಸಿದ ಬೆನ್ನಲ್ಲೇ ಅವರಿಗೆ ಅಭಿನಂದನೆಗಳ ಸುರಿಮಳೆ ಹರಿದಿದೆ.