ಮಂಗಳವಾರ, ಏಪ್ರಿಲ್ 29, 2025
HomeSportsCricketHardik Pandya new captain : ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕ

Hardik Pandya new captain : ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕ

- Advertisement -

ಐಪಿಎಲ್ 2022 ಬಹುತೇಕ ಕೊನೆಯ ಹಂತದಲ್ಲಿದೆ, ಜುಲೈನಲ್ಲಿ ಭಾರತ ಕ್ರಿಕೆಟ್ ತಂಡದ ನಿರ್ಣಾಯಕ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಸೇರಿದಂತೆ ಹಲವಾರು ಹಿರಿಯ ಆಟಗಾರರು ಮುಂಬರುವ ದಕ್ಷಿಣ ವಿರುದ್ಧದ ಐದು ಪಂದ್ಯಗಳ ಟಿ 20 ಅಂತರರಾಷ್ಟ್ರೀಯ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಆಫ್ರಿಕಾ ಸರಣಿಗೆ KL ರಾಹುಲ್, ರೋಹಿತ್ ಶರ್ಮಾ ವಿಶ್ರಾಂತಿ ನೀಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ, ಖ್ಯಾತ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya new captain) ಅವರನ್ನು ದಕ್ಷಿಣ ಆಫ್ರಿಕಾ ವಿರುದ್ದದ T20s ಸರಣಿಗೆ ಹೊಸ ನಾಯಕನನ್ನಾಗಿ ನೇಮಕ ಮಾಡುವ ಸಾಧ್ಯತೆಯಿದೆ.

ಭಾರತೀಯ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ಸರಣಿಗಾಗಿ ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಐಪಿಎಲ್ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವದ ಮೂಲಕ ಎಲ್ಲರ ಮನಸೆಳೆದ ಹಿರಿಯ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರಿಗೆ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಮತ್ತು ನಂತರ ಭಾರತ ಪ್ರವಾಸದಲ್ಲಿ ಸೀಮಿತ ಓವರ್‌ಗಳ ಸರಣಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಕೆಲವು ವರದಿಗಳು ಹೇಳಿವೆ.

ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ವಿರುದ್ಧದ T20I ಸರಣಿಯು ಜೂನ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯವು ನವದೆಹಲಿಯಲ್ಲಿ ನಡೆಯಲಿದೆ. ಉಳಿದಂತೆ, ಕಟಕ್, ವಿಶಾಖಪಟ್ಟಣಂ, ರಾಜ್‌ಕೋಟ್ ಮತ್ತು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ಐಪಿಎಲ್ 2022 ರ ಲೀಗ್ ಹಂತದ ಕೊನೆಯ ದಿನವಾದ ಮೇ 22 ರಂದು ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ವಿರಾಟ್ ಕೊಹ್ಲಿ ಐಪಿಎಲ್ 2022 ರಲ್ಲಿ ಫಾರ್ಮ್‌ ಕಳೆದುಕೊಂಡಿದ್ದಾರೆ. ರನ್‌ ಗಳಿಸಲು ಕೊಹ್ಲಿ ಗೆಣಗಾಡುತ್ತಿದ್ದಾರೆ. ಹೀಗಾಗಿ ಕೊಹ್ಲಿ ಅವರನ್ನೂ ದಕ್ಷಿಣ ಆಫ್ರಿಕಾ ವಿರುದ್ದ ಸರಣಿಗೆ ವಿಶ್ರಾಂತಿ ನೀಡುವುದು ಖಚಿತ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಕೊಹ್ಲಿಯ ಟಿ20 ಭವಿಷ್ಯಕ್ಕೆ ದೊಡ್ಡ ಥಂಬ್ಸ್ ಅಪ್ ನೀಡಿದ್ದಾರೆ. ಗಂಗೂಲಿ ಪ್ರಕಾರ, ವಿಶ್ವಕಪ್‌ಗೆ ತಂಡವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಯುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ದೊರೆಯುವ ಸಾಧ್ಯತೆಯಿದೆ.

ಇದನ್ನೂ ಓದಿ : Womens T20 Challenge 2022 : ಮಹಿಳಾ T20 ಚಾಲೆಂಜ್ 2022 ತಂಡಗಳನ್ನು ಪ್ರಕಟಿಸಿದ BCCI

ಇದನ್ನೂ ಓದಿ : RCB Playoff entry : ಆರ್‌ಸಿಬಿ ಪ್ಲೇಆಫ್ ಪ್ರವೇಶ ಅಷ್ಟು ಸುಲಭವಲ್ಲ : ಈ ಎರಡು ತಂಡಗಳು ಸೋಲಲೇ ಬೇಕು

Hardik Pandya new captain for South Africa T20s series

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular