Hardik Pandya : ಏಕದಿನ ವಿಶ್ವಕಪ್‌ನಲ್ಲಿ ಪಾದದ ಗಾಯಕ್ಕೆ ತುತ್ತಾಗಿರುವ ಹಾರ್ದಿಕ್ ಪಾಂಡ್ಯ ಸದ್ಯ ಕ್ರಿಕೆಟ್‌ನಿಂದ ದೂರವಾಗಿದ್ದರು. ಆದ್ರೀಗ ಐಪಿಎಲ್‌ಗೆ (IPL 2024) ಮರಳುವ ಸೂಚನೆ ನೀಡಿದ್ದಾರೆ. ಈಗಾಗಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಸೇರಿರುವ ಹಾರ್ದಿಕ್ ಪಾಂಡ್ಯ ಅಭ್ಯಾಸ ಪಂದ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಮುಂಬರುವ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಆಡುತ್ತಾರೋ ಇಲ್ಲವೋ ಅನ್ನೋ ಗೊಂದಲ ಏರ್ಪಟ್ಟಿತ್ತು. ಗುಜರಾತ್ ಟೈಟಾನ್ಸ್ ತಂಡದಿಂದ ಮುಂಬೈ ತಂಡಕ್ಕೆ ಮರಳಿರುವ ಹಾರ್ದಿಕ್ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ತಂಡ ನಾಯಕತ್ವದ ಜವಾಬ್ದಾರಿಯನ್ನು ವಹಿಸಿತ್ತು. ವಿಶ್ವಕಪ್ ನಂತರ ಯಾವುದೇ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಆಡಿರಲಿಲ್ಲ.
ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿರುವುದರ ಜೊತೆಗೆ ಗಾಯದ ಸಮಸ್ಯೆಯಿಂದ ಹಾರ್ದಿಕ್ ಪಾಂಡ್ಯ ಫಿಟ್ ಆಗಿರಲಿಲ್ಲ. ಇದೇ ಕಾರಣಕ್ಕೆ ಅವರು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಕುರಿತು ಸಾಕಷ್ಟು ಚರ್ಚೆಗಳು ನಡೆದಿತ್ತು. ಆದ್ರೀಗ ಹಾರ್ದಿಕ್ ಪಾಂಡ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಭಾರತದಲ್ಲೇ ನಡೆಯಲಿದೆ ಐಪಿಎಲ್ 2024 : ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2024ಕ್ಕೆ ಮೊದಲು ಬೆಂಗಳೂರು ಸಮೀಪದ ಆಲೂರಿನಲ್ಲಿ ಅಭ್ಯಾಸ ಪಂದ್ಯಗಳನ್ನು ಆಡುತ್ತಿದ್ದಾರೆ. ಇಎಸ್‌ಪಿಎನ್ ಕ್ರಿಕ್ ಇನ್ಪೋ ವರದಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಬೆಂಗಳೂರು ಬಳಿಯ ಆಲೂರು ಕ್ರೀಡಾಂಗಣದಲ್ಲಿ 20-ಓವರ್ ಅಭ್ಯಾಸ ಪಂದ್ಯವನ್ನು ಆಡಿದ್ದಾರೆ. ಈ ಪಂದ್ಯವನ್ನು ಎನ್‌ಸಿಎ ಫಿಸಿಯೋ ಮತ್ತು ತರಬೇತುದಾರರು ವೀಕ್ಷಣೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಹಾರ್ದಿಕ್ ಪಾಂಡ್ಯ ಗುರುವಾರ ಮತ್ತೊಂದು ಅಭ್ಯಾಸ ಪಂದ್ಯವನ್ನು ಆಡಲಿದ್ದಾರೆ. ಐಪಿಎಲ್ 2024 ವಾಪಾಸಾಗುವ ಮೊದಲು ಮಾರ್ಚ್ ಆರಂಭದ ವರೆಗೂ ಅವರು ಅಭ್ಯಾಸ ಪಂದ್ಯಗಳನ್ನು ಆಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಕಳೆದ ವಾರವಷ್ಟೇ ಹಾರ್ದಿಕ್ ಪಾಂಡ್ಯ ಅವರು ಕಿರಣ್ ಮೋರೆ ಅಕಾಡೆಮಿಯಲ್ಲಿ ಅಭ್ಯಾಸ ನಡೆಸಿದ್ದರು.
ಇದನ್ನೂ ಓದಿ : T20 ವಿಶ್ವಕಪ್‌ನಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ರೋಹಿತ್ ಶರ್ಮಾ ನಾಯಕ : ಭಗ್ನವಾಯ್ತು ಹಾರ್ದಿಕ್ ಪಾಂಡ್ಯ ಕನಸು
ಐಪಿಎಲ್ 2024 ಕ್ಕೆ ಅನುಮಾನಾಸ್ಪದ ಆಟಗಾರನಂತೆ ತೋರುತ್ತಿದ್ದರೂ, ಹಾರ್ದಿಕ್ ಪಾಂಡ್ಯ ಐಪಿಎಲ್ ಪಂದ್ಯಾವಳಿಯಲ್ಲಿ ಆಡುವುದು ಖಚಿತ ಎನ್ನಲಾಗುತ್ತಿದೆ. T20 ವಿಶ್ವಕಪ್ 2024 ದೃಷ್ಟಿಯಲ್ಲಿ ಇಟ್ಟುಕೊಂಡು ಫಿಟ್ ಆಗದೇ ಇದ್ದರೂ ಕೂಡ ಬಿಸಿಸಿಐ ವೈದ್ಯಕೀಯ ತಂಡ ಅವರಿಗೆ ಫಿಟ್ನೆಸ್ ಸರ್ಟೀಫಿಕೇಟ್ ನೀಡುತ್ತದೆಯೇ ಎಂಬ ಮಾತು ಕೇಳಿಬಂದಿದೆ. ಮಾರ್ಚ್ ಆರಂಭದ ವೇಳೆಗೆ ಹಾರ್ದಿಕ್ ಶೇ.100ರಷ್ಟು ಫಿಟ್ ಆಗುವ ಸಾಧ್ಯತೆ ಇದೆ.
ಹಾರ್ದಿಕ್ ಪಾಂಡ್ಯ ಮಾರ್ಚ್ ಮೊದಲ ವಾರದಲ್ಲಿ ಮುಂಬೈನಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ಶಿಬಿರವನ್ನು ಸೇರಿಕೊಳ್ಳಲಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನೆಡೆಸಿದ್ದರು, ಅಲ್ಲದೇ ಗುಜರಾತ್ ತಂಡಕ್ಕೆ ಚೊಚ್ಚಲ ಪ್ರಶಸ್ತಿಯನ್ನು ತಂದುಕೊಟ್ಟಿದ್ದರು. ಈ ಬಾರಿ ಹಾರ್ದಿಕ್ ಪಾಂಡ್ಯ ಮುಂಬೈ ತಂಡದ ನಾಯಕರಾಗಲಿದ್ದಾರೆ.
ಇದನ್ನೂ ಓದಿ : IND Vs ENG 4ನೇ ಟೆಸ್ಟ್ : ರಾಂಚಿ ಟೆಸ್ಟ್‌ನಲ್ಲಿ ರಜತ್ ಪಾಟಿದಾರ್ ಬದಲು KL ರಾಹುಲ್
Hardik Pandya entry fix for IPL 2024: Mumbai Indians captain to play warm-up match in NCA