ಲಾಹೋರ್: ಮಿನಿ ವಿಶ್ವಕಪ್ ಎಂದೇ ಖ್ಯಾತಿ ಪಡೆದಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ – 2025 ಟೂರ್ನಿಗೆ (ICC Champions Trophy 2025) ಪಾಕಿಸ್ತಾನ ಆತಿಥ್ಯ ವಹಿಸಲಿದ್ದು, ಟೂರ್ನಿ ಫೆಬ್ರವರಿ 19ರಿಂದ ಮಾರ್ಚ್ 9ರವರೆಗೆ ನಡೆಯಲಿದೆ. ಮಿನಿ ವಿಶ್ವಕಪ್’ನಲ್ಲಿ ಭಾರತ ತಂಡದ (Indian Cricket Team) ಪಂದ್ಯಗಳು ಲಾಹೋರ್’ನ ಗದ್ದಾಫಿ ಮೈದಾನದಲ್ಲಿ ನಡೆಯಲಿವೆ ಎಂದು ಟೂರ್ನಿಗೆ ಆತಿಥ್ಯ ವಹಿಸಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.

ಆದರೆ ಟೂರ್ನಿಯಲ್ಲಿ ಭಾರತ ತಂಡದ ಭಾಗವಹಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡುವುದನ್ನು ಭಾರತ ನಿಲ್ಲಿಸಿರುವ ಕಾರಣ, ಚಾಂಪಿಯನ್ಸ್ ಟ್ರೋಫಿಗೆ ಬಿಸಿಸಿಐ ತನ್ನ ತಂಡವನ್ನು ಕಳುಹಿಸುವ ಸಾಧ್ಯತೆಗಳು ಕಡಿಮೆ. ಅಂತಿಮವಾಗಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿರುವುದು ಕೇಂದ್ರ ಸರ್ಕಾರ. ಮುಂದಿನ ಜುಲೈ ತಿಂಗಳಲ್ಲಿ ಶ್ರೀಲಂಕಾದ ಕೊಲಂಬೊದಲ್ಲಿ ಐಸಿಸಿ ವಾರ್ಷಿಕ ಸಮ್ಮೇಳನ ನಡೆಯಲಿದ್ದು, ಆ ಹೊತ್ತಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಭಾಗವಹಿಸುವಿಕೆ ಕುರಿತು ಒಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.
ಇದನ್ನೂ ಓದಿ : Jasprit Bumrah Net Worth: ಜಸ್ಪ್ರೀತ್ ಬುಮ್ರಾ ಎಷ್ಟು ಶ್ರೀಮಂತ ? ಇಲ್ಲಿದೆ ಬುಮ್ರಾ ಸಂಪತ್ತಿನ ಕೋಟೆ ರಹಸ್ಯ !
ಭಾರತದ ಪಾಲ್ಗೊಳ್ಳುವಿಕೆ ಖಚಿತವಾಗದೇ ಇದ್ದರೂ, ಭದ್ರತಾ ದೃಷ್ಠಿಯಿಂದ ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್’ನಲ್ಲೇ ಆಯೋಜಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂದಾಗಿದೆ. ಒಂದು ವೇಳೆ ಭಾರತ ತಂಡದ ಪಾಕಿಸ್ತಾನದಲ್ಲಿ ಆಡಲು ನಿರಾಕರಿಸಿದರೆ, ಆಗ ಭಾರತದ ಪಂದ್ಯಗಳು ದುಬೈನಲ್ಲಿ ನಡೆಯುವ ಸಾಧ್ಯತೆಗಳಿವೆ. ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಕಳೆದ ಏಷ್ಯ ಕಪ್ ಟೂರ್ನಿಯಲ್ಲೂ ಭಾರತದ ಪಂದ್ಯಗಳನ್ನು ಶ್ರೀಲಂಕಾಗೆ ಶಿಫ್ಟ್ ಮಾಡಲಾಗಿತ್ತು.
ಇದನ್ನೂ ಓದಿ : Exclusive: ಕರ್ನಾಟಕ ಕ್ರಿಕೆಟ್ ತಂಡಕ್ಕೆ ಯರೇ ಗೌಡ ಕೋಚ್, ಪಿ.ವಿ ಶಶಿಕಾಂತ್‌ಗೆ ಗೇಟ್‌ಪಾಸ್!
https://x.com/Rnawaz31888/status/1800366699511693510
2005-06ರಲ್ಲಿ ಭಾರತ ಕ್ರಿಕೆಟ್ ತಂಡದ ಕೊನೆಯ ಬಾರಿ ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿಗಳನ್ನು ಆಡಿತ್ತು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡುವುದಕ್ಕೆ ಭಾರತ ಸರ್ಕಾರ ನಿರ್ಬಂಧ ಹೇರಿದೆ. ಆದರೆ ಪಾಕಿಸ್ತಾನ ತಂಡ 2012ರಲ್ಲಿ ಭಾರತ ಪ್ರವಾಸ ಕೈಗೊಂಡಿತ್ತು. ಅಷ್ಟೇ ಅಲ್ಲದೆ, 2011ರ ಐಸಿಸಿ ಏಕದಿನ ವಿಶ್ವಕಪ್, 2016ರ ಟಿ20 ವಿಶ್ವಕಪ್ ಹಾಗೂ 2023ರ ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ಆಡಲು ಭಾರತಕ್ಕೆ ಬಂದಿತ್ತು.

ಐಸಿಸಿ rankingನಲ್ಲಿ ಅಗ್ರ 8 ಸ್ಥಾನ ಪಡೆಯುವ ತಂಡಗಳು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಆಡಲಿವೆ. ಟೂರ್ನಿಯ ಉದ್ಘಾಟನಾ ಪಂದ್ಯ ಫೆಬ್ರವರಿ 19ರಂದು ಕರಾಚಿಯಲ್ಲಿ ನಡೆಯಲಿದ್ದು, ಮಾರ್ಚ್ 9ರಂದು ನಡೆಯುವ ಫೈನಲ್ ಪಂದ್ಯಕ್ಕೆ ಲಾಹೋರ್ ಆತಿಥ್ಯ ವಹಿಸಲಿದೆ. ಇಂಗ್ಲೆಂಡ್ ಆತಿಥ್ಯದಲ್ಲಿ ನಡೆದಿದ್ದ 2017ರ ಐಸಿಸಿ ಟಾಂಪಿಯನ್ಸ್ ಟ್ರೋಫಿ ಫೈನಲ್’ನಲ್ಲಿ ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡವನ್ನು ಸೋಲಿಸಿ ಮೊದಲ ಬಾರಿ ಮಿನಿ ವಿಶ್ವಕಪ್’ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು. 2017ರ ನಂತರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆದಿಲ್ಲ.
ಇದನ್ನೂ ಓದಿ : Exclusive: ಕುಕ್ಕೆ ಸುಬ್ರಮಣ್ಯಕ್ಕೆ ಪತ್ನಿ ಸಮೇತ ಭೇಟಿ ನೀಡಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್
ICC Champions Trophy 2025 Mini World Cup in Pakistan next year Lahore to host all India matches