India vs England : 10 ವರ್ಷಗಳ ನಂತರ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ಭಾರತ

ICC t20 World cup 2024 India vs England : ಗಯಾನ: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್ (ICC t20 World Cup 2025) ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ. ಗಯಾನದ ಪ್ರಾವಿಡೆನ್ಸ್ ಮೈದಾನದಲ್ಲಿ ಗುರುವಾರ ರಾತ್ರಿ ನಡೆದ ಏಕಪಕ್ಷೀಯ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ 68 ರನ್’ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಸುದೀರ್ಘ 10 ವರ್ಷಗಳ ನಂತರ ಭಾರತ ಟಿ20 ವಿಶ್ವಕಪ್’ನಲ್ಲಿ ಫೈನಲ್’ಗೆ ಲಗ್ಗೆ ಇಟ್ಟಿತು.

ICC t20 World cup 2024 India vs England : ಗಯಾನ: ರೋಹಿತ್ ಶರ್ಮಾ ನಾಯಕತ್ವದ ಭಾರತೀಯ ಕ್ರಿಕೆಟ್‌ ತಂಡ ( Indian Cricket Team) ಐಸಿಸಿ ಟಿ20 ವಿಶ್ವಕಪ್ (ICC t20 World Cup 2024) ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ. ಗಯಾನದ ಪ್ರಾವಿಡೆನ್ಸ್  ಮೈದಾನ (Guyana Providence Stadium) ದಲ್ಲಿ ಗುರುವಾರ ರಾತ್ರಿ ನಡೆದ ಏಕಪಕ್ಷೀಯ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ 68 ರನ್’ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಸುದೀರ್ಘ 10 ವರ್ಷಗಳ ನಂತರ ಭಾರತ ಟಿ20 ವಿಶ್ವಕಪ್’ನಲ್ಲಿ ಫೈನಲ್’ಗೆ ಲಗ್ಗೆ ಇಟ್ಟಿತು.

ICC t20 World cup 2024 India vs England Semifinal India enter final
Image Credit to Original Source

ಇದಕ್ಕೂ ಮೊದಲು ಭಾರತ ಕೊನೆಯ ಬಾರಿ ಟಿ20 ವಿಶ್ವಕಪ್ ಫೈನಲ್ ತಲುಪಿದ್ದು 2014ರಲ್ಲಿ. ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ (Srilanka)  ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು. 10 ವರ್ಷಗಳ ನಂತರ ಮತ್ತೆ ಫೈನಲ್ ಪ್ರವೇಶಿಸಿರುವ ಭಾರತಕ್ಕೆ 2ನೇ ಬಾರಿ ಚುಟುಕು ವಿಶ್ವಕಪ್ ಗೆಲ್ಲುವ ಅವಕಾಶ ಎದುರಾಗಿದೆ.

ಇಂಗ್ಲೆೆಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ನಾಯಕ ರೋಹಿತ್ ಶರ್ಮಾ (Rohit Sharma)  ಮತ್ತು ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಆಕರ್ಷಕ ಬ್ಯಾಟಿಂಗ್ ಬಲದಿಂದ ನಿಗದಿತ 20 ಓವರ್’ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆ ಹಾಕಿತು. ಕ್ಯಾಪ್ಟನ್ ರೋಹಿತ್ 39 ಎಸೆತಗಳಲ್ಲಿ 57 ರನ್ ಸಿಡಿಸಿದರೆ, ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 47 ರನ್ ಗಳಿಸಿದರು. ಈ ಮುಂಬೈ ಜೋಡಿ 3ನೇ ವಿಕೆಟ್’ಗೆ 73 ರನ್’ಗಳಷ್ಚಪ ಜೊತೆಯಾಟವಾಡಿದ್ದರಿಂದ ಭಾರತ ಉತ್ತಮ ಮೊತ್ತ ಕಲೆ ಹಾಕುವಂತಾಯಿತು.

ICC t20 World cup 2024 India vs England Semifinal India enter final
Image Credit to Original Source

ಇದನ್ನೂ ಓದಿ :Women’s Test: ಹರಿಣ ಬೇಟೆಗೆ ರೆಡಿಯಾದ ಭಾರತದ ವನಿತೆಯರು, ಮಿಂಚುತ್ತಾಳಾ ಮೈಸೂರು ಹುಡುಗಿ ?

ನಂತರ 172 ರನ್’ಗಳ ಟಾರ್ಗೆಟ್ ಬೆನ್ನಟ್ಟಿದ್ದ ಇಂಗ್ಲೆಂಡ್ ಭಾರತೀಯ ಬೌಲರ್’ಗಳ ಮಾರಕ ದಾಳಿಗೆ ತತ್ತರಿಸಿ 16.4 ಓವರ್’ಗಳಲ್ಲಿ ಕೇವಲ 103 ರನ್’ಗಳಿಗೆ ಆಲೌಟಾಯಿತು. ಇಂಗ್ಲೆಂಡ್ (England Cricket team) ಮೇಲೆ ಮಾರಕವಾಗಿ ಎರಗಿದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ (Axar Patel)  23 ರನ್ನಿಗೆ 3 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ 19 ರನ್ನಿಗೆ 3 ವಿಕೆಟ್ ಕಬಳಿಸಿದರು. ಇದರೊಂದಿಗೆ ಭಾರತ ತಂಡ 2022ರ ಟಿ20 ವಿಶ್ವಕಪ್ ಸೆಮಿಫೈನಲ್’ನಲ್ಲಿ ಇಂಗ್ಲೆಂಡ್ ವಿರುದ್ಧ ಅನುಭವಿಸಿದ್ದ ಹೀನಾಯ ಸೋಲಿಗೆ ಸೇಡು ತೀರಿಸಿಕೊಂಡಿತು. ಶನಿವಾರ ಬಾರ್ಬೇಡೋಸ್’ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬಲಾಢ್ಯ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ : India Vs Zimbabwe Series : ಜಿಂಬಾಬ್ವೆ ವಿರುದ್ಧದ ಟಿ20 ಸರಣಿ : ಭಾರತ ತಂಡಕ್ಕೆ ಗಿಲ್ ನಾಯಕ

ICC t20 World cup 2024 India vs England Semifinal India enter final

Comments are closed.