Hardik Pandya meets Amit Shah: ಹೋಮ್ ಮಿನಿಸ್ಟರ್ ಅಮಿತ್ ಶಾ ಭೇಟಿ ಮಾಡಿದ ಹಾರ್ದಿಕ್ ಪಾಂಡ್ಯ, ಕಾರಣವೇನು ಗೊತ್ತಾ?

ಬೆಂಗಳೂರು: ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಡ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Hardik Pandya meets Amit Shah) ಅವರನ್ನು ಭೇಟಿ ಮಾಡಿದ್ದಾರೆ. 2022ನೇ ವರ್ಷದ ಕೊನೇ ದಿನ ರಾತ್ರಿ ದೆಹಲಿಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಸಹೋದರ ಕೃಣಾಲ್ ಪಾಂಡ್ಯ, ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು

ಅಮಿತ್ ಶಾ ಅವರ ಆಹ್ವಾನದ ಮೇರೆಗೆ ಪಾಂಡ್ಯ ಬ್ರದರ್ಸ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಬಗ್ಗೆ ಸ್ವತಃ ಹಾರ್ದಿಕ್ ಪಾಂಡ್ಯ ಅವರೇ ಟ್ವಿಟರ್’ನಲ್ಲಿ ಮಾಹಿತಿ ನೀಡಿದ್ದು, ಭೇಟಿಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ”ನಿಮ್ಮ ಜೊತೆ ಅತ್ಯಮೂಲ್ಯ ಸಮಯವನ್ನ ಕಳೆಯಲು ಆಹ್ವಾನ ನೀಡಿದ್ದಕ್ಕೆ ಧನ್ಯವಾದಗಳು ಅಮಿತ್ ಶಾ ಜೀ. ನಿಮ್ಮನ್ನು ಭೇಟಿ ಮಾಡಿದ್ದು ತುಂಬಾ ಖುಷಿ ತಂದಿದೆ” ಎಂದು ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : Rishabh Pant out IPL 2023 : ಆಸ್ಟ್ರೇಲಿಯಾ ಸರಣಿಗೂ ಇಲ್ಲ, ಐಪಿಎಲ್‌ಗೂ ಇಲ್ಲ; ರಿಷಭ್ ಪಂತ್ ಕಂಬ್ಯಾಕ್ ಸದ್ಯಕ್ಕಿಲ್ಲ

ಭೇಟಿಗೆ ನಿರ್ದಿಷ್ಟ ಕಾರಣಗಳು ತಿಳಿದು ಬಂದಿಲ್ಲ. ಇದೊಂದು ಸೌಜನ್ಯಯುತ ಭೇಟಿ ಎನ್ನಲಾಗ್ತಿದೆ. ಅಮಿತ್ ಶಾ ಗುಜರಾತ್’ನವರಾಗಿದ್ದು, ಹಾರ್ದಿಕ್ ಪಾಂಡ್ಯ ಅವರ ತವರು ರಾಜ್ಯ ಕೂಡ ಗುಜರಾತ್. ಅಮಿತ್ ಶಾ ಅವರ ಪುತ್ರ ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಹಿಂದೆ ಗುಜರಾತ್ ಲಾಬಿ ಕೆಲಸ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇದನ್ನೂ ಓದಿ : Rohit richer than Dhoni in IPL: ಐಪಿಎಲ್‌ನಲ್ಲಿ ರೋಹಿತ್ ಶರ್ಮಾನೇ ಕುಬೇರ, ಧೋನಿ, ಕೊಹ್ಲಿಯನ್ನು ಹಿಂದಿಕ್ಕಿದ ಮುಂಬೈ ಕ್ಯಾಪ್ಟನ್

ಐಸಿಸಿ ಟಿ20 ವಿಶ್ವಕಪ್ ವೈಫಲ್ಯದ ನಂತರ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ಟಿ20 ತಂಡದ ಪೂರ್ಣಕಾಲಿಕ ನಾಯಕನನ್ನಾಗಿ ನೇಮಕ ಮಾಡುವ ಸಾಧ್ಯತೆಯಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಟೀಮ್ ಇಂಡಿಯಾ ನಾಯಕನಾಗಿ ನೇಮಕ ಮಾಡಲಾಗಿದೆ. ಲಂಕಾ ವಿರುದ್ಧದ ಸರಣಿಯ ಮೊದಲ ಪಂದ್ಯ ಜನವರಿ 3ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಶ್ರೀಲಂಕ ವಿರುದ್ಧದ ಏಕದಿನ ಸರಣಿಗೆ ಕನ್ನಡಿಗ ಕೆ.ಎಲ್ ರಾಹುಲ್ ಅವರನ್ನು ಟೀಮ್ ಇಂಡಿಯಾ ಉಪನಾಯಕನ ಪಟ್ಟದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯರನ್ನು ವೈಸ್ ಕ್ಯಾಪ್ಟನ್ ಆಗಿ ನೇಮಕ ಮಾಡಲಾಗಿದೆ.

ಇಂಗ್ಲೀಷ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Hardik Pandya meets union home minister Amit Shah

Comments are closed.