ಭಾರತ ಕ್ರಿಕೆಟ್ ತಂಡ (indian Cricket Team) ತನ್ನ ಮುಂದಿನ ಪಂದ್ಯವನ್ನು ಶ್ರೀಲಂಕಾ ವಿರುದ್ದ ಆಡಲಿದೆ. ಗಾಯಾಳು ಹಾರ್ದಿಕ್ ಪಾಂಡ್ಯ (Hardik Pandya) ಶ್ರೀಲಂಕಾ ವಿರುದ್ದದ ಪಂದ್ಯಕ್ಕೂ ಮೊದಲೇ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.
ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ಕದನ ನಡೆಯಲಿದೆ. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪಾದದ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಹಾರ್ದಿಕ್ ಪಾಂಡ್ಯ ನಾಳೆ ಅಥವಾ ನಾಡಿದ್ದು ಮುಂಬೈಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ.

ಬಾಂಗ್ಲಾದೇಶ ವಿರುದ್ದದ ಪಂದ್ಯದ ವೇಳೆಯಲ್ಲಿ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಬಾಂಗ್ಲಾ ವಿರುದ್ದ ತನ್ನ ಮೊದಲ ಓವರ್ ಬೌಲಿಂಗ್ ಮಾಡುವ ವೇಳೆಯಲ್ಲಿ ಆರಂಭಿಕ ಆಟಗಾರ ಲಿಂಟನ್ ದಾಸ್ ಬಾರಿಸಿದ ಚೆಂಡನ್ನು ಫೀಲ್ಡಿಂಗ್ ಮಾಡುವ ವೇಳೆಯಲ್ಲಿ ಪಾದದ ಗಾಯಕ್ಕೆ ತುತ್ತಾಗಿದ್ದರು. ಕೂಡಲಢ ಅವರು ಮೈದಾನದಿಂದ ಹೊರ ನಡೆದಿದ್ದರು.
ಇದನ್ನೂ ಓದಿ : Shaheen Shah Afridi : ಏಕದಿನ ಕ್ರಿಕೆಟ್‌ನಲ್ಲಿ ದಾಖಲೆ ಸೃಷ್ಟಿಸಿದ ಶಾಹೀನ್ ಶಾ ಆಫ್ರಿದಿ
ವಿಶ್ವಕಪ್‌ನ ಆರಂಭದ ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಆಟ ಪ್ರದರ್ಶಿಸಿದ್ದರು. ಆದರೆ ಗಾಯದ ಸಮಸ್ಯೆಯಿಂದಾಗಿ ಅವರು ಅಕ್ಟೋಬರ್ ೨೨ ರಂದು ನಡೆದ ನ್ಯೂಜಿಲೆಂಡ್ ಹಾಗೂ ಅಕ್ಟೋಬರ್ ೨೯ರಂದು ನಡೆದ ಇಂಗ್ಲೆಂಡ್ ವಿರುದ್ದದ ಪಂದ್ಯವನ್ನು ತಪ್ಪಿಸಿಕೊಂಡಿದ್ದರು.
ಇದೀಗ ಎನ್‌ಸಿಎನಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುವ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಸೇರಿಕೊಳ್ಳಲು ರೆಡಿ ಆಗಿದ್ದಾರೆ. ಆದರೆ ಅವರು ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ಆಡುತ್ತಾರಾ ಅನ್ನೋದು ಇನ್ನೂ ಖಚಿತವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ : ಐಪಿಎಲ್ 2024 : ಆರ್‌ಸಿಬಿ ತಂಡಕ್ಕೆ ಮತ್ತೆ ವಿರಾಟ್ ಕೊಹ್ಲಿ ನಾಯಕ
ಹಾರ್ದಿಕ್ ಪಾಂಡ್ಯ ಈ ಬಾರಿಯ ವಿಶ್ವಕಪ್ ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚು ಹರಿಸಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ನಾಲ್ಕು ಪಂದ್ಯಗಳಲ್ಲಿ ಐದು ವಿಕೆಟ್ ಪಡೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ವನ್ನು ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯಕ್ಕೆ ಆಡಿಸುತ್ತೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಭಾರತ ಮುಂದಿನ ಪಂದ್ಯವನ್ನು ಶ್ರೀಲಂಕಾ ವಿರುದ್ದ ಆಡಲಿದೆ. ನಂತರದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಕೊನೆಯ ಪಂದ್ಯವನ್ನು ನೆದರ್‌ಲ್ಯಾಂಡ್ ತಂಡಗಳ ವಿರುದ್ದ ಸೆಣೆಸಾಡಲಿದೆ. ಆದರೆ ಹಾರ್ದಿಕ್ ಪಾಂಡ್ಯ ಯಾವ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದ್ದಾರೆ ಅನ್ನೋ ಇನ್ನೂ ಖಚಿತವಾಗಿಲ್ಲ.
ಇದನ್ನೂ ಓದಿ : KL Rahul Captain : ವಿಶ್ವಕಪ್‌ನಲ್ಲಿ ಟೀಂ ಇಂಡಿಯಾಕ್ಕೆ ಕನ್ನಡಿಗ ಕೆಎಲ್ ರಾಹುಲ್ ನಾಯಕ !
ಹಾರ್ದಿಕ್ ಪಾಂಡ್ಯ ಈ ಹಿಂದೆಯೂ ಕೂಡ ಗಾಯಗೊಂಡಿದ್ದು, ಹಲವು ಸಮಯದ ವರೆಗೆ ಅವರು ಕ್ರಿಕೆಟ್‌ನಿಂದ ದೂರವೇ ಉಳಿದಿದ್ದರು. ಆದ್ರೆ ಮತ್ತೆ ಕಂಬ್ಯಾಕ್ ಮಾಡಿರುವ ಹಾರ್ದಿಕ್ ಪಾಂಡ್ಯ ಅದ್ಬುತ ಆಟದ ಪ್ರದರ್ಶನ ನೀಡುತ್ತಿದ್ದಾರೆ. ಅದ್ರಲ್ಲೂ ಐಪಿಎಲ್ ಪಂದ್ಯಾವಳಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಡ್ಯ,, ತನ್ನ ನಾಯಕತ್ವದ ಮೊದಲ ಸರಣಿಯಲ್ಲಿಯೇ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ.
Hardik Pandya Will play in the India vs Sri Lanka match ICC Cricket World Cup 2023