Hardik Pandya : ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ಪಟ್ಟಕ್ಕೆ ಕುತ್ತು, ಹಾರ್ದಿಕ್ ಪಾಂಡ್ಯಗೆ ನಾಯಕ ಪಟ್ಟ

ಬೆಂಗಳೂರು: Hardik Pandya : ಮುಂಬರುವ ಐಸಿಸಿ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಯ ನಂತರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರ ನಾಯಕ ಪಟ್ಟಕ್ಕೆ ಕುತ್ತು ಬರಲಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಏಕದಿನ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆಯಿದೆ. 36 ವರ್ಷದ ರೋಹಿತ್ ಶರ್ಮಾ ಸದ್ಯ ಏಕದಿನ ಹಾಗೂ ಟೆಸ್ಟ್’ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಟಿ20 ತಂಡದ ನಾಯಕನಾಗಿದ್ದಾರೆ. ವಿಶ್ವಕಪ್ ನಂತರ ಟೀಮ್ ಇಂಡಿಯಾದ ವೈಟ್ ಬಾಲ್ ಕ್ರಿಕೆಟ್ ನಾಯಕತ್ವ ಹಾರ್ದಿಕ್ ಪಾಂಡ್ಯ ಹೆಗಲೇರಲಿದೆ ಎಂದು ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ಭವಿಷ್ಯ ನುಡಿದಿದ್ದಾರೆ.

ವಿಶ್ವಕಪ್ ನಂತರ ಹಾರ್ದಿಕ್ ಪಾಂಡ್ಯ ವೈಟ್ ಬಾಲ್ ಕ್ರಿಕೆಟ್’ನಲ್ಲಿ ಭಾರತ ತಂಡದ ನಾಯಕತ್ವ ಸ್ವೀಕರಿಸಬೇಕೆಂಬುದು ನನ್ನ ಅಭಿಪ್ರಾಯ. ವಿಶ್ವಕಪ್’ನಲ್ಲಿ ರೋಹಿತ್ ಶರ್ಮಾ ಅವರೇ ಟೀಮ್ ಇಂಡಿಯಾ ನಾಯಕನಾಗಿರಬೇಕು. ಅದರಲ್ಲಿ ಪ್ರಶ್ನೆಯೇ ಇಲ್ಲ” ಎಂದು ರವಿಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ರೋಹಿತ್ ಶರ್ಮಾ ಅವರು ವಿಶ್ವಕಪ್ ನಂತರ ಏಕದಿನ ತಂಡದ ನಾಯಕತ್ವ ತ್ಯಜಿಸುವ ಸಾಧ್ಯತೆಯಿದೆ. ವೆಸ್ಟ್ ಇಂಡೀಸ್ ಪ್ರವಾಸದ ನಂತರ ಟೆಸ್ಟ್ ತಂಡದ ನಾಯಕತ್ವವನ್ನೂ ಕಳೆದುಕೊಳ್ಳಲಿದ್ದಾರೆ ಎನ್ನಲಾಗ್ತಿದೆ. ಇತ್ತೀಚೆಗಷ್ಟೇ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 209 ರನ್’ಗಳ ಹೀನಾಯ ಸೋಲು ಕಂಡಿತ್ತು.

ಹೀಗಾಗಿ ವಿಶ್ವಕಪ್ ನಂತರ ಟೀಮ್ ಇಂಡಿಯಾ ನಾಯಕತ್ವದಲ್ಲಿ ದೊಡ್ಡ ಬದಲಾವಣೆಯಾಗುವ ಸಾಧ್ಯತೆಗಳಿವೆ. ಐಸಿಸಿ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಆರಂಭ ವಾಗಲಿದ್ದು, ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ಬಾರಿಯ ರನ್ನರ್ಸ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಅಕ್ಟೋಬರ್ 15ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನ (India Vs Pakistan) ಪಂದ್ಯಕ್ಕೂ ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣವೇ ಆತಿಥ್ಯ ವಹಿಸಲಿದೆ. ಅಕ್ಟೋಬರ್ 8ರದು ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ನಡೆಯುವ ಪಂದ್ಯದ ಮೂಲಕ 2 ಬಾರಿಯ ಚಾಂಪಿಯನ್ ಭಾರತ ತಂಡದ ವಿಶ್ವಕಪ್ ಅಭಿಯಾನ ಆರಂಭವಾಗಲಿದೆ.

ಇದನ್ನೂ ಓದಿ : KL Rahul – Asia Cup : ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಏಷ್ಯಾ ಕಪ್‌ನಲ್ಲೂ ಆಡುವುದು ಡೌಟ್!

ಇದನ್ನೂ ಓದಿ : ICC World Cup 2023 Schedule : ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಅಕ್ಟೋಬರ್ 15ಕ್ಕೆ ಅಹ್ಮದಾಬಾದ್’ನಲ್ಲಿ ಭಾರತ Vs ಪಾಕ್ ಪಂದ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Comments are closed.