ICC t20 World Cup 2024 India vs Canada weather Report : ಫ್ಲೋರಿಡಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ (ICC T20 World Cup 2024) ಈಗಾಗಲೇ ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟಿರುವ ಟೀಮ್ ಇಂಡಿಯಾ, ‘ಎ‘ ಗುಂಪಿನ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಶನಿವಾರ ಕೆನಡಾ ತಂಡವನ್ನು (India Vs Canada) ಎದುರಿಸಲಿದೆ. ‘ಎ‘ ಗ್ರೂಪ್‘ನಲ್ಲಿ ಆಡಿರುವ ಮೂರೂ ಪಂದ್ಯಗಳನ್ನು ಗೆದ್ದು ಮುಂದಿನ ಹಂತಕ್ಕೆ ಅರ್ಹತೆ ಪಡೆದಿರುವ ಭಾರತಕ್ಕೆ ಈ ಪಂದ್ಯ ಔಪಚಾರಿಕವಾಗಿದೆ.

ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 8 ವಿಕೆಟ್’ಗಳಿಂದ ಗೆದ್ದಿದ್ದ ಭಾರತ, 2ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 6 ರನ್ ಗೆಲುವು ಸಾಧಿಸಿತ್ತು. ಮೂರನೇ ಲೀಗ್ ಪಂದ್ಯದಲ್ಲಿ ಆತಿಥೇಯ ಅಮೆರಿಕ ವಿರುದ್ಧ 7 ವಿಕೆಟ್’ಗಳಿಂದ ಗೆದ್ದಿರುವ ಟೀಮ್ ಇಂಡಿಯಾ ಸತತ 3 ಗೆಲುವುಗಳೊಂದಿಗೆ ‘ಎ’ ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟಿದೆ. ಮತ್ತೊಂದೆಡೆ ಕೆನಡಾ ತಂಡ 3 ಪಂದ್ಯಗಳಲ್ಲಿ ಐರ್ಲೆಂಡ್ ವಿರುದ್ಧ ಗೆದ್ದು, ಅಮೆರಿಕ ಮತ್ತು ಪಾಕಿಸ್ತಾನ ವಿರುದ್ಧ ಸೋಲು ಕಂಡಿದೆ.
ಮೊದಲ ಮೂಲೂ ಪಂದ್ಯಗಳಲ್ಲಿ ಎಡವಿರುವ ಟೀಮ್ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಅವರ ಪಾಲಿಗೆ ಈ ಪಂದ್ಯ ನಿರ್ಣಾಯಕವಾಗಿದೆ. ಐರ್ಲೆಂಡ್ ವಿರುದ್ಧ ಒಂದು ರನ್ನಿಗೆ ಔಟಾಗಿದ್ದ ಕೊಹ್ಲಿ, ಪಾಕಿಸ್ತಾನ ವಿರುದ್ಧ 4 ರನ್ ಹಾಗೂ ಅಮೆರಿಕ ವಿರುದ್ಧ ಶೂನ್ಯಕ್ಕೆ ಔಟಾಗಿದ್ದರು.
ಇದನ್ನೂ ಓದಿ : T20 World Cup Super-8: ಸೂಪರ್-8ನಲ್ಲಿ ಟೀಮ್ ಇಂಡಿಯಾ ಎದುರಾಳಿಗಳು ಇವರೇ !
ಪಂದ್ಯಕ್ಕೆ ಮಳೆಯ ಭೀತಿ:
ಫ್ಲೋರಿಡಾದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹವಾಮಾನ ವರದಿಯ ಪ್ರಕಾರ ಶನಿವಾರವೂ ಮಳೆ ಸುರಿಯುವ ಸಾಧ್ಯತೆಯಿದೆ.
ಲಾಡರ್’ಹಿಲ್ ಮೈದಾನದಲ್ಲಿ ಇದುವರೆಗೆ ನಡೆದಿರುವ 16 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 11 ಬಾರಿ ಗೆದ್ದಿದೆ.

ಭಾರತ Vs ಕೆನಡಾ ಪಂದ್ಯ (India Vs Canada)
ಪಂದ್ಯ ಆರಂಭ: ರಾತ್ರಿ 8ಕ್ಕೆ
ಸ್ಥಳ: ಸೆಂಟ್ರಲ್ ಬ್ರೊವಾರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ, ಲಾಡರ್’ಹಿಲ್; ಫ್ಲೋರಿಡಾ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ ಹಾಟ್ ಸ್ಟಾರ್
ಇದನ್ನೂ ಓದಿ : ಟಿ20 ವಿಶ್ವಕಪ್‌ಗಾಗಿ 106 ದಿನಗಳಲ್ಲಿ ರೆಡಿಯಾಗಿದ್ದ ನ್ಯೂ ಯಾರ್ಕ್ ಮೈದಾನ ಸದ್ಯದಲ್ಲೇ ನೆಲಸಮ !
ಕೆನಡಾ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:
1. ರೋಹಿತ್ ಶರ್ಮಾ (ನಾಯಕ)
2. ವಿರಾಟ್ ಕೊಹ್ಲಿ
3. ರಿಷಭ್ ಪಂತ್ (ವಿಕೆಟ್ ಕೀಪರ್)
4. ಸೂರ್ಯಕುಮಾರ್ ಯಾದವ್
5. ಹಾರ್ದಿಕ್ ಪಾಂಡ್ಯ
6. ಸಂಜು ಸ್ಯಾಮ್ಸನ್
7. ರವೀಂದ್ರ ಜಡೇಜ
8. ಅಕ್ಷರ್ ಪಟೇಲ್
9. ಅರ್ಷದೀಪ್ ಸಿಂಗ್
10. ಜಸ್ಪ್ರೀತ್ ಬುಮ್ರಾ
11. ಮೊಹಮ್ಮದ್ ಸಿರಾಜ್
ಇದನ್ನೂ ಓದಿ : ಟಿ20 ವಿಶ್ವಕಪ್‌ಗಾಗಿ 106 ದಿನಗಳಲ್ಲಿ ರೆಡಿಯಾಗಿದ್ದ ನ್ಯೂ ಯಾರ್ಕ್ ಮೈದಾನ ಸದ್ಯದಲ್ಲೇ ನೆಲಸಮ !
ICC t20 World Cup 2024 India vs Canada weather Report Team India Playing XI complete details