India Vs Ireland T20 World Cup 2024 : ಭಾರತದ ವಿಶ್ವಕಪ್:ಅಭಿಯಾನ ಇಂದು ಆರಂಭ, ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಹೀಗಿದೆ ಪ್ಲೇಯಿಂಗ್ XI

India Vs Ireland T20 World Cup : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ (ICC t20 World Cup 2024) ಭಾರತ ತಂಡದ ಅಭಿಯಾನ ಇಂದು ಆರಂಭವಾಗಲಿದ್ದು ರೋಹಿತ್ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ, ಐರ್ಲೆಂಡ್ ತಂಡವನ್ನು ಎದುರಿಸಲಿದೆ.

India Vs Ireland T20 World Cup : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ (ICC t20 World Cup 2024) ಭಾರತ ತಂಡದ ಅಭಿಯಾನ ಇಂದು ಆರಂಭವಾಗಲಿದ್ದು ರೋಹಿತ್ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ, ಐರ್ಲೆಂಡ್ ತಂಡವನ್ನು ಎದುರಿಸಲಿದೆ. 2013ರಿಂದ ಸತತವಾಗಿ ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗುತ್ತಾ ಬಂದಿರುವ ಟೀಮ್ ಇಂಡಿಯಾ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದೊಂದಿಗೆ ಟಿ20 ವಿಶ್ವಕಪ್ ಅಖಾಡಕ್ಕೆ ಕಾಲಿಟ್ಟಿದೆ.

ICC Mens T20 World Cup 2024 India vs Ireland live Score
Image Credit to Original Source

ಇದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಕೊನೆಯ ಟಿ20 ವಿಶ್ವಕಪ್ ಟೂರ್ನಿಯಾಗಿದೆ. 2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ಧೋನಿ ಪಡೆಯ ಸದಸ್ಯನಾಗಿದ್ದ ರೋಹಿತ್ ಶರ್ಮಾ ನಂತರದ ಎಲ್ಲಾ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಆಡಿದ ಭಾರತದ ಏಕೈಕ ಆಟಗಾರನೆನಿಸಿದ್ದಾರೆ.

ಇದನ್ನೂ ಓದಿ : Virat Kohli : ಅವರು ನಿನ್ನ ಕನಸಿಗೆ ಕೊಳ್ಳಿ ಇಟ್ಟರು, ಅವರನ್ನು ಕ್ಷಮಿಸಿ ಬಿಡು ವಿರಾಟ್..’’

ಜೂನ್ 9ರಂದು ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ, ಕೆನಡಾ, ಅಮೆರಿಕ ಮತ್ತು ಐರ್ಲೆಂಡ್ ತಂಡಗಳ ಜೊತೆ ಗ್ರೂಪ್ ’ಎ’ನಲ್ಲಿ ಸ್ಥಾನ ಪಡೆದಿದೆ.

ಭಾರತ Vs ಐರ್ಲೆಂಡ್ ಪಂದ್ಯ
ಪಂದ್ಯ ಆರಂಭ: ರಾತ್ರಿ 8ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ನಾಸೌ ಕೌಂಟಿ ಇಂಟರ್ ನ್ಯಾಷನಲ್ ಸ್ಟೇಡಿಯಂ, ನ್ಯೂ ಯಾರ್ಕ್.
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ ಹಾಟ್ ಸ್ಟಾರ್

ICC Mens T20 World Cup 2024 India vs Ireland live Score
Image Credit to Original Source

ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್, ಶಿವಂ ದುಬೆ, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

ಇದನ್ನೂ ಓದಿ : T20 World Cup Nosthush Kenjige: ಅಮೆರಿಕ ಪರ ಆಡುತ್ತಿರುವ ಚಿಕ್ಕಮಗಳೂರು ಪ್ರತಿಭೆಗೆ ‘ನಂದಿನಿ’ ಸ್ಪಾನ್ಸರ್ !

Head to Head
ಒಟ್ಟು ಟಿ20 ಪಂದ್ಯಗಳು: 07
ಭಾರತದ ಗೆಲುವು: 07
ಐರ್ಲೆಂಡ್ ಗೆಲುವು: 00

ಐಸಿಸಿ ಟಿ20 ವಿಶ್ವಕಪ್ 2024: ಭಾರತದ ಲೀಗ್ ಪಂದ್ಯಗಳ ವೇಳಾಪಟ್ಟಿ (ICC Men’s T20 World Cup 2024)
ಜೂನ್ 05: ಭಾರತ Vs ಐರ್ಲೆಂಡ್ (ನ್ಯೂಯಾರ್ಕ್, ರಾತ್ರಿ 7.30ಕ್ಕೆ)
ಜೂನ್ 09: ಭಾರತ Vs ಪಾಕಿಸ್ತಾನ (ನ್ಯೂಯಾರ್ಕ್, ರಾತ್ರಿ 8ಕ್ಕೆ)
ಜೂನ್ 12: ಭಾರತ Vs ಅಮೆರಿಕ (ನ್ಯೂಯಾರ್ಕ್, ರಾತ್ರಿ 8ಕ್ಕೆ)
ಜೂನ್ 15: ಭಾರತ Vs ಕೆನಡಾ (ಲಾಡರ್’ಹಿಲ್, ರಾತ್ರಿ 8ಕ್ಕೆ)

ICC Mens T20 World Cup 2024 India vs Ireland live Score

Comments are closed.